ಹಿರಿಯಡ್ಕ: ಆರೋಗ್ಯವಂತ ಶಿಶು ಪ್ರದರ್ಶನ, ವಿಶ್ವ ಜನಸಂಖ್ಯಾ ದಿನಾಚಾರಣೆ

ಉಡುಪಿ, ಜುಲೈ 17: ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ, ಲಯನ್ಸ ಕ್ಲಬ್ ಹಿರಿಯಡ್ಕ ಹಾಗೂ ಲಯನ್ಸ ಕ್ಲಬ್ ಇಂದ್ರಾಳಿ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಮತ್ತು ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮವು ಬುಧವಾರ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಕೇಲ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯಡ್ಕ ಲಯನ್ಸ ಕ್ಲಬ್ ಅಧ್ಯಕ್ಷ ಮೋಹನ್‍ದಾಸ್ ಆಚಾರ್ಯ ಮತ್ತು ಇಂದ್ರಾಳಿ ಲಯನ್ಸ ಕ್ಲಬ್ ಅಧ್ಯಕ್ಷ ಹೃಷಿಕೇಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ […]

ಉಡುಪಿ: ವಲಸೆ ಕಾರ್ಮಿಕ ಸಾವು

ಉಡುಪಿ,ಜು.17: ಇಂದ್ರಾಳಿ ವಿಭುದಪ್ರೀಯ ನಗರ ಕಾಮಾಕ್ಷಿ ದೇವಸ್ಥಾನದ ಬಳಿ ಇರುವ ಮನೆಯೊಂದರಲ್ಲಿ ತೋಟದ ಕೆಲಸ ಮಾಡಲು ಹೋದ ವಲಸೆ ಕಾರ್ಮಿಕರೊಬ್ಬರು ಇದ್ದಕಿದ್ದಂತೆ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತ ವ್ಯಕ್ತಿಯು ಬಾಗಲಕೊಟೆ ಜಿಲ್ಲೆಯ ಶಿವಪ್ಪ (65) ಎಂದು ಗುರುತಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆ ನೀಡಿ, ಇಲಾಖೆಗೆ ಸಹಕರಿಸಿದ್ದಾರೆ.

ಜುಲೈ 19ಕ್ಕೆ ಶಿರೂರು ಸ್ವಾಮೀಜಿ ಸಂಸ್ಮರಣೆ.

ಉಡುಪಿ: ಶಿರೂರು ಮಠದ ಲಕ್ಷ್ಮೀವರತೀರ್ಥ ಶ್ರೀಪಾದರು ವೃಂದಾವನಸ್ಥರಾಗಿ ಒಂದು ವರುಷ ಕಳೆದ ಹಿನ್ನಲೆಯಲ್ಲಿ ಜುಲೈ 19 ರಂದು ಉಪ್ಪೂರಿನಲ್ಲಿರುವ ಸ್ಪಂದನ ವಿಶೇಷ ಮಕ್ಕಳ ಆಶ್ರಮದಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಶಿರೂರು ಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳ್ಳಿಗ್ಗೆ 11.30 ಕ್ಕೆ ಭಜನಾ ತಂಡದವರಿಂದ ಭಜನೆ ಕಾರ್ಯಕ್ರಮ‌ ನಡೆಯಲಿದ್ದು,  ಕಾರ್ಯಕ್ರಮದಲ್ಲಿ ಕೇಮಾರು ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿರುವರು‌. ಇದೇ ಸಂದರ್ಭದಲ್ಲಿ ಸ್ಪಂದನ ಶಾಲೆಯ ಮಕ್ಕಳಿಗೆ ಶಿರೂರು ಸ್ವಾಮೀಜಿಗಳ ಹೆಸರಿನಲ್ಲಿ ಅನ್ನದಾನ ಕೂಡ ನಡೆಯಲಿದೆ. ಶಿರೂರು ಶ್ರೀಗಳು […]

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಪಿಯ “ಎ ಡೇ ವಿತ್ ದಿ ಸೈನ್ಟ್: ಪುಸ್ತಕ ಹಸ್ತಾಂತರ

ಉಡುಪಿ: ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದರ ಚತುರ್ಥ ಮತ್ತು ಪಂಚಮ ಪರ್ಯಾಯದ ಒಂದು ದಿನದ ಯತಿ ಚರಿತೆಯನ್ನು ಕೃತಿ ಮೂಲಕ ಹೊರತಂದ ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೊ ಮೋಹನ್ ಅವರ ಚಿತ್ರ ಕೃತಿ ಎ ಡೇ ವಿತ್ ದಿ ಸೈನ್ಟ್ ಪುಸ್ತಕವನ್ನು ಗುರು ಪೂರ್ಣಿಮಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಹಾಗೂ ಸ್ವಾಮೀಜಿ ಅವರ ಆಪ್ತ ಕಾರ್ಯದರ್ಶಿ ಅನಂತ ಡಿ ಪಿ ಅವರು […]

ಮುಂದಿನ 6 ದಿನಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ: ಕರಾವಳಿಯ ವಿವಿದೆಡೆ ಮುಂದಿನ ಆರು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಕಡಲ ತೀರಗಳಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದ್ದು ಪ್ರವಾಸಿಗರ ಕುರಿತುನಿಗಾವಹಿಸುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಇಳಿಮುಖವಾಗಿದ್ದು ಇನ್ನಾದರೂ ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿಯಲಿದೆಯಾ ಎನ್ನುವ ನಿರೀಕ್ಷೆ ಮೂಡಿಸಿದೆ.