ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಉತ್ತರಪ್ರದೇಶದಲ್ಲಿ ನಡೆದ ಗೋಲಿಬಾರ್ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಶನಿವಾರ ಉಡುಪಿ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಧರಣಿ ನಡೆಸಿತು.ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಜನರ ನೋವಿನಲ್ಲಿ ಭಾಗಿಯಾಗಲು ಹೋದ ಪ್ರಿಯಾಂಕ ಗಾಂಧಿ ಯನ್ನು ಯೋಗಿ ನೇತೃತ್ವದ ಬಿಜೆಪಿ ಸರಕಾರ ತಡೆದು ದಾರಿ ಮಧ್ಯೆ ನಿಲ್ಲಿಸಿ, ಬಂಧಿಸಿ ಅಮಾನವೀಯವಾಗಿ ವರ್ತಿಸಿದೆ. ಇಂತಹ […]
ಆಗಸ್ಟ್ 4ರಿಂದ ಮಂಗಳೂರು – ಹೊಸದಿಲ್ಲಿ ಮಧ್ಯೆ ಮತ್ತೆ ವಿಮಾನ ಯಾನ ಆರಂಭ
ಮಂಗಳೂರು: ಮಂಗಳೂರಿನಿಂದ ಹೊಸದಿಲ್ಲಿಗೆ ನೇರ ಸಂಪರ್ಕ ಕಲ್ಪಿಸುವ ಸ್ಪೈಸ್ ಜೆಟ್ ಆಗಸ್ಟ್ 4ರಿಂದ ಆರಂಭಗೊಳ್ಳಲಿದೆ. ಕೆಲ ತಿಂಗಳಿನಿಂದ ಮಂಗಳೂರು-ಹೊಸದಿಲ್ಲಿ ನೇರ ವಿಮಾನ ಸ್ಥಗಿತಗೊಂಡಿತ್ತು. ಬೆಳಗ್ಗೆ 6.15ಕ್ಕೆ ಮಂಗಳೂರಿನಿಂದ ಹೊರಡುವ ವಿಮಾನ ಬೆಳಗ್ಗೆ 8.55ಕ್ಕೆ ಹೊಸದಿಲ್ಲಿ ತಲುಪಲಿದೆ. ಪ್ರತಿದಿನ ರಾತ್ರಿ 8.30ಕ್ಕೆ ಹೊಸದಿಲ್ಲಿಯಿಂದ ಹೊರಡುವ ವಿಮಾನ ರಾತ್ರಿ 11.15ಕ್ಕೆ ಮಂಗಳೂರು ತಲುಪಲಿದೆ. ಈ ಹಿಂದೆ ಹೊಸದಿಲ್ಲಿಗೆ ಮಂಗಳೂರಿನಿಂದ ಒಂದು ಜೆಟ್ ಏರ್ವೇಸ್ ಸಂಚರಿಸುತ್ತಿತ್ತು. ಕೆಲವು ತಿಂಗಳಿನಿಂದ ಆ ವಿಮಾನವೂ ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಹೀಗಾಗಿ ಮಂಗಳೂರಿನಿಂದ ಹೊಸದಿಲ್ಲಿಗೆ ನೇರ […]
ಎರಡು ದಿನ ಮಂಗಳೂರು-ಬೆಂಗಳೂರು ರೈಲು ಓಡಾಟ ಸ್ಥಗಿತ
ಮಂಗಳೂರು: ಬಂಡೆಕಲ್ಲು ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿಇಂದು ಮತ್ತು ನಾಳೆ ಮಂಗಳೂರು – ಬೆಂಗಳೂರು ನಡುವಿನ ರೈಲು ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿಯಲ್ಲಿ ಅಪಾಯಕಾರಿ ಬಂಡೆ ಬಿದ್ದಿದೆ. ಇದನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಜತೆಗೆ ಈ ಅಪಾಯಕಾರಿ ಬಂಡೆ ಯಾವುದೇ ಕ್ಷಣದಲ್ಲಿ ರೈಲು ಹಳಿಯ ಮೇಲೆ ಉರುಳಿ ಬಿಳುವ ಸಾಧ್ಯತೆ […]
ಮಂಗಳೂರು:ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಪ್ರತಿಭಟನೆ
ಮಂಗಳೂರು: ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಬಂಧನವನ್ನು ಖಂಡಿಸಿಮಂಗಳೂರಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಉತ್ತರ ಪ್ರದೇಶದಲ್ಲಿ ಆಸ್ತಿ ವಿವಾದದ ಹೆಸರಲ್ಲಿ ಗಲಭೆ ನಡೆದಿದ್ದು, ಹತ್ಯೆಯಾದ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಿಯಾಂಕಾ ಹೋಗಿದ್ದಾಗ ಅವರನ್ನು ಬಂಧಿಸಲಾಗಿದೆ. ಬಿಜೆಪಿ ಸರಕಾರದಿಂದ ಅಧಿಕಾರ ದುರ್ಬಳಕೆ ಆಗಿದೆ. ದೇಶದಲ್ಲಿ ಬಿಜೆಪಿಗರು ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಕಿಡಿಕಾರಿದರು.ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರು, ಮಹಿಳಾ ಕಾಂಗ್ರೆಸ್ ನ ಪ್ರಮುಖರು ಉಪಸ್ಥಿತರಿದ್ದರು.
ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಇನ್ನಿಲ್ಲ
ನವದೆಹಲಿ:ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ (81) ಶನಿವಾರ ನಿಧನರಾಗಿದ್ದಾರೆ. ಶೀಲಾದೀಕ್ಷಿತ್ ಕಾಂಗ್ರೆಸ್ ಮುಖಂಡರಾಗಿ,1998-2013 ರ ವರೆಗೆ ದೆಹಲಿಯ ಮುಖ್ಯ ಮಂತ್ರಿಯಾಗಿ ಜನಪ್ರಿಯರಾಗಿದ್ದರು. ತಮ್ಮ 81 ನೇ ವಯಸ್ಸಿನಲ್ಲಿ ದೆಹಲಿ ಈಶಾನ್ಯ ಕ್ಷೇತ್ರದಂದ ಸ್ಪರ್ಧಿಸಿದ್ದ ಇವರು ತಮ್ಮ ವಿಶೇಷ ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು.