ಗೋ ಕಳ್ಳತನ ಮುಂದುವರಿದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು: ಯಶಪಾಲ್ ಸುವರ್ಣ

ಉಡುಪಿ: ಕರಾವಳಿಯ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಗೋಕಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇದಕ್ಕೆ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣವಾಗಿದೆ. ಸರಕಾರದ ನಿರ್ಲಕ್ಷ್ಯ ಇದೇ ರೀತಿ ಮುಂದುವರೆದರೆ ಜಿಲ್ಲೆಯಲ್ಲಿ 2005ರ ತೀವ್ರತರವಾದ ಹೋರಾಟ,‌ ಅಲ್ಲದೇ ಬೆತ್ತಲೆ‌ ಪ್ರಕರಣ ಮತ್ತೊಮ್ಮೆ ಮರುಕಳಿಸಬಹುದು ಎಂದು ಬಿಜೆಪಿಯ ಜಿಲ್ಲಾ ಪ್ರ. ಕಾರ್ಯದರ್ಶಿ ಯಶಪಾಲ್ ಸುವರ್ಣ ಎಚ್ಚರಿಸಿದ್ದಾರೆ.ಮುಖ್ಯಮಂತ್ರಿ ಕುಮಾರಸ್ವಾಮಿಯವರು ಐಷಾರಾಮಿ ಹೊಟೇಲಲ್ಲಿ ಮಲಗಿ ಬೆಳಗ್ಗೆಗ್ರಾಮಗಳಿಗೆ ಹೋಗಿ ಮನವಿ ಸ್ವೀಕರಿಸಿ ಪ್ರಚಾರಗಿಟ್ಟಿಸಿಕೊಳ್ಳುವ ಬದಲು ನಿಜವಾದ ಜನಪರ ಕಾಳಜಿ ಇದ್ದರೆ ಕರಾವಳಿಗೆ […]

ಮಂಡಗದ್ದೆ: ಬಸ್ ನಿರ್ವಾಹಕನಿಗೆ ಮಾರಣಾಂತಿಕ ಹಲ್ಲೆ

ಉಡುಪಿ: ಕಾರಿಗೆ ಸೈಡ್ ಕೊಡದ ವಿಚಾರಕ್ಕೆ ಸಂಬಂಧಿಸಿ ತೀರ್ಥಹಳ್ಳಿ ತಾಲ್ಲೂಕಿನ ಮಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಗದ್ದೆ ಎಂಬಲ್ಲಿ ಖಾಸಗಿ ಬಸ್ ನ ನಿರ್ವಾಹಕರೊಬ್ಬರಿಗೆ ಎಂಟು ಮಂದಿಯ ತಂಡ ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 30ರಂದು ಸಂಜೆ 6.30ರ ಸುಮಾರಿಗೆ ನಡೆದಿದ್ದು, ಬಸ್ ನಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾಳೂರು ಪೊಲೀಸ್ ಠಾಣೆಯಲ್ಲಿ […]

ಪತ್ರಕರ್ತ ಮಹಮ್ಮದ್ ಆರಿಫ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

  ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ  ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರಿಗೆ ಪ್ರದಾನ ಮಾಡಲಾಯಿತು. ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ […]

ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಬ್ಯಾಂಕ್‌ನ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.2018–19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85, ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 75 ಹಾಗೂ ಅದಕ್ಕಿಂತಲೂಮೇಲ್ಪಟ್ಟು ಅಂಕಗಳಿಸಿದ ಪ್ರತಿಭಾವಂತ ಸದಸ್ಯರ ಮಕ್ಕಳು ಪುರಸ್ಕಾರಕ್ಕೆ ಅರ್ಜಿಸಲ್ಲಿಸಬಹುದು. ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 16 ಕೊನೆಯ ದಿನ. ಸದಸ್ಯರು ಇದರಸದುಪಯೋಗ […]

ಯುವ ರಂಗ ನಿರ್ದೇಶಕ ಸಂತೋಷ್ ನಾಯಕ್ ಪಟ್ಲ ಅವರಿಗೆ ಸಿಜಿಕೆ ಪ್ರಶಸ್ತಿ

ಉಡುಪಿ: ರಾಜ್ಯದ ಪ್ರತಿಷ್ಟಿತ ಸಿಜಿಕೆ ರಂಗ ಪ್ರಶಸ್ತಿ- 2019 ಯುವ ನಿರ್ದೇಶಕ, ನಟ ಸಂತೋಷ್ ನಾಯಕ್ ಪಟ್ಲ ಅವರಿಗೆ ಪ್ರಧಾನ ಮಾಡಲಾಯ್ತು. ನಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ, ಸಂಸ ಥಿಯೇಟರ್ ಬೆಂಗಳೂರು ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿಯು ಪಟ್ಲದ ಯು.ಎಸ್ ನಾಯಕ್ ಪ್ರೌಢಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್, ನಾಟಕವನ್ನು ಆ ಪಂಥ ಈ ಪಂಥ ಎಂದು ವಿಂಗಡಿಸುವ ಬದಲು […]