ಮಂಗಳೂರು: ಕಾರುಗಳೆರಡರ ಮಧ್ಯೆ ಢಿಕ್ಕಿ, ಎಂಟು ಮಂದಿಗೆ ಗಾಯ
ಮಂಗಳೂರು: ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬದಲ್ಲಿ ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಎಂಟು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಹಾಗೂ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮತ್ತೊಂದು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪೂಜೆಗಳ ಬಗ್ಗೆ ತಪ್ಪು ಮಾಹಿತಿ: ಪ್ರಕರಣ ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ನಡೆಯುವ ಪೂಜೆಗಳ ಕುರಿತು ತಪ್ಪುಮಾಹಿತಿ ನೀಡುತ್ತಿದ್ದ ಯೂಟ್ಯೂಬ್ ಚಾನೆಲ್ ವಿರುದ್ಧ ದೇಗುಲದ ಕಾರ್ಯನಿರ್ವಹಣಾಧಿಕಾರಿ ಎಂ.ಎಚ್. ರವೀಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ‘ರಜಿನಿ ಅಪ್ಡೇಟ್ಸ್’ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರು ಬಳಸಿ ಭಕ್ತಾದಿಗಳಿಗೆ ತಪ್ಪು ಮಾಹಿತಿ ನೀಡಿ ಗೊಂದಲ ಸೃಷ್ಟಿಸುತ್ತಿದ್ದು, ಭಕ್ತಾದಿಗಳನ್ನು ವಂಚಿಸುತ್ತಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಯೂಟ್ಯೂಬ್ ಚಾನೆಲ್ […]
ವಿಶ್ವಕಪ್ ಟೂರ್ನಿಯಿಂದ ಧವನ್ ಹೊರಕ್ಕೆ..! ಋಷಬ್ ಪಂತ್ ತಂಡ ಸೇರ್ಪಡೆ
ಲಂಡನ್: ಗಾಯದ ಸಮಸ್ಯೆಯಿಂದ ಕಳೆದ ಪಂದ್ಯದಲ್ಲಿ ತಂಡದಿಂದ ಹೊರಗುಳಿದಿದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ಮ್ಯಾನ್ ಶಿಖರ್ ಧವನ್ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಇದುವರೆಗಿನ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಿ, ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ನೇಥನ್ ಕೌಲ್ಟರ್ ನೈಲ್ ಎಸೆತದಲ್ಲಿ ಕೈಬೆರಳಿಗೆ ಗಾಯವಾಗಿತ್ತು. ಹೀಗಾಗಿ ಪಾಕಿಸ್ತಾನ ವಿರುದ್ದದ ಪಂದ್ಯದಿಂದ ಹೊರಗುಳಿದಿದ್ದರು. ಬಳಿಕ ಇಂಗ್ಲೆಂಡ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಧವನ್ ಬದಲು ವಿಕೆಟ್ […]
ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಡುಪಿ ಕಚೇರಿಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಮತ್ತು ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯಾ ಜಿಲ್ಲೆಯ ಅಭ್ಯರ್ಥಿಗಳಿಗೆ […]
ಕರಾವಳಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆ
ಕರಾವಳಿ: ಮುಂದಿನ ಮೂರು ದಿನಗಳಲ್ಲಿ ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ತಿಳಿಸಿದ್ದು, ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಕ್ಷೀಣಿಸಿದ್ದು ಮಲೆನಾಡಿನಲ್ಲೂ ಮಳೆ ಕೊರತೆ ಉಂಟಾಗಿದೆ.ಇಲಾಖಾ ವರದಿಯ ಪ್ರಕಾರ ಇನ್ನಾದರೂ ಮುಂಗಾರಿನ ಪ್ರಭಾವ ಜಾಸ್ತಿಯಾಗಲಿದೆಯಾ ಎನ್ನುವ ನಿರೀಕ್ಷೆ ಕರಾವಳಿ ಜನರಲ್ಲೂ ಹುಟ್ಟಿದೆ.