ವಿಶ್ವಾಸ ಮತಕ್ಕೆ ಸೋಲು: ರಾಜ್ಯದಲ್ಲಿ ಮೈತ್ರಿ ಸರಕಾರ ಪತನ
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಜಂಗಿ ಕುಸ್ತಿಗೆ ಕಾರಣವಾಗಿದ್ದ ವಿಧಾನ ಸಭೆಯಲ್ಲಿ ಕೊನೆಗೂ ಮಂಗಳವಾರ ಸಂಜೆ ವಿಶ್ವಾಸ ಮತ ಪರ ವಿರುದ್ಧ ನಡೆದ ಚರ್ಚೆ ಬಳಿಕ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸಮ್ಮಿಶ್ರ ಸರಕಾರಕ್ಕೆ ಸೋಲಾಗಿದ್ದು, ಕುಮಾರ ಸ್ವಾಮಿ ನೇತೃತ್ವದ ದೋಸ್ತಿ ಸರಕಾರ ಪತನಗೊಂಡಿದೆ. ಆ ಮೂಲಕ ದೋಸ್ತಿ ಸರಕಾರ ಒಂದು ವರ್ಷದ ಆಡಳಿತ ಕೊನೆಗೊಂಡಿದೆ. ವಿಶ್ವಾಸ ಮತದಾನದ ಚರ್ಚೆಯ ಸಂದರ್ಭ ಒಂದು ಹಂತದಲ್ಲಿ ಸಿಎಂ ತಾನು ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು. ಆದರೆ ಕೊನೆಗೆ […]
ನಮ್ಮ ಸಂಸ್ಕೃತಿ-ಪರಂಪರೆ ಮುಂದಿನ ತಲೆಮಾರಿಗೆ ತಿಳಿಸಲು ಮಾಧ್ಯಮ ಸಂಪರ್ಕ ಸೇತುವೆ: ಪ್ರಕಾಶ್ ಇಳಂತಿಲ
ಮಂಗಳೂರು: ಧನಾತ್ಮಕ ದೃಷ್ಟಿಕೋನದ ಪತ್ರಿಕೋದ್ಯಮದಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ಕಟ್ಟಲು ಸಾಧ್ಯ. ನಮ್ಮ ಸಂಸ್ಕೃತಿ, ಪರಂಪರೆಯ ನೆಲೆಗಟ್ಟನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಮಾಧ್ಯಮಗಳು ಸೇತುವೆಯಾಗಿ ಕಾರ್ಯ ನಿರ್ವಹಿಸುತಿವೆ ಎಂದು ಹೊಸದಿಗಂತ ಪತ್ರಿಕೆಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಹೇಳಿದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ‘ಮಾಧ್ಯಮ ಮತ್ತು ಪ್ರಚಲಿತ ವಿದ್ಯಮಾನ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು. ಸ್ವಾತಂತ್ರ್ಯವನ್ನೂ ಪ್ರಜಾಪ್ರಭುತ್ವವನ್ನೂ ಜನರು ಸರಿಯಾಗಿ […]
ಅಗಲಿದ ಪತ್ರಕರ್ತ ನಾಗೇಶ್ ಪಡು ಅವರಿಗೆ ಸಂಘದಿಂದ ನುಡಿ ನಮನ
ಮಂಗಳೂರು: ಡೆಂಗ್ಯೂ ಜ್ವರದಿಂದ ಭಾನುವಾರ ರಾತ್ರಿ ಸಾವನ್ನಪ್ಪಿದ ಖಾಸಗಿ ಸುದ್ದಿವಾಹಿನಿಯ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ನಡೆದ ಸಭೆಯಲ್ಲಿ ಅಗಲಿದ ನಾಗೇಶ್ ಅವರಿಗೆ ಪತ್ರಕರ್ತರು ನುಡಿನಮನ ಸಲ್ಲಿಸಿದರು. ಮೌನಪ್ರಾರ್ಥನೆ ಸಲ್ಲಿಸಿ ಅಗಲಿದ ಆತ್ಮಕ್ಕೆ ಸದ್ಗತಿ ಕೋರಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಸದಾ […]
ದ.ಕ.ಜಿಲ್ಲೆ: ಮಂಗಳವಾರವೂ ನಿರಂತರ ಮಳೆ, ವಿವಧೆಡೆ ಹಾನಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರವೂ ನಿರಂತರ ಮಳೆ ಸುರಿಯುತ್ತಿದ್ದು, ಮಳೆಯಿಂದ ಕೆಲವು ಹಾನಿ ಸಂಭವಿಸಿದೆ. ಜಿಲ್ಲೆಯ ಮೂಡಬಿದಿರೆ, ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ ಭಾಗಗಳಲ್ಲೂ ಉತ್ತಮ ಮಳೆಯಾಗುತ್ತಿದೆ. ಮಂಗಳೂರು ಅಲೋಶಿಯಸ್ ಕಾಲೇಜಿನ ರಸ್ತೆಯ ಪಕ್ಕದಲ್ಲಿ ಮಣ್ಣು ಕುಸಿದು ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೇ ಮಂಗಳೂರು ಹೊರವಲಯದ ಅದ್ಯಪಾಡಿಯಲ್ಲೂ ರಸ್ತೆಗೆ ಮಣ್ಣು ಕುಸಿದು ಕೆಲ ಕಾಲ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಉಡುಪಿ: ನಿರಂತರ ಮಳೆ ಹಿನ್ನೆಲೆ, ಜು.24ರಂದು ಶಾಲಾ ಕಾಲೇಜು ರಜೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜುಲೈ 24ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು, ಪದವಿ ಕಾಲೇಜುಗಳಿಗೆ ರಜೆ ಘೋಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.