ಯಡಿಯೂರಪ್ಪ ಪ್ರಮಾಣವಚನ ದ.ಕ.ಜಿಲ್ಲೆಯ ವಿವಿದೆಡೆ ಸಂಭ್ರಮಾಚರಣೆ

ಮಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ  ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿ ಸಂಭ್ರಮಿಸಿದರು. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ತಕರ್ತರು ಬಿಜೆಪಿಯ ಧ್ವಜ ಹಿಡಿದುಕೊಂಡು ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ, ರಾಜ್ಯದ ಅಪವಿತ್ರ, ಅನಿಷ್ಟ ಮೈತ್ರಿ ಕೊನೆಗೊಂಡಿದೆ. ಯಡಿಯೂರಪ್ಪ ಆಡಳಿತದಲ್ಲಿ ರಾಜ್ಯದಲ್ಲಿ ಮತ್ತೆ ಅಭಿವೃದ್ಧಿ ನಡೆಯಲಿದೆ ಎಂದು ಹೇಳಿದರು. ಹಾಗೆಯೇ […]

ಸಾರ್ವಜನಿಕ ಕ್ಷೇತ್ರದಲ್ಲಿ ತೊಡಗಿಸಿ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಮಂಜುನಾಥ್

ಉಡುಪಿ: ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಜತೆಗೆ ಸಾರ್ವಜನಿಕ ಜೀವನಕ್ಕೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾಯಕತ್ವ ಗುಣಗಳನ್ನು ಬೆಳೆಸಿ ಕೊಳ್ಳಬೇಕು, ಎಂದು ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ಹೇಳಿದರು. ಅವರು ಶುಕ್ರವಾರ ಮಣಿಪಾಲ ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಾರ್ಲಿಮೆಂಟ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶಾಲಾ‌ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಘಟನೆ ಕೇವಲ ಶಾಲಾ ವಾರ್ಷಿಕೋತ್ಸವಕ್ಕೆ ಮಾತ್ರ ಸೀಮಿತವಾಗಿದ್ದು, ಕಲಿಕೆಯ ಒತ್ತಡಗಳಿಂದ ಇತರ ಚಟುವಟಿಕೆಗಳನ್ನು ಆಯೋಜನೆ ಮಾಡುವುದು ಕಷ್ಟಕರ. ಆದರೆ ಸಾರ್ವಜನಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು  ಎಂದರು. […]

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಬಿರುಸಿನ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿಯಿತು. ಮುಂಜಾನೆಯಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ‌ ಮಂಗಳೂರಿನ ವಿವಿಧೆಡೆ ನೀರು ತುಂಬಿ ಜನರ ಓಡಾಟಕ್ಕೆ ಅಡಚಣೆ ಉಂಟಾಯಿತು. ಪಾಂಡೇಶ್ವರ ಸಮೀಪದ ಸುಭಾಷ್ ನಗರ ಪ್ರಥಮ ಕ್ರಾಸ್ ಸಂಪೂರ್ಣ ಜಲಾವೃತವಾಗಿತ್ತು. ಹಾಗೆಯೇ ಕೇಂದ್ರ ರೈಲು ನಿಲ್ದಾಣಕ್ಕೆ ಮತ್ತೆ ನೀರು ನುಗ್ಗಿದೆ. ಕೃತಕ ನೆರೆಯಿಂದ ರೈಲು ನಿಲ್ದಾಣದ ಆವರಣ ಕೆರೆಯಂತಾಗಿತ್ತು. ರೈಲು ನಿಲ್ದಾಣಕ್ಕೆ ಆಗಮಿಸುವ, ನಿರ್ಗಮಿಸುವ ಪ್ರಯಾಣಿಕರು ಪರದಾಡುವಂತಾಗಿದೆ. ನಗರದ ಫಳ್ನೀರ್ ರಸ್ತೆ, ಕೊಟ್ಟಾರ ಚೌಕಿ ಜಲಾವೃತಗೊಂಡಿತು. ಒಳಚರಂಡಿಯಲ್ಲಿ […]

ಸಾಲಿಗ್ರಾಮ ಪ.ಪಂ.: ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಜುಲೈ 26: ಜಿಲ್ಲೆಯಲ್ಲಿ ಮಳೆಗಾಲವು ಈಗಾಗಲೇ ಆರಂಭವಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ತೊಂದರೆಯಾಗದಂತೆ ಸಾಕಷ್ಟು ಮುಂಜಾಗೃತೆ ವಹಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ. ವ್ಯಾಪಾರಸ್ತರು ಪ್ಲಾಸ್ಟಿಕ್‍ನ್ನು ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಚರಂಡಿಗೆ ಕಸಕಡ್ಡಿಗಳನ್ನು/ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡುವುದನ್ನು ನಿಷೇಧಿಸಲಾಗಿದ್ದು, ಗೂಡಂಗಡಿ ಮಾಲೀಕರು ಉಪಯೋಗಿಸಿದ ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಲು ಸೂಚಿಸಿದೆ. ಕೆಲವೆಡೆ ಈಗಾಗಲೇ ಡೆಂಗ್ಯೂ ರೋಗ ಕಾಣಿಸಿದ್ದು, ಡೆಂಗ್ಯೂ ಖಾಯಿಲೆಯು ವೈರಸ್ ರೋಗಾಣುವಿನಿಂದ ಉಂಟಾಗುವುದು ಮತ್ತು ಈಡೀಸ್ ಸೊಳ್ಳೆಗಳು ಕಚ್ಚುವುದರಿಂದ ರೋಗವು ಒಬ್ಬರಿಂದ […]

ಕೋಟ: ವಿಶ್ವ ಜನಸಂಖ್ಯಾ ದಿನಾಚರಣೆ

ಉಡುಪಿ, ಜುಲೈ 26: ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯು ಗುರುವಾರ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಸದಸ್ಯೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಉದ್ಘಾಟಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ […]