ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯ
ಉಡುಪಿ, ಜೂನ್ 17: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದು, ಒಂದೇಕಡೆ ಹೊಂದಿಕೊಂಡಿರುವಂತೆ 2 ರಿಂದ 5 ಎಕರೆ ಜಮೀನು ಹೊಂದಿರಬೇಕು. 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರದ […]
ಮಕ್ಕಳ ಸಹಾಯವಾಣಿ ಜಾಗೃತಿ ಕಾರ್ಯಕ್ರಮಗಳ ಮಾಹಿತಿ ನೀಡಿ- ಜಿಲ್ಲಾಧಿಕಾರಿ
ಉಡುಪಿ : ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದಿಂದ ರಕ್ಷಿಸುವ ಸಲುವಾಗಿ ಮತ್ತು ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿಯನ್ನು 10 ದಿನಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ಮಕ್ಕಳ ಸಹಾಯವಾಣಿಯ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಮಕ್ಕಳು ಹಾಗೂ ಪೋಷಕರಿಗೆ ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆ […]
ವೈದ್ಯರ ಮೇಲೆ ಹಲ್ಲೆ ಖಂಡಿಸಿ ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು: ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರತ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಸೋಮವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ಚಿಕಿತ್ಸಾ ವಿಭಾಗದ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಮಂಗಳೂರಿನ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ನಗರದ ಐಎಂಎ ಸಭಾಂಗಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಖಾಸಗಿ ವೈದ್ಯರು ಭಾಗಿಯಾಗಿದ್ದರು. ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡ ಕಾರಣ ವಿವಿಧ ಭಾಗದಿಂದ ಚಿಕಿತ್ಸೆಗೆ ಆಗಮಿಸಿದ ಹೊರರೋಗಿಗಳು […]
ಉಡುಪಿ: ಸ್ಮರಣಾಸಂಚಿಕೆ ಬಿಡುಗಡೆ
ಉಡುಪಿ: ಶ್ರೀ ಕೃಷ್ಣ ಮಠದದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ವಿರಾಟಪರ್ವಪ್ರವಚನಮಂಗಲ ಮತ್ತು ಷಷ್ಠಿಪೂರ್ತಿ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ “ವಿಶ್ವಾರ್ಪಣಂ” ಅನ್ನು ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಯೋಜಿಸಿದ್ದು, ಇದರ ಅಂಗವಾಗಿ ರಾಜಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅದಮಾರು ಶ್ರೀಪಾದರು ಈ ತನಕ ರಾಘವೇಂದ್ರ ವಿಜಯ,ಶ್ರೀಕೃಷ್ಣ ಲೀಲಾಮೃತ ವಿಷಯಗಳ ಬಗ್ಗೆ ನೀಡಿದ ಪ್ರವಚನಗಳನ್ನು ಸಂಗ್ರಹಿಸಿ ತತ್ವ ಸಂಶೋಧನಾ ಸಂಸತ್ ನಿಂದ ಪ್ರಕಾಶಿಸಲ್ಪಟ್ಟ 2 ಕೃತಿಗಳು ,ಶ್ರೀಪಾದರ ಸಂಸ್ಥೆಗಳ, 60 […]
ಉಡುಪಿ ಆಚಾರ್ಯ ಏಸ್: ಜೂ.22ರಿಂದ ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ ಆರಂಭ
ಉಡುಪಿ: 9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿ.ಯು.ಸಿ., ಸಿ.ಇ.ಟಿ., ನೀಟ್, ಜೆ.ಇ.ಇ. ಮೇನ್ಸ್ , ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್ ಏಸ್ ಸಂಸ್ಥೆಯು ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಗರಿಷ್ಠ ಫಲಿತಾಂಶಕ್ಕಾಗಿ ನೂತನ ರೀತಿಯ ತರಬೇತಿಯನ್ನು ಹಮ್ಮಿಕೊಂಡಿದೆ. ಐಬಿಪಿಎಸ್ ಹಾಗೂ ಇತರೇ ಬ್ಯಾಂಕ್ಗಳು ಅಯೋಜಿಸಲಿರುವ ಎಸ್ಬಿಐ ಪಿ.ಒ. ಮತ್ತು ಕ್ಲರ್ಕ್ ಹುದ್ದೆಗಳಿಗಾಗಿ ಪರೀಕ್ಷೆಗಳು ಜರಗಲಿರುವುದರಿಂದ ಸಂಜೆಯ ಮತ್ತು ವಾರಾಂತ್ಯದ ತರಗತಿಗಳು ಜೂ. 22ರಿಂದ ಆರಂಭ ವಾಗಲಿದೆ. ವಾರಾಂತ್ಯದ ತರಗತಿಗಳು ಶನಿವಾರ […]