ಡಾ.ವಿ.ಎಸ್. ಆಚಾರ್ಯ ಜನ್ಮ ದಿನದ ಸಂಸ್ಮರಣೆ, ವನಮಹೋತ್ಸವ
ಉಡುಪಿ, ಜುಲೈ 9: ಯುವಶಕ್ತಿ ರಾಷ್ಟ್ರದ ಉತ್ಥಾನಕ್ಕೆ ಸದ್ಬಳಕೆ ಮಾಡುವಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಶ್ರಮಿಸುತ್ತಿದೆ. ಕರ್ನಾಟಕ ರಾಜ್ಯದಾದ್ಯಂತ ಎಲ್ಲ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕೌಟ್ಸ್ ಮುಂದುವರಿದ ಭಾಗವಾದ ರೋವರ್ಸ್ ಹಾಗೂ ರೇಂಜರ್ಸ್ ಘಟಕಗಳನ್ನು ಸ್ಥಾಪಿಸುವಲ್ಲಿ ಅಂದಿನ ಶಿಕ್ಷಣ ಸಚಿವ ಡಾ. ವಿ.ಎಸ್. ಆಚಾರ್ಯ ಕೊಡುಗೆ ಅಮೂಲ್ಯವಾದುದು ಎಂದು ಉಡುಪಿ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಡಾ. ವಿಜಯೇಂದ್ರ ವಸಂತ ರಾವ್ ಹೇಳಿದರು. ಅವರು ಜುಲೈ 6 ರಂದು […]
ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ: ಮಾಹಿತಿಗಾಗಿ ಸಂಪರ್ಕಿಸಿ
ಉಡುಪಿ, ಜುಲೈ 9: ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯು ಚಾಲ್ತಿಯಲ್ಲಿದ್ದು, ಈ ಯೋಜನೆಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಈ ಬಗ್ಗೆ ಯಾವುದೇ ಸಂದೇಹಗಳ ಪರಿಹಾರಕ್ಕಾಗಿ ಪುಷ್ಪ ಜೆ.ಶೆಟ್ಟಿ, ಜಿಲ್ಲಾ ಆಸ್ಪತ್ರೆ ಉಡುಪಿ ಮೊ: 7259037873, ಪ್ರಶಾಂತ್ ಜಿಲ್ಲಾ ಆಸ್ಪತ್ರೆ ಉಡುಪಿ ಮೊ: 7259037878, ಕಸ್ತೂರಿ, ತಾಲೂಕು ಆಸ್ಪತ್ರೆ ಕುಂದಾಪುರ ಮೊ: 7259021266, ಸುಜನ್ ಮಾಲಾ ತಾಲೂಕು ಆಸ್ಪತ್ರೆ ಕುಂದಾಪುರ ಮೊ: 7259037875, ಕೀರ್ತನ ತಾಲೂಕು ಆಸ್ಪತ್ರೆ ಕಾರ್ಕಳ ಮೊ:8150048366, ಶೋಭಾ ಕೆ.ಎಂ.ಸಿ ಮಣಿಪಾಲ ಮೊ: 7760999218 […]
ಕಲುಷಿತ ಐಸ್ಕ್ಯಾಂಡಿ ಪ್ರಕರಣ, ಕ್ರಮ ಕೈಗೊಳ್ಳಿ: ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ, ಜುಲೈ 9: ಇತ್ತೀಚೆಗೆ ಜಿಲ್ಲೆಯಲ್ಲಿ ಕಲುಷಿತ ಐಸ್ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಸಂಬಂದಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ತಯಾರಿಸಿದ ಐಸ್ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಕುರಿತಂತೆ ಐಸ್ಕ್ಯಾಂಡಿ ತಯಾರಿಕರ […]
ಮಂಗಳೂರಲ್ಲಿ ಮತ್ತೊಮ್ಮೆ ಗುಂಡಿನ ಸದ್ದು; ರೌಡಿಶೀಟರ್ ಮೇಲೆ ಪೊಲೀಸರಿಂದ ದಾಳಿ
ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿ ಶೀಟರ್ ಭವಿತ್ ರಾಜ್ ಎಂಬಾತನನ್ನು ಗುರುವಾರ ಬಂಧಿಸಲು ಯತ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.ಭಾನುವಾರ ಪಂಪುವೆಲ್ ನಲ್ಲಿ ಗೂಡ್ಸ್ ಟೆಂಪೋ ಚಾಲಕನ ಮೇಲೆ ಹಲ್ಲೆ ಪ್ರಕರಣದಲ್ಲಿ ತನಿಖೆ ನಡೆಸಿದ ಪೊಲೀಸರಿಗೆ ಭವಿತ್ ರಾಜ್ ಭಾಗಿಯಾಗಿರುವುದು ಗಮನಕ್ಕೆ ಬಂದಿತ್ತು. ಹೀಗಾಗಿ ಆತನನ್ನು ಬಂಧಿಸಲು ಅಡ್ಯಾರ್ ಗೆ ಹೋಗಿದ್ದ ಕಂಕನಾಡಿ ಪೊಲೀಸರು ತೆರಳಿದ್ದು, ಆಗ ಆರೋಪಿ ಪೊಲೀಸರ ಮೇಲೆ […]
ತಂಬಾಕು ಕಂಪೆನಿಗಳೊಂದಿಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಬೇಡಿ: ಜಿಲ್ಲಾಧಿಕಾರಿ
ಉಡುಪಿ, ಜುಲೈ 9: ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಉಡುಪಿ ಜಿಲ್ಲೆ ಇದರ ತ್ರೈಮಾಸಿಕ […]