ಉಡುಪಿ:ಕೃಷ್ಣ ಮಠದಲ್ಲಿ ಕಟ್ಟಿಗೆ ಮುಹೂರ್ತ

ಉಡುಪಿ:ಭಾವಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯೋತ್ಸವದ ಪೂರ್ವ ತಯಾರಿಯಾಗಿ 3 ನೇ ಮುಹೂರ್ತವಾದ ಕಟ್ಟಿಗೆ ಮುಹೂರ್ತವು ದೇವತಾ ಪ್ರಾರ್ಥನೆಯ ನಂತರ ಕೃಷ್ಣ ಮಠದ ಗೋ ಶಾಲೆಯ ಆವರಣದಲ್ಲಿ ನಡೆಯಿತು.

ಪರವಾನಗಿ ಇಲ್ಲದೇ ಬೀಟೆ ಮರದ ದಿಮ್ಮಿಗಳ ಅಕ್ರಮ ಸಾಗಾಟ: ಆರೋಪಿಗೆ ಶಿಕ್ಷೆ

ಉಡುಪಿ, ಜುಲೈ 4: ಆರೋಪಿತನಾದ ಸುರೇಶ್ ಹೆಚ್ ಇವರು ಜನವರಿ 6, 2012 ರಂದು ಬೆಳಗ್ಗೆ 8-30 ಗಂಟೆ ಸಮಯಕ್ಕೆ ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ದೊಡ್ಡಕುಂದ ಸರಕಾರಿ ಮುಡಗಲ್ ಮೀಸಲು ಅರಣ್ಯ ಪ್ರದೇಶದಿಂದ ಸುಮಾರು 25,000 ರೂ. ಬೆಲೆಬಾಳುವ 7 ಬೀಟೆ ಮರದ ದಿಮ್ಮಿಗಳನ್ನು ಕಳವು ಮಾಡಿ ಕೆಎ-20-ಎನ್-2588 ನೇ ಇನ್ನೋವಾ ಕಾರಿನಲ್ಲಿ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರದ ಬಳಿ ವಾಹನವನ್ನು ತಡೆದು ಆರೋಪಿತನನ್ನು ದಸ್ತಗಿರಿ ಮಾಡಿ ವಾಹನ ಹಾಗೂ […]

ಕೌಶಲ್ಯ ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರ

ಉಡುಪಿ, ಜುಲೈ 4: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಮತ್ತು ಸಿಡಾಕ್, ಧಾರವಾಡ ಇವರ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಪಂಗಡದ ಸ್ವಉದ್ಯೋಗಾಂಕ್ಷಿಗಳಿಗೆ ಉಚಿತ ವಸತಿ ಊಟೋಪಚಾರ ಸಹಿತ 6 ದಿನಗಳ ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರವನ್ನು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಸರಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯವಿದ್ದು, ಉಳಿದ ಪರಿಶಿಷ್ಟ ಪಂಗಡದ ಸ್ವಉದ್ಯೋಗಾಂಕ್ಷಿಗಳಿಗೆ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯೋಗಕ್ಕೆ ಬೇಕಾಗುವ ನಾಯಕತ್ವದ ಗುಣಗಳು, […]

ಕುಶಲಕರ್ಮಿಗಳಿಗೆ ಉಚಿತ ಉಪಕರಣ: ಅರ್ಜಿ ಆಹ್ವಾನ

ಉಡುಪಿ, ಜುಲೈ 4: ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ/ ವೃತ್ತಿಪರ ಯೋಜನೆ/ ಗಿರಿಜನ ಉಪಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರೀಷಿಯನ್ ಹಾಗೂ ಟೈಲರಿಂಗ್ ವೃತ್ತಿಯ ಉಪಕರಣಗಳನ್ನು ಉಚಿತವಾಗಿ ನೀಡಲಾಗುವುದು. ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಅರ್ಜಿ ನಮೂನೆಯನ್ನು ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಪಡೆದು, ಆಗಸ್ಟ್ 20 ರ ಒಳಗೆ ಉಪನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ರಜತಾದ್ರಿ, ಮಣಿಪಾಲ ಈ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್, […]

ಉಡುಪಿಯಲ್ಲಿ ‘ಸ್ಯಾಂಡ್ ಬಜಾರ್’ ಆಪ್ ಮೂಲಕ ಮರಳು: ಹೆಪ್ಸಿಬಾ ರಾಣಿ

ಉಡುಪಿ, ಜುಲೈ 4: ಉಡುಪಿ ಜಿಲ್ಲೆಯಲ್ಲಿ ಮರಳು ವಿತರಣೆ ಕುರಿತಂತೆ ಸ್ಯಾಂಡ್ ಬಜಾರ್ ಆಪ್‍ನ ಅಭಿವೃದ್ದಿ ಕಾರ್ಯ ನಡೆಯುತ್ತಿದ್ದು, ಆಪ್ ಅಭಿವೃಧ್ದಿ ಪ್ರಕ್ರಿಯೆ ಸಂಪೂರ್ಣಗೊಂಡ ನಂತರ ಆಪ್ ಮೂಲಕ ಸಾರ್ವಜನಿಕರಿಗೆ ನೇರವಾಗಿ ಮರಳು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮರಳು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಜನರಿಗೆ ಕಡಿಮೆ ದರದಲ್ಲಿ, ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ, ಮನೆ ಬಾಗಿಲಿಗೆ ಮರಳು […]