ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ಪ್ರಯೋಜನ ಪಡೆಯಿರಿ

ಉಡುಪಿ, ಜೂನ್ 21: ಭಾರತ ಸರ್ಕಾರವು ರೈತರ ಆದಾಯ ವೃದ್ಧಿಸಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಸದ್ರಿ ಯೋಜನೆಯಡಿ ಭೂ-ಒಡತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು ರೂ. 6000/-ಗಳನ್ನು ನೀಡಲು ಉದ್ದೇಶಿಸಿದ್ದು, ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ (ಗ್ರಾಮ ಪಂಚಾಯತ್), ಅಟಲ್‍ಜಿ ಜನ ಸ್ನೇಹಿ ಕೇಂದ್ರ, ನಾಡಾ ಕಛೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿಗೆ ತೆರಳಿ ಸ್ವಯಂ ಘೋಷಣೆ ಅನುಬಂಧದಲ್ಲಿ […]

ಮಣಿಪಾಲ: ಕೆಎಂಸಿ ಆಸ್ಪತ್ರೆ ಆವರಣದಲ್ಲಿ ಉರುಳಿದ ಮರ: ನಾಲ್ಕು ಕಾರುಗಳು ಜಖಂ

ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಸಮೀಪದಲ್ಲಿದ್ದ ಬೃಹತ್ ಹಳೆಯ ಮರವೊಂದು ಶುಕ್ರವಾರ ಅಪರಾಹ್ನ ಉರುಳಿ ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂ ಆಗಿದೆ.   ತುರ್ತು ಚಿಕಿತ್ಸಾ ಘಟಕದ ಎಡ ಬದಿಯ ಪಾರ್ಕಿಂಗ್ ಪ್ರದೇಶದಲ್ಲಿರುವ ಹಳೆಯದಾದ ಮೇ ಫ್ಲವರ್ ಮರ ಹಠತ್ತಾನೆ ಬುಡ ಸಮೇತವಾಗಿ ಧರೆಗೆ ಉರುಳಿ ಬಿತ್ತೆನ್ನಲಾಗಿದೆ. ಇದರಿಂದ ಅದರ ಅಡಿಯಲ್ಲಿ ಪಾರ್ಕ್ ಮಾಡಲಾಗಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ. ಎರಡು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮತ್ತೆ ಎರಡು ಕಾರುಗಳಿಗೆ ಅಲ್ಪಸ್ವಲ್ಪ ಹಾನಿಯಾಗಿದೆ […]

ಕುಂದಾಪುರ: ಕೊಟ್ಟಿಗೆಯಿಂದ ಹೊತ್ತೊಯ್ದಿದ್ದ ದನ ಪತ್ತೆ ಹಚ್ಚಿದ ಪೊಲೀಸರು: ಆರೋಪಿಗಳು ಪರಾರಿ

ಕುಂದಾಪುರ: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಯಳಜಿತ್ ಎಂಬಲ್ಲಿ ದಾರು ಗೌಡ್ತಿ ಮನೆಯ ಕೊಟ್ಟಿಗೆಯಲ್ಲಿದ್ದ ಎರಡು ದನ ಹಾಗೂ ಪಾರ್ವತಿ ಎನ್ನುವರ ಮನೆಯ ಕೊಟ್ಟಿಗೆಯಲ್ಲಿದ್ದ ಮೂರು ದನಗಳನ್ನು ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದಿದ್ದು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬೈಂದೂರು ಪೊಲೀಸರು ಐದು ದನಗಳನ್ನು ಪತ್ತೆ ಹಚ್ಚಿದ್ದಾರೆ. ಮಂಗಳವಾರ ತಡರಾತ್ರಿ ಎರಡು ಮನೆಗಳ ಕೊಟ್ಟಿಗೆಗೆ ನುಗ್ಗಿದ ದುಷ್ಕರ್ಮಿಗಳು ಐದು ದನಗಳನ್ನು ಕದ್ದಿದ್ದು ಮಾರನೇ ದಿನ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅಲ್ಲದೇ ವಿಧಾನ ಪರಿಷತ್ […]

ಅಂಬಲಪಾಡಿ- ಯೋಗ ದಿನಾಚರಣೆ

ಉಡುಪಿ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ಗ್ರಾಮ ಪಂಚಾಯತ್ ಅಂಬಲಪಾಡಿ ಹಾಗೂ ಮಹಿಳಾ ಮಂಡಲ ಕಿದಿಯೂರು ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಯೋಗ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.       ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.  ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ರಾಜೇಂದ್ರ ಪಿ. ಮಾತನಾಡಿ,  ಯೋಗಾಭ್ಯಾಸವನ್ನು ಕೇವಲ […]

ಆರೋಗ್ಯ ಸಮತೋಲನಕ್ಕೆ ಯೋಗ ಸಾಧನ :ಡಾ.ಎನ್.ಬಿ ವಿಜಯ ಬಲ್ಲಾಳ್

ಉಡುಪಿ :ಭಾರತೀಯ ಸಂಸ್ಕøತಿ ಆರೋಗ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದೆ. ಆರೋಗ್ಯವನ್ನು ಸಮತೋಲನದಲ್ಲಿಡಲು ಯೋಗ ಬಹು ಮುಖ್ಯ ಸಾಧನ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಮ್ಯಾನೆಜಿಂಗ್ ಟ್ರಸ್ಟಿ ಡಾ.ಎನ್.ಬಿ ವಿಜಯ ಬಲ್ಲಾಳ್ ತಿಳಿಸಿದ್ದಾರೆ.      ಅವರು ಶುಕ್ರವಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ರೆಡ್‍ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.      ಆರೋಗ್ಯವಿಲ್ಲ ಎಂದರೆ ಜೀವನದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಯೋಗದ ಪ್ರಾಮುಖ್ಯತೆಯನ್ನು […]