ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಹಾಗೂ ಪ್ರೌಢ ಶಾಲೆಗಳಿಗೆ ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಜು.25ರವರೆಗೆ ಪ್ರತಿದಿನ 200 ಮಿ.ಮೀ. ಮಳೆಯಾಗುವ ಸಾಧ್ಯತೆಯಿದ್ದು ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದ.ಕ.ಜಿಲ್ಲೆ ಭಾರೀ ಮಳೆ ಹಿನ್ನೆಲೆ ಜು. 23ರಂದು ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.23ರಂದು ರಜೆ ಘೋಷಿಸಲಾಗಿದೆ. 25 ರ ವರೆಗೆ ರೆಡ್ ಅಲರ್ಟ್ ಘೋಷಿಸಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೇ ಮೀನುಗಾರರಿಗೆ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯಯಂತೆ ಸೂಚಿಸಿದ್ದಾರೆ.
ನಾಟ್ಯದ ತಲೆಬುಡ ಗೊತ್ತಿಲ್ಲದವರಿಗೆ ಚಾನ್ಸ್ ಕೊಡೋದಕ್ಕಿಂತ ವಿನೋದ್ ರಾಜ್ ಗೆ ಕೊಡಿ: ಟ್ವಿಟರ್ ನಲ್ಲಿ ನಟ ಜಗ್ಗೇಶ್ ಮನವಿ
ಒಂದು ಕಾಲದಲ್ಲಿ ಡಾನ್ಸಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿದ್ದ, ಈಗ ಬಹುತೇಕ ತೆರೆ ಮರೆಗೆ ಸರಿದಿರುವ ನಟ ವಿನೋದ್ ರಾಜ್ ಪರ ನಟ ಜಗ್ಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನಟ ವಿನೋದ್ ರಾಜ್ ಬಗ್ಗೆ ಕಳಕಳಿ ವ್ಯಕ್ತಪಡಿಸುವ ಮೂಲಕ ಸಮಾಜಕ್ಕೆ ಸಂದೇಶವೊಂದನ್ನು ರವಾನಿಸಿದ್ದಾರೆ. ಇಂದಿನ ಡ್ಯಾನ್ಸ್ ಸ್ಟಾರ್ಗಳು ಹುಟ್ಟವ ಮೊದಲೇ 1987ರಲ್ಲೇ ಕನ್ನಡಿಗರಲ್ಲಿ ಹುಚ್ಚೆಬ್ಬಿಸಿದ್ದ ಪ್ರತಿಭಾವಂತ ನಟ ವಿನೋದ್ ರಾಜ್. ನಾಟ್ಯದ ವ್ಯಾಕರಣ ಅರಿಯದವರನ್ನು ರಿಯಾಲಿಟಿಗೆ ಶೋ ತೀರ್ಪುಗಾರರನ್ನಾಗಿ ಮಾಡುವ ಬದಲು ವಿನೋದ್ ಅವರ ಪ್ರತಿಭೆಯನ್ನು ಬಳಸಿಕೊಳ್ಳಿ, […]
ಐ.ಬಿ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ
ಉಡುಪಿ, ಜುಲೈ 22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಿದೆ. ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‍ಗಳವರು ಮುಂದೆ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಜುಲೈ 31 ರ ಒಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ […]
ಬಿ.ಎಡ್, ಡಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ
ಉಡುಪಿ, ಜುಲೈ 22: 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ )ಸಮುದಾಯದ ವಿದ್ಯಾರ್ಥಿಗಳಿಗೆ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆಫ್‍ಲೈನ್ ಅರ್ಜಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‍ಸೈಟ್ https://gokdom.kar.nic.in ಅಥವಾ https://dom.karnataka.gov.in/udupi ರಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಸೂಚಿಸಲಾದ ಎಲ್ಲಾ ದಾಖಲಾತಿಗಳೊಂದಿಗೆ ಆಗಸ್ಟ್ 31 ರ ಒಳಗೆ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: […]