ಆಗಸ್ಟ್ ಅಂತ್ಯದೊಳಗೆ ಪಿ.ಜಿ. ಗಳ ನೊಂದಣಿ ಕಡ್ಡಾಯ: ಜಿಲ್ಲಾಧಿಕಾರಿ
ಉಡುಪಿ, ಜುಲೈ 17: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥ ಮಹಿಳೆಯರು ವಿವಿಧ ಪಿಜಿಗಳಲ್ಲಿ ಆಶ್ರಯ ಪಡೆದಿದ್ದು, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪಿ.ಜಿ.ಗಳನ್ನು ಆಗಸ್ಟ್ ಅಂತ್ಯದೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ. ಅವರು, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿ […]
ಗೋ ಶಾಲೆಗಳಿಗೆ ಬೆಂಬಲ ನೀಡುವ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಜುಲೈ 17: ಕನಿಷ್ಠ 50 ಸ್ವದೇಶಿ ಜಾನುವಾರುಗಳನ್ನು ಕಳೆದ 3 ವರ್ಷಗಳಿಂದ ಪೋಷಿಸುತ್ತಿದ್ದು, ನೋಂದಾಯಿತ ಟ್ರಸ್ಟ್ ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ 2019-20 ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದು, ಆಸಕ್ತ ಗೋಶಾಲೆಯವರು ಜುಲೈ 22 ರ ಒಳಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ಕಚೇರಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿಯ ಕಚೇರಿ ದೂರವಾಣಿ ಸಂಖ್ಯೆ: […]
ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆ: ಟೆಂಡರ್ ಆಹ್ವಾನ
ಉಡುಪಿ, ಜುಲೈ 17: ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಆತ್ಮ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಅಗತ್ಯವಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 5 ಹುದ್ದೆ, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 3 ಹುದ್ದೆ, ಉಪ ಯೋಜನಾ ನಿರ್ದೇಶಕರ 1 ಹುದ್ದೆ, ಕಂಪ್ಯೂಟರ್ ಪ್ರೋಗ್ರಾಮರ್ 1 ಹುದ್ದೆ, ಜಿಲ್ಲಾ ಸಲಹೆಗಾರ 1 ಹುದ್ದೆ ಹಾಗೂ ತಾಂತ್ರಿಕ ಸಹಾಯಕರ 2 ಹುದ್ದೆಯ ಸೇವೆಯನ್ನು ಪಡೆಯುವ ಬಗ್ಗೆ ಸೇವೆಯನ್ನು ಖಾಸಗಿ ಸಂಸ್ಥೆಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಪಡೆದುಕೊಳ್ಳಲು ಇಚ್ಛೆಯುಳ್ಳ ಸಂಸ್ಥೆಗಳಿಂದ […]