ದಬ್ಬಾಳಿಕೆ ತಡೆಯಿರಿ: ಸಂಸ್ಕೃತ ಉಳಿಸಿ :ಡಾ. ಮಧುಸೂಧನ ಅಡಿಗ
ಉಡುಪಿ: ಸಂಸ್ಕೃತ ಭಾಷೆಯ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಾ ಬಂದಿದ್ದು, ಅದನ್ನು ತಡೆಯುವ ಕೆಲಸ ಸಂಸ್ಕೃತ ಪಂಡಿತರಿಂದ ಆಗಬೇಕಾಗಿದೆ. ಸಂಸ್ಕೃತ ಭಾಷೆಯಲ್ಲಿ ಕಾಲ ಕಾಲಕ್ಕೆ ಬದಲಾವಣೆ ಆಗುತ್ತಿದ್ದರೆ, ಇಂದು ಮಹಾಭಾರತ, ರಾಮಾಯಣ ಗ್ರಂಥಗಳು ವಿವಿಧ ಭಾಷೆಯಲ್ಲಿ ಲಭಿಸುತ್ತಿದ್ದವು ಎಂದು ಆದಿಚುಂಚನಗಿರಿ ಸಂಸ್ಕೃತ ಕಾಲೇಜಿನ ಪ್ರಾಧ್ಯಾಪಕ ಡಾ.ಮಧುಸೂಧನ ಅಡಿಗ ಹೇಳಿದರು.ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಹಾಗೂ ಮಂಗಳೂರುವಿಶ್ವವಿದ್ಯಾಲಯದ ಸಂಸ್ಕೃತ ಶಿಕ್ಷಕ ಸಂಘದ ಸಹಯೋಗದಲ್ಲಿ ಕಾಲೇಜಿನ ಮಿನಿಆಡಿಟೋರಿಯಂನಲ್ಲಿ ಮಂಗಳವಾರ ನಡೆದ ಪ್ರಥಮ ಸೆಮಿಸ್ಟರ್ ಪದವಿ ತರಗತಿಗಳ ನೂತನಪಠ್ಯಪುಸಕ್ತಗಳ […]
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಬಗ್ಗೆ ಜಿಲ್ಲೆಯ ರೈತರಿಗೆ ಮಾಹಿತಿ ಇಲ್ಲ:ಸತ್ಯನಾರಾಯಣ ಉಡುಪ
ಉಡುಪಿ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ರೈತರಿಗೆ ಬಹಳಷ್ಟು ಅನುಕೂಲಕರವಾಗಿದೆ. ಆದರೆ ಜಿಲ್ಲೆಯ ರೈತರಿಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣ ಈ ಯೋಜನೆಯಿಂದ ಹಿಂದೆ ಸರಿದಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಹೇಳಿದರು.ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ನವೀನಚಂದ್ರಜೈನ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಅವರುಮಾತನಾಡಿದರು.ಪ್ರಸ್ತುತ ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳಿಗೆ ಮಾತ್ರ […]
ಉಡುಪಿ: ಬಾವಿಯಲ್ಲಿ ಶವ ಪತ್ತೆ
ಉಡುಪಿ, ಜೂ.18: ಬನ್ನಂಜೆಯ ಗೋವಿಂದ ಆಚಾರ್ಯ ಮಾರ್ಗದ ಗರಡಿ ಸನಿಹದ ಖಾಸಗಿಯವರ ಸ್ಥಳದ ಬಾವಿಯಲ್ಲಿ ವೃದ್ಧೆಯೊರ್ವರ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ವೃದ್ಧೆಯು ಆತ್ಮಹತ್ಯೆ ಮಾಡಿಕೊಂಡಿರ ಬಹುದೆಂದು ಶಂಕಿಸಲಾಗಿದೆ. ಪ್ರಕರಣ ನಗರಣ ಠಾಣೆಯಲ್ಲಿ ದಾಖಲಾಗಿದ್ದು, ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದು ಬರಬೇಕಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಮೇಲೆತ್ತಿ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಶವ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದ್ದಾರೆ. ಮೃತ ವೃದ್ಧೆ ಬಾಗಲಕೋಟೆ ಜಿಲ್ಲೆ ಮೂಲದ ವಲಸೆ ಕಾರ್ಮಿಕೆ ನೀಲಮ್ಮ(68) […]
ಜೂನ್ 21: ಅಂತರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ, ಜೂನ್ 18: ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ […]
ಕಾಪು: ಚಂಡಮಾರುತ ಆಶ್ರಯ ತಾಣ ಉದ್ಘಾಟನೆ
ಉಡುಪಿ, ಜೂನ್ 18: ವಿಶ್ವಬ್ಯಾಂಕ್ ನೆರವಿನಲ್ಲಿ ರಾಷ್ಟ್ರೀಯ ಚಂಡಮಾರುತ ಅಪಾಯ ತಗ್ಗಿಸುವಿಕೆ ಯೋಜನೆಯಡಿಯಲ್ಲಿ ಕಾಪುವಿನಲ್ಲಿ ನಿರ್ಮಾಣಗೊಂಡ ವಿವಿದೋದ್ದೇಶ ಚಂಡಮಾರುತ ಆಶ್ರಯ ತಾಣವನ್ನು ಕಂದಾಯ ಸಚಿವ ಆರ್.ವಿ ದೇಶ್ಪಾಂಡೆ ಅವರು ಮಂಗಳವಾರ ಉದ್ಘಾಟಿಸಿದರು. ಕಾಪು ಪಡು ಸರಕಾರಿ ಉನ್ನತ ಪ್ರಾಥಮಿಕ ಶಾಲೆ ಆವರಣದಲ್ಲಿ ಸುಮಾರು 2.45 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಆಶ್ರಯ ತಾಣದಲ್ಲಿ ಪ್ರಾಕೃತಿಕ ವಿಕೋಪಗಳ ತುರ್ತು ಸಂದರ್ಭಗಳಲ್ಲಿ ನಿರ್ವಸಿತರಾಗುವವರಿಗೆ ಆಶ್ರಯ ಕಲ್ಪಿಸಬಹುದು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 1999 ರಲ್ಲಿ ಒರಿಸ್ಸಾದಲ್ಲಿ ಉಂಟಾದ ಭೀಕರ ಚಂಡಮಾರುತವು […]