ಆಟಿ ತಿಂಗಳ ಆಹಾರ ಔಷದೀಯ ಗುಣ ಹೊಂದಿದ್ದವು: ಸರಳಾ ಕಾಂಚನ್
ಉಡುಪಿ: ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳು ಔಷಧಿಯ ಗುಣಗಳನ್ನು ಹೊಂದಿದ್ದವು. ಆದರೆ ಇಂದು ನಮ್ಮ ಮಕ್ಕಳು ಫಾಸ್ಟ್ಫುಡ್ಗಳನ್ನು ತಿನ್ನುತ್ತ ಆಟಿ ಆಹಾರವನ್ನು ಮರೆತು ಬಿಡುತ್ತಿದ್ದಾರೆ. ಹೀಗಾಗಿ ಆಟಿಯ ಆಹಾರಗಳ ಮಹತ್ವವನ್ನು ನಮ್ಮಮಕ್ಕಳಿಗೆ ತಿಳಿಸಿಕೊಡಬೇಕಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಸರಳಾ ಕಾಂಚನ್ ಹೇಳಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ಭಾನುವಾರ ಆಯೋಜಿಸಿದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲ ಬದಲಾದಂತೆ ಮನುಷ್ಯನ ಜೀವನ ಶೈಲಿಯೂ ಬದಲಾಗುತ್ತಿದೆ. ಆದರೆ ಪ್ರಕೃತಿಗೆ ವಿರುದ್ಧವಾದ ಮನುಷ್ಯನ ಬದಲಾವಣೆ ಸಾಕಷ್ಟು ಪರಿಣಾಮವನ್ನು […]
ಸಮಾಜ-ಭಗವಂತನ ಸೇವೆಯಿಂದ ಮನುಷ್ಯನ ಬದುಕಿಗೆ ಸಾರ್ಥಕತೆ: ಪೇಜಾವರ ಶ್ರೀ
ಉಡುಪಿ: ಸಮಾಜದಿಂದ ಪಡೆದ ಸಂಪತ್ತಿನ ಸ್ವಲ್ಪ ಭಾಗವನ್ನು ನಾವು ಭಗವಂತ ಹಾಗೂ ಸಮಾಜಕ್ಕೆ ವಿನಿಯೋಗಿಸಬೇಕು. ಆಗ ಮನುಷ್ಯನ ಬದುಕಿಗೆ ಸಾರ್ಥಕತೆ ತುಂಬುತ್ತದೆ. ದೇವರ ಅನುಗ್ರಹ ಮತ್ತು ಸಮಾಜದ ಸಹಕಾರವಿಲ್ಲದೆ, ಯಾವ ವ್ಯಕ್ತಿಯೂ ಜೀವನದಲ್ಲಿ ಉತ್ತುಂಗ ಶಿಖರಕ್ಕೆ ಏರಲು ಸಾಧ್ಯವಿಲ್ಲ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಅಂಬಲಪಾಡಿ ಶ್ಯಾಮಿಲಿ ಸಭಾಭವನದಲ್ಲಿ ಭಾನುವಾರ ನಡೆದ ಉದ್ಯಮಿ ಭುವನೇಂದ್ರ ಕಿದಿಯೂರು ಅವರ ೭೫ರ ಸಂಭ್ರಮ ಮತ್ತು ರತ್ನೋತ್ಸವ- ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರನ್ನು ನಿತ್ಯ ಪೂಜಿಸುವವರಿಗೆ ಯಾವುದೇ […]
ಮಂಗಳೂರು: ಅಧಿಕಾರಿಗಳಿಂದ ಸ್ವಚ್ಚತಾ ಕಾರ್ಯಾಚರಣೆ ಬಿಗು, ದಂಡ
ಮಂಗಳೂರು: ಮಂಗಳೂರಿನಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆಯಲ್ಲಿ ಜೆಪ್ಪು, ಬೋಳಾರ, ಗುಜ್ಜರಕೆರೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮದ ಜತೆ ದಂಡ ವಸೂಲಾತಿ ಮಾಡಲಾಯಿತು. ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳಿಗೆ ಆಸ್ಪದ ನೀಡುವ ಅಂಗಡಿ, ಮನೆ, ನಿರ್ಮಾಣ ಹಂತದ ಕಟ್ಟಡಗಳ ವಿರುದ್ಧ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆಯನ್ನು ಬಿಗಿಗೊಳಿಸಿದ್ದಾರೆ. ಹಳೇ ಟೈರ್ಗಳಲ್ಲಿ ನೀರು ನಿಂತು ರೋಗಕ್ಕೆ ಆಹ್ವಾನ ನೀಡುತ್ತಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿದ ಘಟನೆ ಶನಿವಾರ ನಡೆದಿತ್ತು. ಕಣ್ಣೂರು ಕೆಫೆಕಾರ್ಟ್ ಸಂಸ್ಥೆಯ ಮಾಲೀಕ ನಿಶಾನ್ ಚಂದ್ರ […]
ಮಂಗಳೂರು: ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಖಾಸಗಿ ಕಂಪೆನಿಯ ಮೇಲ್ವಿಚಾರಕರೊಬ್ಬರು ಬಲಿಯಾಗಿದ್ದಾರೆ. ನವೀನ್ ಚಂದ್ರ ಕದ್ರಿ (56), ಮೃತಪಟ್ಟವರು. ಅವರು ಆ್ಯಂಟನಿ ವೇಸ್ಟ್ ಎಂಬ ಕಂಪೆನಿಯ ಮಂಗಳೂರು ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತೀವ್ರ ಜ್ವರಕ್ಕೆ ತುತ್ತಾಗಿದ್ದ ನವೀನ್ ಚಂದ್ರ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡೆಂಗ್ಯೂ ಬಾಧಿಸಿರುವುದು ಪತ್ತೆಯಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.
ಉಪ್ಪಿನಂಗಡಿ: ಕಂದಕಕ್ಕೆ ಉರುಳಿದ ಗ್ಯಾಸ್ ಸಿಲಿಂಡರ್ ಟ್ಯಾಂಕರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಘಟನೆ ಭಾನುವಾರ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.