‘ಟಿಕ್ ಟಾಕ್’ ಸ್ಟಂಟ್: ಕುತ್ತಿಗೆ ಮೂಳೆ ಮುರಿದಿದ್ದ ಯುವಕ ಸಾವು, ಟಿಕ್ ಟಾಕ್ ಗೆ ರಾಜ್ಯದಲ್ಲಿ‌ ಮೊದಲ ‌ಬಲಿ

ತುಮಕೂರು: ಕಳೆದ ಕೆಲ ‌ದಿನಗಳ ಹಿಂದೆ ಟಿಕ್ ಟಾಕ್ ಸ್ಟಂಟ್ ಮಾಡಲು ಪ್ರಯತ್ನಿಸಿ ಕುತ್ತಿಗೆ ಮೂಳೆ ಮುರಿದುಕೊಂಡಿದ್ದ ಯುವಕ ಭಾನುವಾರ ಮೃತಪಟ್ಟಿದ್ದಾನೆ. ಆ ಮೂಲಕ‌ ರಾಜ್ಯದಲ್ಲಿ ಟಿಕ್‍ಟಾಕ್‍ಗೆ ಮೊದಲ ಬಲಿಯಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯ ಕುಮಾರ್ ಮೃತ ಯುವಕ. ಕುಮಾರ್ ಟಿಕ್‍ಟಾಕ್ ವಿಡಿಯೋ ಮಾಡುವಾಗ ಆಯ ತಪ್ಪಿ ತಲೆ ನೆಲಕ್ಕೆ ಬಿದ್ದಿದ್ದ. ಪರಿಣಾಮ ಸ್ಪೈನಲ್ ಕಾರ್ಡ್ (ಬೆನ್ನು ಮೂಳೆ) ಮುರಿದುಕೊಂಡಿತ್ತು.  ಕೂಡಲೇ ಚಿಕಿತ್ಸೆಗಾಗಿ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕುಮಾರ್  ಮೃತಪಟ್ಟಿದ್ದಾರೆ. ಜೂನ್ 15ರಂದು ಕುಮಾರ್ ಸ್ನೇಹಿತನ ಜೊತೆಯಲ್ಲಿ […]

ಮತ್ತಾವು ಸೇತುವೆ ನಿರ್ಮಾಣಕ್ಕೆ 2 ಕೋಟಿ ಮೀಸಲು: ಸುನೀಲ್ ಕುಮಾರ್

ಉಡುಪಿ, ಜೂನ್ 23: ನಕ್ಸಲ್ ಬಾಧಿತ ಮತ್ತಾವುನ ಹೊಳೆಗೆ ಸೇತುವೆ ನಿರ್ಮಿಸಲು 2 ಕೋಟಿ ರೂ ಗಳನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ತಿಳಿಸಿದರು. ಅವರು ಭಾನುವಾರ ಕಬ್ಬಿನಾಲೆಯ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನ ಆವರಣದಲ್ಲಿ, ನಕ್ಸಲ್ ನಿಗ್ರಹ ದಳ ಕ್ಯಾಂಪ್ ಹೆಬ್ರಿ, ಪೊಲೀಸ್ ಠಾಣೆ ಹೆಬ್ರಿ, ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ, ಮುದ್ರಾಡಿ ಗ್ರಾಮ ಪಂಚಾಯತ್, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ವ್ಯವಸಾಯ ಸೇವಾ ಸಹಕಾರ ಸಂಘ ಹೆಬ್ರಿ-ವರಂಗ […]

ಸದಸ್ಯರ-ಪದಾಧಿಕಾರಿಗಳ ಒಗ್ಗಟ್ಟಿನಿಂದ  ಕೆಥೋಲಿಕ್ ಸಭಾ ಸಂಘಟನೆ ಬಲಿಷ್ಠವಾಗಿದೆ: ರೋಲ್ಫಿ ಡಿಕೋಸ್ತಾ

ಉಡುಪಿ: ಸಂಘಟನೆಯ ಪದಾಧಿಕಾರಿಗಳು ಪರಸ್ಪರ ಸಹಕಾರ ಮನೋಭಾವದಿಂದ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಆ ಸಂಘಟನೆ ಯಶಸ್ವಿಯಾಗಲು ಸಾಧ್ಯ. ಕೆಥೊಲಿಕ್ ಸಭಾ ಸಂಘಟನೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲಿಷ್ಠವಾಗಿ ಬೆಳೆದಿದ್ದರೆ ಅದಕ್ಕೆ ಕಾರಣ ಸದಸ್ಯರ ಮತ್ತು ಪದಾಧಿಕಾರಿಗಳ ಒಗ್ಗಟ್ಟು. ಈ ಒಗ್ಗಟ್ಟು ಮುರಿಯುವ ಪ್ರಯತ್ನ ಕೂಡ ನಡೆದಾಗ ಅದಕ್ಕೆ ಸ್ಪಷ್ಟ ಉತ್ತರ ಸದಸ್ಯರು ನೀಡಲು ಬದ್ದರಾದರೆ ಅಂತಹ ಸಂಘಟನೆ ಬಹುಕಾಲ ಬಾಳಲು ಸಾಧ್ಯವಿದೆ ಎಂದು ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷ ರೋಲ್ಫಿ ಡಿಕೋಸ್ತಾ ಹೇಳೀದರು. ಅವರು […]