ಮೂಡಬಿದಿರೆ: ಜನರ ಸಮಸ್ಯೆಗೆ ಸ್ಪಂಧಿಸದ ಅಧಿಕಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆ
ಮೂಡಬಿದಿರೆ: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕರು ಏಕಾಏಕಿ ಮೂಡಾ ಕಚೇರಿಗೆ ತೆರಳಿದ್ದಾರೆ. ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತನ್ನ ರೌದ್ರಾವತಾರ ತೋರಿದ್ದಾರೆ. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ. […]
ಆನಂದ್ ಸಿಂಗ್ ರಾಜೀನಾಮೆ ವಿಚಾರ ತಿಳಿದಿಲ್ಲ: ಖಾದರ್
ಮಂಗಳೂರು: ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರ ಕುರಿತ ಮಾಹಿತಿ ನನಗೆ ಗೊತ್ತಿಲ್ಲ. ಮಾಧ್ಯಮ ಮೂಲಕ ಗೊತ್ತಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮದ ಜತೆಗೆ ಮಾತನಾಡಿ ಅನಂದ್ ಸಿಂಗ್ ಪಕ್ಷದ ಬದ್ದತೆಯ ಶಾಸಕರು ಎಂದ ಅವರು, ಮೈತ್ರಿ ಸರಕಾರ ಸುಭದ್ರವಾಗಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಐದು ಶಾಸಕರ ರಾಜೀನಾಮೆಯಿಂದ ಸರ್ಕಾರ ಕೆಡವಲು ಸಾಧ್ಯನಾ.? ಎಂದು ಪ್ರಶ್ನಿಸಿದರು.ಕಳೆದ ಒಂದೂವರೆ ವರ್ಷಗಳಿಂದ ಈ ತರಹದ ಬೆಳವಣಿಗೆ ನಡೀತಿದೆ ಎಂದು ಹೇಳಿದರು.
ಈ ಚಿತ್ರ ನೋಡಿದರೆ ನೀವು ಕಲಿತ ಕನ್ನಡ ಶಾಲೆ ಗ್ಯಾರಂಟಿ ಕಾಡುತ್ತೆ: ಬಾಲ್ಯ ಬಿಚ್ಚಿಡುವ “ಕಲ್ಪವೃಕ್ಷ”
*ಉಡುಪಿ Xpress ವಿಶೇಷ ಹಲವು ವರ್ಷಗಳ ಹಿಂದಿನ ಕನ್ನಡ ಶಾಲೆಗಳ ಚಿತ್ರಣ ಪ್ರಸ್ತುತ ಸಂಪೂರ್ಣ ಬದಲಾಗಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ಕನ್ನಡ ಶಾಲೆ ಪ್ರೇಮಿಗಳು ಕನ್ನಡ ಶಾಲೆ ಕಥೆ ಹೇಳುವ ‘ಕಲ್ಪವೃಕ್ಷ’ ಎಂಬ ಸೊಗಸಾದ ಕಿರುಚಿತ್ರ ನಿರ್ಮಿಸಿದ್ದಾರೆ. ಸದ್ಯ ಯೂಟ್ಯೂಬ್‌ನಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಗೊಂಡಿದೆ. ಕನ್ನಡ ಶಾಲೆಗಳನ್ನು ಉಳಿಸಿ, ಬೆಳೆಸಬೇಕು ಎಂಬ ಉದ್ದೇಶದೊಂದಿಗೆ ಪೂರ್ಣಪ್ರಜ್ಞಾ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಅವರ ಪರಿಕಲ್ಪನೆಯೊಂದಿಗೆ ಮೂಡಿ ಬಂದಿರುವ ಚಿತ್ರ ಇದಾಗಿದೆ. 15:29 ನಿಮಿಷ […]
ಪತ್ರಕರ್ತರ ಸಮ್ಮೇಳನ: ಚಿತ್ರಕಲಾ ಪ್ರದರ್ಶನ ಉದ್ಘಾಟನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿದರು.
ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯು.ಜಿ.ಸಿ 12ಬಿ ಮಾನ್ಯತೆ
ಉಡುಪಿ, ಜುಲೈ 1: ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜು ಜೂನ್ 25 ರಂದು ಯು.ಜಿ.ಸಿ. ಕಾಯ್ದೆ 1956ರ 12 ಬಿ ಕಲಂ ಅಡಿಯಲ್ಲಿ ಮಾನ್ಯತೆ ಪಡೆದಿದೆ. ಕಾಲೇಜು ಈಗ ಕೇಂದ್ರ ಸರ್ಕಾರದಿಂದ ಬರುವ ಹಣಕಾಸಿನ ನೆರವು ಪಡೆಯಲು ಅರ್ಹವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.