ಹಿರಿಯಡಕ: ಉಚಿತ ದಂತ ಚಿಕಿತ್ಸಾ ಶಿಬಿರ
ಉಡುಪಿ, ಜುಲೈ 1: ಲಯನ್ಸ್ ಕ್ಲಬ್ ಹಾಗೂ ಮಣಿಪಾಲದ ಕೆ.ಎಂ.ಸಿ. ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರವು ಇತ್ತೀಚೆಗೆ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸೆಕೆಂಡ್ ವೈಸ್ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ವಿಶ್ವನಾಥ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಉಚಿತ ದಂತ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಹಿರಿಯಡಕ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನದಾಸ್ ಆಚಾರ್ಯ ಮಾತನಾಡಿ, ಲಯನ್ ಕ್ಲಬ್ ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಸೇವೆ, ಸ್ನೇಹ, ನಾಯಕತ್ವ ಅದರ ಮೂಲತತ್ತ್ವಗಳಾಗಿವೆ […]
ನಿಟ್ಟೆ: ಮಲೇರಿಯಾ ವಿರೋಧಿ ದಿನಾಚರಣೆ
ಉಡುಪಿ, ಜುಲೈ 1: ನಿಟ್ಟೆ ಡಾ.ಎನ್.ಎಸ್.ಎ.ಎಂ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ದಿನಾಚರಣೆ ಜೂನ್ 29 ರಂದು ಜರುಗಿತು. ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಮಲೇರಿಯಾ ಸೊಳ್ಳೆಗಳಿಂದ ಹರುಡುವ ರೋಗವಾಗಿರುವ ಕಾರಣ ಸೊಳ್ಳೆ ಉತ್ಪತ್ತಿಯಾಗುವ ಮೂಲಗಳನ್ನು ಕಂಡು ತಕ್ಷಣವೇ ಲಾರ್ವ ನಾಶ ಮಾಡುವಂತೆ, ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕ್ರಮ ವಹಿಸುವಂತೆ, ಪರಿಸರ ನೈರ್ಮಲ್ಯವನ್ನು ಕಾಪಾಡಿಕೊಂಡು ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ […]
ಉಡುಪಿ ಪತ್ರಕರ್ತರಿಂದ ಪತ್ರಿಕಾ ದಿನಾಚರಣೆ,ಪ್ರತಿಭಾ ಪುರಸ್ಕಾರ, ಸಮ್ಮಾನ
ಉಡುಪಿ: ಇಂದು-ನಾಳೆಯ ಆಲೋಚನೆಗಾಗಿ ಪತ್ರಕರ್ತರ ದಿನಾಚರಣೆ ಮಾಡುತ್ತೇವೆಯೇ ಹೊರತು ಪತ್ರಕರ್ತರ ದಿನಾಚರಣೆ ಸೆಲೆಬ್ರೇಶನ್ ಅಲ್ಲ. ಗಾಂಧೀಜಿ ದಿನಾಚರಣೆ, ಅಂಬೇಡ್ಕರ್ ದಿನಾಚರಣೆ ಮಾಡುವಾಗಲೂ ಇದೇ ಯೋಚನೆ ಇರಬೇಕು. ಕೇವಲ ವರ್ಗ, ಜಾತಿಗೆ ಸೀಮಿತವಲ್ಲ. ನಿನ್ನೆ-ಇಂದು-ನಾಳೆಯನ್ನು ಬೆಸೆಯುವುದೇ ದಿನಾಚರಣೆ ಆಗಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪಿ.ಎಲ್.ಧರ್ಮ ಹೇಳಿದರು. ಅವರು ಸೋಮವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು […]
ಕೃಷ್ಣ ಮಠದಲ್ಲಿ ವಿಷಯ ಸಂಗ್ರಹಣೆ ಪುಸ್ತಹ ಹಸ್ತಾಂತರ
ಉಡುಪಿ: ಶ್ರೀಕೃಷ್ಣ ಮಠದಲ್ಲಿ “ಸು-ವರ್ಣ-ಗೋಪುರ-ವೈಭವ” (ದಿನಪತ್ರಿಕೆ,ಮಾಸಪತ್ರಿಕೆಗಳ ವಿಷಯ ಸಂಗ್ರಹಣೆ) ದಾಖಲಾತಿಗಾಗಿ, ಶ್ರೀಕೃಷ್ಣ ಮಧ್ವ ಸಂಸ್ಥಾನ ಉಡುಪಿ ಇದರ ರಮೇಶ ಭಟ್ ಅವರು ರಚಿಸಿದ ಪುಸ್ತಕವನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥಶ್ರೀಪಾದರಿಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ಮ್ಯಾನೇಜರ್ ಪ್ರಹ್ಲಾದ ಆಚಾರ್ ಹಾಗೂ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.
ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ: ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಹಿರಿದು- ಪಿ.ಬಿ.ಆಚಾರ್ಯ
ಮಂಗಳೂರು: ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಹಿರಿದಾದುದು ಎಂದು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಾಮಾಜಿಕ ಮತ್ತು ಶೈಕ್ಷಣಿಕ ಕೊಡುಗೆ ನೀಡುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರು ಬಲು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಪತ್ರಕರ್ತರು […]