ಉಡುಪಿ: ಇಬ್ಬರು ಬೈಕ್ ಕಳ್ಳರ ಬಂಧನ 

ಉಡುಪಿ: ಜುಲೈ 2ರಂದು‌ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿ ಕಿನ್ನಿಮುಲ್ಕಿಯಲ್ಲಿ ಎರಡು‌ ಪಲ್ಸರ್ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಂಗಳೂರಿನ ವಳಚಿಲ್ ನಿವಾಸಿಗಳಾದ ಮಹಮ್ಮದ್ ಸಮೀರ್(21), ಮೊಹಮ್ಮದ್ ಅಲ್ತಾಪ್ (21) ಬಂಧಿತ ಆರೋಪಿಗಳು. ನಗರದ ಕರಾವಳಿ ಬೈಪಾಸ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 80 ಸಾವಿರ ಮೌಲ್ಯದ 2 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮಲ್ಪೆ ಪಿಎಸ್‌ಐ ಮಧು ಬಿ.ಇ, ಎಎಸ್‌ಐ ಸುದಾಕರ ಬಿ, ಎಎಸ್‌ಐ ರತ್ನಾಕರ ಕೆ, ಹೆಡ್‌ಕಾನ್‌ಸ್ಟೇಬಲ್ಗಳಾದ ರತ್ನಾಕರ, ಪ್ರವೀಣ್, ಸಂತೋಷ್, […]

ಮಂಗಳೂರು: ಸಾಂಕ್ರಮಿಕ ರೋಗಕ್ಕೆ ಆಹ್ವಾನ: 5000 ರೂ. ದಂಡ

ಮಂಗಳೂರು: ಡೆಂಗ್ಯು ಸೇರಿದಂತೆ ಸಾಂಕ್ರಾಮಿಕ ರೋಗ ಹರಡುವ ಜೀವಿಗಳಿಗೆ ಆಸ್ಪದ ನೀಡುವ ಅಂಗಡಿ ಮನೆ, ನಿರ್ಮಾಣ ಹಂತದ ಕಟ್ಟಡಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಹಾನಗರಪಾಲಿಕೆ ಅಧಿಕಾರಿಗಳು, ಶನಿವಾರ ಹಳೇ ಟಯರ್‍ಗಳಲ್ಲಿ ನೀರು ನಿಂತು ರೋಗಕ್ಕೆ ಆಹ್ವಾನ ನೀಡುತ್ತಿದ್ದ ವ್ಯಕ್ತಿಗೆ ರೂ. 5000 ದಂಡ ವಿಧಿಸಿದೆ. ಕಣ್ಣೂರು ಕೆಫೆಕಾರ್ಟ್ ಸಂಸ್ಥೆಯ ಮಾಲಕ ನಿಶಾನ್ ಚಂದ್ರ ಎಂಬವರು ತನ್ನ ಆವರಣದಲ್ಲಿ ಹಳೆಯ ಟಯರ್‍ಗಳನ್ನು ಇಟ್ಟಿದ್ದು, ಇದರಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳ ಉತ್ಪತ್ತಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ […]

ಪಚ್ಚನಾಡಿ ನಿರಾಶ್ರಿತರ ಪರಿಹಾರ‌ ಕೇಂದ್ರಕ್ಕೆ ಲೋಕಾಯುಕ್ತ ನ್ಯಾ.ಮೂ. ವಿಶ್ವನಾಥ ಶೆಟ್ಟಿ ಬೇಟಿ

ಮಂಗಳೂರು: ಮಂಗಳೂರಿನ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಹಾರ ಕೇಂದ್ರ ಎಲ್ಲಾ ಕಟ್ಟಡಗಳನ್ನು, ಅಡುಗೆ ಕೋಣೆ, ಶೌಚಾಲಯ, ಕೈತೋಟವನ್ನು ವೀಕ್ಷಿಸಿದರು. ಕೇಂದ್ರದ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು. ಅನಂತರ ಮಾತನಾಡಿದ ಅವರು, ನಗರದ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಮಂಗಳೂರು ತಹಶೀಲ್ದಾರ್‌ಗೆ ಈ ಸೂಚನೆ ನೀಡಿದರು. ಪ್ರಸಕ್ತ ನಿರಾಶ್ರಿತರ ಪರಿಹಾರ ಕೇಂದ್ರವು ಎರಡು ಎಕರೆ ಜಾಗದಲ್ಲಿದ್ದು, […]

ನೇಪಾಳದಲ್ಲಿ ತುಳು-ಕನ್ನಡ ಕಲರವ

ನೇಪಾಳ: ಪಶುಪತಿನಾಥನ ಪೂಜಾ ವಿಧಾನಗಳು ಸಂಪೂರ್ಣವಾಗಿ ವೈವಿಧ್ಯ ವಾಗಿದೆ. ತುಳುನಾಡಿನ ಮೂಲದವರಾದ ಶಿವಳ್ಳಿ ಬ್ರಾಹ್ಮಣರಿಗೆ ಮೂಲ ಅರ್ಚಕರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ ಎಂದು ನೇಪಾಳದ ಕಟ್ಮಂಡುವಿನಲ್ಲಿರುವ ಪಶುಪತಿನಾಥ ದೇವಸ್ಥಾನದ ಪ್ರಧಾನ ಅರ್ಚಕರಾದ ರಾವಲ್ ಗಣೇಶ ಭಟ್ ಅವರು ಹೇಳಿದರು. ಅವರು ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ತುಳು-ಕನ್ನಡ ಸ್ನೇಹ ಸಮ್ಮೇಳನನದಲ್ಲಿ ಅವರು ಮಾತನಾಡಿದರು.ತುಳು ಮತ್ತು ಕನ್ನಡ ಭಾಷೆ ಪರಸ್ಪರ ಅನ್ಯೋನ್ಯವಾಗಿದೆ. ಕರ್ನಾಟಕ ಪ್ರಧಾನ 2 ದ್ರಾವಿಡ ಭಾಷೆಗಳು ಇರುವ ಮಾದರಿ ರಾಜ್ಯವಾಗಿದೆ. ಆದುದರಿಂದ ಕನ್ನಡಿಗರು ಸೇರಿ ತುಳು […]

ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ 9ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಉಡುಪಿ: ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ 9ನೇ ವಾರದ ಪರಿಸರ ಸ್ನೇಹಿ ಅಭಿಯಾನವು ಶನಿವಾರ ಸಂಜೆ ಅಜ್ಜರಕಾಡು ಉದ್ಯಾನವನದಲ್ಲಿ ನಡೆಯಿತು. ಹಿರಿಯ ವೈದ್ಯ ಡಾ. ಸುರೇಶ್ ಚಂದ್ರ ಶೆಟ್ಟಿ ಅವರು ಚಾಲನೆ ನೀಡಿದರು. ಬಟ್ಟೆ ಚೀಲಗಳನ್ನು ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವೇಂದ್ರ ನಾಯಕ್, ಅವ್ಯಾಹತವಾಗಿ ಮರಗಳನ್ನು ಕಡಿಯುವುದರಿಂದ ಅರಣ್ಯ ವ್ಯಾಪ್ತಿ ಕಡಿಮೆಯಾಗುತ್ತಿದೆ. ಪರಿಸರವನ್ನು ನಾಶಮಾಡಿದರೆ ಮಾನವ ಜನಾಂಗದ ವಿನಾಶಕ್ಕೆ ದಾರಿ ಮಾಡಿಕೊಡುತ್ತದೆ. ಸಾಧ್ಯವಾದಷ್ಟು ಮಟ್ಟಿಗೆ […]