ಅಪರಿಚಿತ ವ್ಯಕ್ತಿಗಳನ್ನು ಮನೆಯತ್ತ ಸೇರಿಸಬೇಡಿ: ಉಡುಪಿ ಎಸ್ಪಿ ನಿಶಾ ಜೇಮ್ಸ್
ಉಡುಪಿ:ಅಪರಿಚಿತ ವ್ಯಕ್ತಿಗಳನ್ನು ಮನೆಯತ್ತ ಸೇರಿಸಬೇಡಿ, ಮನೆಯಲ್ಲಿ ಒಂಟಿ ಮಹಿಳೆಯರು ಇರುವ ಸಂದರ್ಭದಲ್ಲಿ ಯಾವುದೇ ಅಪರಿಚಿತ ವ್ಯಕ್ತಿಗಳನ್ನು ಮನೆಯತ್ತ ಸೇರಿಸಬಾರದು ಎಂದು ಎಸ್ಪಿ ನಿಶಾ ಜೇಮ್ಸ್ ತಿಳಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಇರಾನಿ ಗ್ಯಾಂಗ್ ಎನ್ನುವ ಹೆಸರಿನಿಂದ ಹೊರ ರಾಜ್ಯಗಳಿಂದ ಬಂದ ಕೆಲ ವ್ಯಕ್ತಿಗಳು ಬೆಡ್ ಶೀಟ್, ಕಂಬಳಿ ಗೃಹಪಯೋಗಿ ಸಂಬಂಧಿತ ವಸ್ತುಗಳನ್ನು ಮಾರುವ ನೆಪದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಸುಲಿಗೆ ಮಾಡುತ್ತಿರುವ ಕುರಿತು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಜಿಲ್ಲೆಯಲ್ಲಿ ಈವರೆಗೆ ಇಂತಹ ಯಾವುದೇ ಘಟನೆಗಳು […]
ಮಾಸ್ ಇಂಡಿಯಾ ಮಾಹಿತಿ ಸೇವಾ ಸಮಿತಿಯಿಂದ ಪ್ರತಿಭಟನೆ
ಉಡುಪಿ: ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯ ತಿದ್ದುಪಡಿ ವಿರೋಧಿಸಿ ಹಾಗೂ ಸ್ವತಂತ್ರ ಕಾರ್ಯನಿರ್ವಹಣೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಮಾಸ್ ಇಂಡಿಯಾ ಮಾಹಿತಿ ಸೇವಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು. ಮಾಸ್ ಇಂಡಿಯಾ ಮಾಹಿತಿ ಸೇವಾ ಸಮಿತಿಯ ಕರ್ನಾಟಕದ ಅಧ್ಯಕ್ಷ ಜಿ.ಎ. ಕೋಟೆಯಾರ್ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ಮಾಡುವ ಮೂಲಕ ರಾಜಕೀಯ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡಲಾಗುತ್ತಿದೆ. ಇದರಿಂದ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ತಮ್ಮ ಆಸ್ತಿಯನ್ನು ಹೆಚ್ಚಿಸಿಕೊಂಡು ಮುಂದೆ ಅವರೇ ಈ […]
ಕಾರ್ಕಳ: ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರು- ಪ್ರವಾಸೋದ್ಯಮಕ್ಕೆ ಹಣ ಮಂಜೂರು ಮಾಡುವಂತೆ ಮನವಿ
ಬೆಂಗಳೂರು: ಕಾರ್ಕಳ ತಾಲೂಕಿನಲ್ಲಿ ನೀರಾವರಿ ಯೋಜನೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಪ್ರವಾಸೋದ್ಯಮಕ್ಕೆ ಶೀಘ್ರದಲ್ಲಿ ಹಣ ಮಂಜೂರು ಮಾಡುವಂತೆ ಒತ್ತಾಯಿಸಿ ಶಾಸಕ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.
ನಿಟ್ಟೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫೆಮಿಲಿಯರೈಸೇಶನ್
ನಿಟ್ಟೆ: ಕರ್ನಾಟಕದ ಪ್ರತಿಷ್ಠಿತ ತಾಂತ್ರಿಕ ಮಹಾವಿದ್ಯಾಲಯಗಳಲ್ಲೊಂದಾದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು.29 ರಂದು ಮೊದಲನೇ ವರ್ಷದ ಬಿ.ಇ ಕೋರ್ಸ್ ಸೇರಿರುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಹೆತ್ತವರಿಗೆ “ನಿಟ್ಟೆ ಫೆಮಿಲಿಯರೈಸೇಶನ್” ಕಾರ್ಯಕ್ರಮ ನಡೆಯಿತು. ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್.ವಿನಯ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಂಪೆನಿಯ ಅಗತ್ಯತೆಗೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕು. ಐಚ್ಛಿಕ ವಿಷಯಗಳಲ್ಲಿ ಸಮರ್ಥ ಬೆಳವಣಿಗೆ ತೋರುವುದು ಅಗತ್ಯ. ನಿಟ್ಟೆ ತಾಂತ್ರಿಕ ವಿದ್ಯಾಲಯವು ನಿಮ್ಮನ್ನು ಈ ದೃಷ್ಠಿಯಲ್ಲಿ ತಯಾರುಮಾಡಲು ಇಚ್ಘಿಸುತ್ತದೆ. ವಿದ್ಯೆ ಹಾಗೂ ಉದ್ಯೋಗದೊಂದಿಗೆ […]
ಹೆಮ್ಮಾಡಿ ಆಟೋ ಚಾಲಕರ ಸಭೆ
ಹೆಮ್ಮಾಡಿ: ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಆಟೋ ಚಾಲಕರು ಪೊಲೀಸರಿಗೆ ಸಹಕಾರ ನೀಡಬೇಕು. ಹಗಲಿರುಳು ದುಡಿದು ಸಾರ್ವಜನಿಕರಿಗೆ ಪ್ರಾಮಾಣಿಕ ಸೇವೆ ಒದಗಿಸುತ್ತಿರುವ ಆಟೋ ಚಾಲಕರ ಕಾರ್ಯ ಶ್ಲಾಘನೀಯವಾದುದು ಎಂದು ಕುಂದಾಪುರ ಸರ್ಕಲ್ ಇನ್ಸ್‌ಪೆಕ್ಟರ್ ಡಿ.ಆರ್ ಮಂಜಪ್ಪ ಹೇಳಿದರು. ಅವರು ಸೋಮವಾರ ಬೆಳಿಗ್ಗೆ ಹೆಮ್ಮಾಡಿ ಆದರ್ಶ ಯುವಕ ಮಂಡಲದಲ್ಲಿ ನಡೆದ ಆಟೋ ಚಾಲಕರ ಸಭೆಯಲ್ಲಿ ಮಾತನಾಡಿದರು. ಅಪಘಾತ ಇನ್ನಿತರ ಘಟನೆಗಳು ನಡೆದಾಗ ಮೊದಲು ಸ್ಪಂದಿಸುವವರು ಆಟೋ ಚಾಲಕರು. ಹೀಗಾಗಿ ಆಟೊ ಚಾಲಕರು ಹಾಗೂ ಪೊಲೀಸರ ಮಧ್ಯೆ ಉತ್ತಮ ಬಾಂಧವ್ಯ ಇರುತ್ತದೆ. […]