ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ ರೂಪಿಸಲು ಯೋಜನೆ- ಡಿಸಿ

ಉಡುಪಿ :ಮಣಿಪಾಲದಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಲು, ಸುಸ್ಥಿರ ಸಂಚಾರ ವ್ಯವಸ್ಥೆಯನ್ನು ರೂಪಿಸಲು ಜಿಲ್ಲಾಡಳಿತ ಹಾಗೂ ಮಣಿಪಾಲ ವಿವಿಯ ಸಹಯೋಗದಲ್ಲಿ ವ್ಯವಸ್ಥಿತ ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.     ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಣಿಪಾಲದಲ್ಲಿ ಸಂಚಾರ ದಟ್ಟಣೆಯಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದು, ಪ್ರಸ್ತುತ ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ, ಇದೇ ಸಮಯದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆಗೆ ಯೋಜನೆ ರೂಪಿಸಿದ್ದಲ್ಲಿ, ಅನುಷ್ಠಾನ […]

ಜೈನ್ ಬಸದಿಗಳ ಜೀರ್ಣೋದ್ಧಾರಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ಜೈನ್ ದೇವಾಲಯ(ಬಸದಿ) ನವೀಕರಣ /ದುರಸ್ತಿ /ಜೀರ್ಣೋದ್ಧಾರಕ್ಕಾಗಿ ಸಹಾಯಧನ ಪಡೆಯಲು ಇಚ್ಛೆಯುಳ್ಳ ಜೈನ ಬಸದಿ ಸಮಿತಿ /ಮಂಡಳಿಯವರು, ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಡುಪಿ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  ನಿಗಿದಿತ ನಮೂನೆ ಅರ್ಜಿ, ಇತರೆ ವಿವರಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್  ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 0820-2574881 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲಂಕಾರಿಕಾ ಮೀನು ಉತ್ಪಾದನಾ ತಂತ್ರಜ್ಞಾನ ಮಾಹಿತಿ ಶಿಬಿರ 

ಉಡುಪಿ, ಜೂನ್ 29: ಕೃಷಿ ಮತ್ತು ತೋಟಗಾರಿಕಾ ವಿವಿ ಶಿವಮೊಗ್ಗ, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ವತಿಯಿಂದ ಗ್ರಾಮೀಣ ಯುವಕರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮದಡಿಯಲ್ಲಿ , ಅಲಂಕಾರಿಕಾ ಮೀನು ಉತ್ಪಾದನಾ ತಂತ್ರಜ್ಞಾನಗಳ ಬಗ್ಗೆ 6 ದಿನಗಳ ಮಾಹಿತಿ ಶಿಬಿರ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಮೀನುಗಾರಿಕಾ ವಿವಿಯ ಪ್ರಾಧ್ಯಾಪಕ ಡಾ.ಎ.ಟಿ.ರಾಮಚಂದ್ರ ನಾಯ್ಕ್ ,  ಅಲಂಕಾರಿಕಾ ಮೀನುಗಳ ಸಾಕಾಣೆ (ಅಕ್ವೇರಿಯಂ ) ಉದ್ಯೋಗಕ್ಕೆ ಹೆಚ್ಚಿನ ಅವಕಾಶವಿದೆ. ದೇಶದಲ್ಲಿ ಸುಮಾರು 250 […]

ಮಂಗಳೂರು: ಕರಾವಳಿ ಗೋಕಳ್ಳತನ ಪತ್ತೆಗೆ ವಿಶೇಷ ತಂಡ ರಚನೆ: ಸಂದೀಪ್‌ ಪಾಟೀಲ್

ಮಂಗಳೂರು, ಜೂ.28: ಗೋವುಗಳ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಮಂಗಳೂರಿನ ಕಮಿಷನರೇಟ್ ವ್ಯಾಪ್ತಿ ಜತೆಗೆ  ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಕೇರಳ ರಾಜ್ಯದಲ್ಲಿ ಕೆಲವೊಂದು ಗೋವು ಕಳವು ಆರೋಪಿಗಳು ವಾಸಿಸುತ್ತಿದ್ದಾರೆ‌. ಆ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಿದ್ದು, ರಾತ್ರಿ ಬೀಟ್​ಗಳನ್ನು ಬಿಗಿಗೊಳಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ. ಮಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದ ಬಳಿಕ ಅವರು […]

ಉಡುಪಿ: ಪೊದಾರ್ ಶಾಲೆಯಲ್ಲಿ ಮಕ್ಕಳ ಸಂಸತ್ತು ಉದ್ಘಾಟನೆ

ಉಡುಪಿ: ಪೊದಾರ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಮಕ್ಕಳ ಸಂಸತ್ತು ಉದ್ಘಾಟನೆ ಕಾರ್ಯಕ್ರ‌ಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪೂರ್ಣಪ್ರಜ್ಞ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ರಾವ್ ಭಾಗವಹಿಸಿ ಮಾತನಾಡಿ, ಮಕ್ಕಳೇ ಮುಂದಿನ ಶಕ್ತಿ. ಆದ್ದರಿಂದ ಮಕ್ಕಳು ಶಿಸ್ತಿನ ಜೀವನ ನಡೆಸಬೇಕು ಎಂದರು. ಶಾಲಾ ಪ್ರಾಂಶುಪಾಲರಾದ ಎಂ.ಎಸ್. ಹೀರೇಮಠ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಾಲಾನಾಯಕರು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದರು. ಶಾಲಾ ನಾಯಕನಾಗಿ ಏಳನೇ ತರಗತಿ ವಿದ್ಯಾರ್ಥಿ ದಕ್ಷ್‍ಭಂಡಾರಿ ಹಾಗೂ ಶಾಲಾನಾಯಕಿಯಾಗಿ ದಿಯಾ ಕಾರ್ಣಿಕ್ ಆಯ್ಕೆಯಾದರು. ಶಿಕ್ಷಕಿ ವೇದಾವತಿ […]