ಜಗತ್ತಿನಲ್ಲಿ 35 ಮಿಲಿಯನ್ ಮಾದಕ ದ್ರವ್ಯ ವ್ಯಸನಿಗಳು: ಡಾ.ಭಂಡಾರಿ

ಉಡುಪಿ, ಜೂ.26: ಜಗತ್ತಿನಲ್ಲಿ ಇಂದು 35 ಮಿಲಿಯನ್ ಮಂದಿ ಮಾದಕ ದ್ರವ್ಯ ವ್ಯಸನಿಗಳು ಇದ್ದಾರೆ. 11 ಮಿಲಿಯನ್ ಮಂದಿ ಚುಚ್ಚುಮದ್ದಿನ ಮೂಲಕ ಮಾದಕ ದ್ರವ್ಯ ಸೇವಿಸುತ್ತಿದ್ದಾರೆ. ಹೀಗೆ ಅಫೀಮು ಸೇವಿಸುವ ಮೂರನೆ ಎರಡರಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಮಾನಸಿಕ ತಜ್ಞ ಡಾ. ಪಿ.ವಿ.ಭಂಡಾರಿ ತಿಳಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಬುಧವಾರ ನಡೆದ ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ವೈದ್ಯರು, ಔಷಧ ಮಾರಾಟಗಾರರು […]

ಬಿಜೆಪಿಯವರಿಗೆ ಗ್ರಾಮ ವಾಸ್ತವ್ಯದ ಕಲ್ಪನೆ ಬರದು: ಐವನ್ 

ಮಂಗಳೂರು: ಬಿಜೆಪಿಯವರು ಜೈಲುವಾಸ ಮಾಡಿ ಬಂದವರು. ಅವರಿಗೆ ಗ್ರಾಮ ವಾಸ್ತವ್ಯದ ಕಲ್ಪನೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಹೇಳಿದ್ದಾರೆ. ಮಂಗಳವಾರ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಿಎಂ ಗ್ರಾಮ ವಾಸ್ತವ್ಯದ ಬಗ್ಗೆ ವ್ಯಂಗ್ಯವಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಐವನ್, ಕೋಟಾ ಶ್ರೀನಿವಾಸ್ ಪೂಜಾರಿ ಸ್ಥಳೀಯ ಸಂಸ್ಥೆಯಿಂದ ಚುನಾಯಿತರಾದವರು. ಆಡಳಿತದ ಅನುಭವ ಯೋಚನೆ-ಯೋಜನೆ ಇರುವವರು ಈ ರೀತಿ ಮಾತನಾಡುವುದಿಲ್ಲ. ಅಲ್ಲದೆ ಬಿಜೆಪಿಯವರು ಜೈಲುವಾಸ ಮಾಡಿದವರು. ಹೀಗಾಗಿ ಅವ್ರಿಗೆ ಗ್ರಾಮ ವಾಸ್ತವ್ಯದ […]

ವೇಣೂರು: ಫಲ್ಗುಣಿ‌ ನದಿಯಲ್ಲಿ ಮೃತದೇಹ ಪತ್ತೆ

ವೇಣೂರು, ಜೂ. 26: ಬೆಳ್ತಂಗಡಿ ತಾಲೂಕಿನ ವೇಣೂರು ಪಲ್ಗುಣಿ ನದಿ ಸಮೀಪದಲ್ಲಿ ಅನುಮಾನಸ್ಪದವಾಗಿ ವ್ಯಕ್ತಿಯ ಮೃತ ದೇಹ ಬುಧವಾರ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಗುಣಪಾಲ್ (೬೦) ಎಂದು ಗುರುತಿಸಲಾಗಿದೆ. ಮೃತ ಗುಣಪಾಲ್ ಈ ಹಿಂದೆ ಸ್ಥಳೀಯ ಪಾರ್ಶ್ವನಾಥ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು ಸ್ಥಳೀಯರಿಗೆ ಚಿರಪರಿಚಿತರಾಗಿದ್ದರು. ಇಂದು ಬೆಳಿಗ್ಗೆ ಶವ ನದಿಯಲ್ಲಿ ತೇಲುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸ್ಥಳೀಯರ ಮಾಹಿತಿಯಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ಪ್ಲಾಸ್ಟಿಕ್ ವಸ್ತುಗಳ ಮಾರಾಟ; ಅಧಿಕಾರಿಗಳಿಂದ ದಾಳಿ

ಮಂಗಳೂರು: ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.   ಮಂಗಳೂರು ನಗರದ ಸೆಂಟ್ರಲ್ ಸಿಟಿ ಮಾರ್ಕೆಟ್ ನ ಹಲವು ಅಂಗಡಿಗಳ ಮೇಲೆ ಮನಪಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕಾನೂನು ಬಾಹಿರವಾಗಿ ಮಾರಾಟ ಮಾಡಲು ದಾಸ್ತಾನಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ಸಾಮಾಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಅಧಿಕಾರಿಗಳು ವಿವಿಧ ಭಾಗಗಳಲ್ಲಿ ಹೆಚ್ಚಿನ ತನಿಖೆ ನಡೆಸಲಿದ್ದಾರೆ.

ಭಿಕ್ಷಾಟನೆ ನಿರತ, ಶಾಲೆಯಿಂದ ಹೊರಗುಳಿದ ಮಕ್ಕಳ ರಕ್ಷಣಾ ಕಾರ್ಯಚರಣೆ

ಉಡುಪಿ, ಜೂನ್ 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ, ಪೋಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಮಕ್ಕಳ ಸಹಾಯವಾಣಿ, ನಾಗರೀಕ ಸೇವಾ ಸಮಿತಿ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲ ಬಸ್ಸ್‍ಸ್ಟ್ಯಾಂಡ್, ಉಡುಪಿಯ ಸಿಟಿ ಬಸ್ಸ್‍ಸ್ಟಾಂಡ್, ಸರ್ವೀಸ್ ಬಸ್ಸ್‍ಸ್ಟಾಂಡ್ ಮತ್ತು ರಾಜಾಂಗಣ ಆಸುಪಾಸು, ಆದಿ ಉಡುಪಿಯ ಸಂತೆ ಮಾರ್ಕೇಟ್‍ನಲ್ಲಿ, ಭಿಕ್ಷಾಟನೆ ಮಾಡದಂತೆ ಅರಿವು ಮೂಡಿಸಲಾಗಿದ್ದು, ಬುಧವಾರ ಸಿಟಿ ಬಸ್ಸ್‍ಸ್ಟಾಂಡ್‍ನಲ್ಲಿ ಭಿಕ್ಷಾಟನೆ ನಿರತ […]