ಮೈತ್ರಿ ಸರಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ: ವಿನಯ ಕುಮಾರ್ ಸೊರಕೆ
ಉಡುಪಿ: ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಲು ಬಿಜೆಪಿ ಎಲ್ಲ ರೀತಿಯಿಂದಲೂ ಪ್ರಯತ್ನಿಸುತ್ತಿದೆ. ರಾಜ್ಯ ಮೈತ್ರಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ಮಾಡುತ್ತಿದ್ದು, ಇದರಲ್ಲಿ ಕರ್ನಾಟಕದ ರಾಜ್ಯಪಾಲರು ಸೇರಿ ಕೊಂಡಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಹಣದ ಆಮಿಷವೊಡ್ಡಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಹಮ್ಮಿಕೊಂಡ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. […]
ಉಡುಪಿ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ
ಉಡುಪಿ: ಪಬ್ಲಿಕ್ ಸ್ಕೂಲ್ ಬದಲಾಗಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಬೇಕು ಹಾಗೂ ಸೇವಾ ಜೇಷ್ಠತೆ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ 62,580 ಅಂಗನವಾಡಿ ಕೇಂದ್ರಗಳು […]
ದ.ಕ. ಜಿಲ್ಲೆಯಲ್ಲಿ ದಲಿತ ವಿದ್ಯಾರ್ಥಿಗಳ ಸರಣಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಉಡುಪಿ: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ದಲಿತ ವಿದ್ಯಾರ್ಥಿಗಳ ಸರಣಿ ಅತ್ಯಾಚಾರ ಖಂಡಿಸಿ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಸಿಓಡಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಉಡುಪಿ ಅಂಬೇಡ್ಕರ್ ಯುವಸೇನೆ ವತಿಯಿಂದ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಯಿತು. ದಲಿತ ಮುಖಂಡ ಜಯನ್ ಮಲ್ಪೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಬುದ್ಧಿವಂತರ ಜಿಲ್ಲೆಯೆಂದು ಕರೆಯಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ. ಒಂದೇ ತಿಂಗಳಲ್ಲಿ ಮೂರು ದಲಿತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ […]
ಸಾಲಿಗ್ರಾಮ ಪ.ಪಂ ಪೌರ ಕಾರ್ಮಿಕರಿಗೆ ತ್ಯಾಜ್ಯ ನಿರ್ವಹಣೆ ಮಾಹಿತಿ
ಉಡುಪಿ, ಜುಲೈ 10: ಪೌರಾಡಳಿತ ನಿರ್ದೇಶನಾಲಯದ ನಿರ್ದೆಶನ ಹಾಗೂ ರಾಷ್ಟ್ರೀಯ ಹಸಿರು ಪೀಠದ ಆದೇಶದಂತೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಮೂಲದಲ್ಲಿಯೇ ವಿಂಗಡಿಸಿ ಪಡೆದುಕೊಳ್ಳುವುದರ ಬಗ್ಗೆ ಹಾಗೂ ಕಸವನ್ನು ಪರಿಣಾಮಕಾರಿಯಾಗಿ ಎಸ್ಎಲ್ಆರ್ ಎಮ್ ಮಾದರಿಯಂತೆ ಪ್ಲಾಸ್ಟಿಕ್, ಪೇಪರ್, ಬಾಟಲ್, ಕಾರ್ಡು ಬೋರ್ಡು, ರಟ್ಟು ಇತ್ಯಾದಿಗಳನ್ನು ಪ್ರತ್ಯೇಕ ಮಾಡುವ ಕುರಿತು ಮುಖ್ಯಾಧಿಕಾರಿ ಪೌರ ಕಾರ್ಮಿಕರಿಗೆ ಮಾಹಿತಿ ನೀಡಿದರು. ಕಿರಿಯ ಆರೋಗ್ಯ ನರೀಕ್ಷಕರು ಉಪಸ್ಥಿತರಿದ್ದರು.
ಸಾಲಿಗ್ರಾಮ: ಕಸಗಳನ್ನು ಮೂಲದಲ್ಲಿಯೇ ವಿಂಗಡಿಸಲು ಸೂಚನೆ
ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಪ್ರತೀ ನಾಗರೀಕರು ಘನ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿಕಸ, ಒಣಕಸ, ಅಪಾಯಕಾರಿ ಕಸವನ್ನಾಗಿ ಬೇರ್ಪಡಿಸಿ, ಹಸಿಕಸವನ್ನು ತಮ್ಮ ತಮ್ಮ ಸ್ವಂತ ಸ್ಥಳದಲ್ಲಿ ಪೈಪ್ ಕಾಂಪೋಸ್ಟ್, ಪಿಟ್ಕಾಂಪೋಸ್ಟ್ ಮೂಲಕ ವಿಲೇವಾರಿಗೊಳಿಸುವಂತೆ ಹಾಗೂ ಒಣಕಸವನ್ನು ಸಂಗ್ರಹಿಸಿ ಪ್ರತಿ 15 ದಿನಕ್ಕೊಮ್ಮೆ ಪಟ್ಟಣ ಪಂಚಾಯತ್ ಘನತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡುವುದು. ಡೈಪರ್ಸ್, ಸ್ಯಾನಿಟರಿ ಪ್ಯಾಡ್ ಇತ್ಯಾದಿಗಳನ್ನು ಪೇಪರ್ ನಲ್ಲಿ ಸುತ್ತಿ ಪ್ರತ್ಯೇಕವಾಗಿ ನೀಡತಕ್ಕದ್ದು ಹಾಗೂ ಅಪಾಯಕಾರಿ ವಸ್ತುಗಳು, ಎಲೆಕ್ಟ್ರಾನಿಕ್ ಸಾಮಾನುಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ನೀಡುವುದು ಕಡ್ಡಾಯವಾಗಿದ್ದು, ಈ […]