ಅಧ್ಯಯನ ಪ್ರವಾಸ ವೆಚ್ಚಕ್ಕೆ ಸಹಾಯಧನ
ಉಡುಪಿ, ಜೂನ್ 14: 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಡಿ.ಎಡ್, ಬಿ.ಎಡ್ ಮತ್ತು ಎಲ್.ಎಲ್.ಬಿ ಮೊದಲಾದ ತಾಂತ್ರಿಕ ಮತ್ತು ವೃತ್ತಿಪರ ವಿಷಯಗಳಲ್ಲಿ ಪ್ರವಾಸವು ಕಡ್ಡಾಯವಾಗಿದ್ದರೆ ಅಂತಹ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು 1000 ರೂ. ಸಹಾಯಧನವನ್ನು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನೀಡಲಾಗುವುದು. ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ 18000 ರೂ. ಒಳಗಿರಬೇಕು. ಅರ್ಹ ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿಮಾಡಿ, […]
ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಜೂನ್ 14: ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ, ಬನ್ನಂಜೆ, ಬಾರ್ಕೂರು, ಮಣಿಪಾಲ, ಆದಿ ಉಡುಪಿ, ಕಿನ್ನಿಮೂಲ್ಕಿ, ಬಡಗಬೆಟ್ಟು, ಕಾಪು, ಹಿರಿಯಡ್ಕ, ಬಲಾಯಿಪಾದೆಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್/ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ 1, 2ಎ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ, […]
ಮಂಗಳೂರು: ಕಡಲ್ಕೊರೆತ ಪ್ರದೇಶಗಳಿಗೆ ಸಚಿವ ಖಾದರ್ ಭೇಟಿ
ಮಂಗಳೂರು: ಉಳ್ಳಾಲ ಭಾಗದದಲ್ಲಿ ಕಡಲ್ಕೊರೆತಕ್ಕೆ ಒಳಗಾದ ವಿವಿಧ ಭಾಗಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಭೇಟಿ ನೀಡಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿ, ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಈಗಾಗಲೇ ಉಲ್ಲಾಳ ಸುತ್ತಮುತ್ತಲ ಪ್ರದೇಶಗಳಾದ ಕೈಕೋ, ಕಿಲ್ಲೆರೀಯಾ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಹಲವು ಮನೆಗಳು ಅಪಾಯದಲ್ಲಿವೆ.
ಬಂಟ್ವಾಳ: ರಮಾನಾಥ ರೈ ಅವರಿಂದ ಡ್ಯಾಂ ಕಾಮಗಾರಿ ವೀಕ್ಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ದೋಟ ಹಾಗೂ ಸಂಗಬೆಟ್ಟು ಗ್ರಾಮದ ಮಂಜನ್ದೊಟ್ಟುವಿನಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಡ್ಯಾಮ್ ಕಾಮಗಾರಿಯನ್ನು ಶುಕ್ರವಾರ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ವೀಕ್ಷಿಸಿದರು. ಈ ಸಂದರ್ಭ ಮಾತನಾಡಿದ ಅವರು ೩ ಜಿಲ್ಲೆಗೆ ಸೇರಿರುವ ಈ ಪಶ್ಚಿಮ ವಾಹಿನಿ ಯೋಜನೆ ಸುಮಾರು ೨೬೫ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಅದರಲ್ಲಿ ೮೦ ಕೋಟಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಗೆ ೩೫ ಜೋಟಿ ಅನುದಾನ […]
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: 7 ಮಂದಿ ಗೈರು
ಉಡುಪಿ, ಜೂನ್ 14: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 27 ಮಂದಿ ಪರೀಕ್ಷೆ ಬರೆದಿದ್ದು, 7 ಮಂದಿ ಗೈರಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಪರೀಕ್ಷೆಗೆ ನೊಂದಾಯಿಸಿದ್ದ 4 ಮಂದಿ ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಬ್ಬರು ಗೈರು ಹಾಜರಾಗಿದ್ದಾರೆ. ಕಂಪ್ಯೂಟರ್ ಸೈನ್ಸ್ ಪರೀಕ್ಷೆಗೆ 30 ಮಂದಿ ಹೆಸರು ನೊಂದಾಯಿಸಿದ್ದು, 24 ಮಂದಿ ಪರೀಕ್ಷೆ ಬರೆದಿದ್ದು, 6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.