ಈ ತಿಂಗಳಲ್ಲಿ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ವೇತನವನ್ನು 18,000ರು ನಿಂದ 26,000 ರು ಗೇರಿಸುವಂತೆ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಇನ್ನೂ ಮನ್ನಣೆ ಸಿಕ್ಕಿಲ್ಲ. ಹೀಗಾಗಿ ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಲು ಇನ್ನಷ್ಟು ಕಾಲ ಕಾಯುವುದು ಅನಿವಾರ್ಯ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ತೀರ್ಮಾನವಾಗಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಈ ಬಗ್ಗೆ ಅಧಿಕೃತ ಆದೇಶ ನಿರೀಕ್ಷಿಸಬಹುದಾಗಿದೆ. ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ.3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿದೆ […]

ಉಡುಪಿ X press impact: ಕಾರ್ಕಳ ಪ.ಪೂ.ಕಾಲೇಜಿನಲ್ಲಿ ಲ್ಯಾಬ್ ದ್ವಂಸ ಪ್ರಕರಣದ ಕುರಿತು ಸ್ಪಷ್ಟನೆ ನೀಡಲು ಡಿ.ಸಿ ಸೂಚನೆ

ಕಾರ್ಕಳ : ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಲ್ಯಾಬ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಬ್ರಮಣ್ಯ ಜೋಶಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜುಲೈ ೧೧ರಂದು ಸ.ಪ.ಪೂ. ಕಾಲೇಜಿನಲ್ಲಿ ಲ್ಯಾಬ್ ಪುಡಿ‌ಪುಡಿ‌ ಎಂಬವರದಿಯನ್ನು ಉಡುಪಿ X press ನಲ್ಲಿ ಪ್ರಕಟಿಸಲಾಗಿತ್ತು. ವರದಿ ಪ್ರಕಟವಾಗುತ್ತಿದ್ದಂತೆಯೇ ಎಚ್ಚೆತ್ತ ಶಿಕ್ಷಣದ ಇಲಾಖೆ ಹಾಗೂ ಸಂಬಂಧಪಟ್ಟ  ಅಧಿಕಾರಿಗಳು ಶುಕ್ರವಾರ ಪ್ರತ್ಯಕ್ಷವಾಗಿದ್ದಾರೆ.ಘಟನೆಯ ಕುರಿತಂತೆ ‌ಜಿಲ್ಲಾಧಿಕಾರಿಗಳು ಸ್ಪಷ್ಟತೆ ನೀಡುವಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದ್ದು, ಆ ಮೇರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ […]

ಅಂತರ್ ಜಿಲ್ಲಾ ಗೋಕಳ್ಳ ಬಶೀರ್ ಬಂಧನ; ಉಜಿರೆ ಸೇರಿದಂತೆ ಹಲವೆಡೆ ಕಳ್ಳತನ ನಡೆಸಿದ್ದ ಬಶೀರ್

ಮಂಗಳೂರು: ಕಳೆದ ಕೆಲದಿನಗಳ‌ ಹಿಂದೆ ಉಜಿರೆ ಸಮೀಪ ಕಾರಿನಲ್ಲಿ‌ ಅಕ್ರಮ ದನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದೆ. ಬಶೀರ್ ಯಾನೆ ಆರ್ಗಾ ಬಶೀರ್ ಬಂಧಿತ ಆರೋಪಿ. ಮೂಡಬಿದ್ರೆಯ ತೋಡಾರ್ ಬಳಿ ಈತನನ್ನು ವಶಕ್ಕೆ ಪಡೆಯಲಾಗಿದೆ. ಹಲವಾರು ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ತಲೆ ಮರೆಸಿಕೊಂಡಿದ್ದು, ದನ ಕಳ್ಳತನವನ್ನೆ ಕಸುಬನ್ನಾಗಿಸಿಕೊಂಡಿದ್ದ. ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟವನ್ನೇ ಕಸುಬನ್ನಾಗಿಸಿಕೊಂಡಿದ್ದ ಈತನ ವಿರುದ್ದ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಕೇಸ್ ದಾಖಲಾಗಿದ್ದವು. ಸುರತ್ಕಲ್ ಕೃಷ್ಣಾಪುರ ನೈತಂಗಡಿಯಲ್ಲಿ ಮನೆಯಿಂದ […]

ದೋಸ್ತಿ ವಲಯದಲ್ಲಿ ಗಡಗಡ: ರೆಸಾರ್ಟ್‌ನತ್ತ ಬಿಜೆಪಿ ಶಾಸಕರು

ಬೆಂಗಳೂರು: ದೋಸ್ತಿ ಸರಕಾರದ  ರಾಜೀನಾಮೆ ಪರ್ವ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಸರ್ಕಾರ ಪತನಗೊಳ್ಳುವ ಭೀತಿಯಲ್ಲಿದ್ದ ದೋಸ್ತಿ ಸರ್ಕಾರ ಸುಪ್ರೀಂ ಆದೇಶದ ಬೆನ್ನಲ್ಲೇ ವಿಶ್ವಾಸ ಮತ ಯಾಚನೆಯ ಚಿಂತನೆ ನಡೆಸಿದೆ.  ಅತೃಪ್ತ ಶಾಸಕರ ರಾಜೀನಾಮೆಯಿಂದ ಸರ್ಕಾರ ಪತನಗೊಳ್ಳುವ ಭೀತಿಯಲ್ಲಿತ್ತು. ಆದರೆ ಸ್ಪೀಕರ್ ನಡೆ ಅತೃಪ್ತ ಶಾಸಕರಿಗೆ ಕೊಂಚ ತಲೆನೋವು ನೀಡಿತ್ತು. ಒಂದೆಡೆ ರಾಜೀನಾಮೆ ಅಂಗೀಕಾರವಾಗದ ತಲೆನೋವಾದರೆ ಮತ್ತೊಂದೆಡೆ ಮನವೊಲಿಸಲು ಬಂದಿದ್ದ ನಾಯಕರನ್ನು ಎದುರಿಸಲಾಗದ ಪರಿಸ್ಥಿತಿ. ಹೀಗಿರುವಾಗ ಅತೃಪ್ತ ನಾಯಕರು ಸ್ಪೀಕರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. […]

ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಬೈಕ್ ಸವಾರ ಸಾವು

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಶುಕ್ರವಾರ ಸಂಭವಿಸಿದೆ. ಸುಳ್ಯ ನಿವಾಸಿ ಶೀನಪ್ಪ ರೈ(53)  ಮೃತ ದುರ್ದೈವಿ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಶೀನಪ್ಪ ರೈ ಸುಬ್ರಹ್ಮಣ್ಯದ ಕೆ.ಎಸ್. ಎಸ್.ಕಾಲೇಜಿನಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.