ಮಂಗಳೂರು: ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.1ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ‘ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ೨೦೧೯’ರ ಆಮಂತ್ರಣ ಪತ್ರಿಕೆ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಪತ್ರಿಕಾ ಬರವಣಿಗೆ ಮೂಲಕ ನಾಡನ್ನು ತಿದ್ದುವ, ಜನರಲ್ಲಿ ತಿಳಿವಳಿಕೆ ಮೂಡಿಸುವ ಪತ್ರಕರ್ತರಿಗೆ ಇಂದು ರಕ್ಷಣೆ ಬೇಕಾಗಿದೆ. ಒಳ್ಳೆಯ ವಿಚಾರವನ್ನು ಸಮಾಜದ ಮುಂದಿಡುವ ಜತೆಗೆ […]

ಮಂಗಳೂರು: ಕಡಲ್ಕೊರೆತದ ಪ್ರದೇಶಗಳಿಗೆ ಸಚಿವ ಆರ್.ವಿ. ದೇಶಪಾಂಡೆ ಭೇಟಿ

ಮಂಗಳೂರು: ಕೆಲ ದಿನಗಳ ಹಿಂದೆ ವಾಯುಬಾರ ಕುಸಿತದ ಪರಿಣಾಮವಾಗಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡು ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ‌ ನೀಡಿದರು. ಕಡಲ ತೀರದ ಕೆಲ ಮನೆಗಳಿಗೆ ಹಾನಿಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಕಡಲ್ಕೊರೆತದಿಂದ ತೊಂದರೆಗೊಳಗಾದ ಜನರಿಗೆ ಹೆಚ್ಚಿನ ಪರಿಹಾರದ ಭರವಸೆ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಉಡುಪಿ:ಬಜೆ ಡ್ಯಾಂ ಗೆ ರಘುಪತಿ ಭಟ್ ಭೇಟಿ

ಉಡುಪಿ:  ಶಾಸಕ ಕೆ ರಘುಪತಿ ಭಟ್  ಮಂಗಳವಾರ ಬಜೆ ಡ್ಯಾಂ ಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು. ಮಳೆ ಬಂದಿರುವುದರಿಂದ ಬಜೆ ಡ್ಯಾಂ ನ ಒಳಹರಿವು ಹೆಚ್ಚಾಗಿದ್ದು 2.70ರಷ್ಟಾಗಿದೆ. ಆದ್ದರಿಂದ ನಾಳೆ ಸಂಜೆಯ ನಂತರ ನಗರಸಭಾ ವ್ಯಾಪ್ತಿಯಲ್ಲಿ ದಿನದ ೨೪ ಗಂಟೆಯೂ ನೀರು ಕೊಡುವ ವ್ಯವಸ್ಥೆಯನ್ನು ಮತ್ತೆ ಮುಂದುವರೆಸಲಾಗುತ್ತದೆ. ನೀರು ಯಥಾವತ್ತಾಗಿ ಬರುತ್ತಿರುವುದರಿಂದ ನಾಳೆ ಸಂಜೆಯ ವೇಳೆ ನೀರು ಬಿಡುವ ಬಗ್ಗೆ  ತಿಳಿಸಿದರು. ಕಳೆದ ಒಂದು ತಿಂಗಳಿನಿಂದ ಉಡುಪಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ […]

ಪುರುಷೋತ್ತಮ ಬಿಳಿಮಲೆಗೆ ಪೊಳಲಿ ಶೀನಪ್ಪ ಹೆಗ್ಡೆ ಪ್ರಶಸ್ತಿ

ಉಡುಪಿ: ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಿಂದ ಕೊಡಮಾಡುವ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್‌.ಆರ್‌. ಹೆಗ್ಡೆ ಪ್ರಶಸ್ತಿಗೆ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ, ಜಾನಪದ ತಜ್ಞ ಹಾಗೂ ಸಂಸ್ಕೃತಿ ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₨20 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ತಿಳಿಸಿದ್ದಾರೆ.

ವಿಶ್ವಪ್ರಿಯತೀರ್ಥ ಶ್ರೀಪಾದರಿಗೆ ಯಕ್ಷಗಾನ ಕಲಾರಂಗದ ವತಿಯಿಂದ ಗೌರವಾರ್ಪಣೆ

ಉಡುಪಿ: ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರ ಷಷ್ಠಿಪೂರ್ತಿ ಸಂದರ್ಭದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದಿಂದ ಆಯೋಜಿಸಿದ ವಿಶ್ವಾರ್ಪಣಂ ಸಮಾರಂಭದಲ್ಲಿ ಯಕ್ಷಗಾನ ಕಲಾರಂಗ ಸಂಸ್ಥೆಯ ವತಿಯಿಂದ ಶ್ರೀಗಳನ್ನು ಅಭಿನಂದಿಸಲಾಯಿತು. 15 ವರ್ಷದ ಹಿಂದೆ ವಿದ್ಯಾಪೋಷಕ್ ಸಂಸ್ಥೆಯನ್ನು ಜ್ಯೋತಿಬೆಳಗಿಸಿ ಉದ್ಘಾಟಿಸಿ, ನಿರಂತರವಾಗಿ ಸಂಸ್ಥೆಯನ್ನು ಪೋತ್ಸಾಹಿಸುತ್ತಾ ಬಂದ ಶ್ರೀಗಳನ್ನು ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್ ರಾವ್ ಫಲವಸ್ತು ಅರ್ಪಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠಾಧೀಶರಾದವಿದ್ಯಾಧೀಶತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯ ಯತಿಗಳಾದ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪಲಿಮಾರು ಮಠದ […]