ದ.ಕ. ಜಿಲ್ಲಾ ಮುದ್ರಾ ಮತ್ತು ಜನಧನ್ ಯೋಜನಾ ವರದಿ ಪಿಎಂ ಮೋದಿಗೆ ಹಸ್ತಾಂತರ
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರಧಾನಮಂತ್ರಿಗಳ ಆಶಯ ಯೋಜನೆಯಾದ ಮುದ್ರಾ ಮತ್ತು ಜನಧನ್ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯತ್ತಮವಾಗಿ ಅನುಷ್ಠಾಗೊಂಡಿರುವ ಬಗ್ಗೆ ಯೋಜನೆಯ ಪ್ರಗತಿ ವರದಿಯನ್ನು ಪ್ರಧಾನಮಂತ್ರಿಗಳಿಗೆ ಹಸ್ತಾಂತರಿಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಬೇಕಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಂಸದರ ಮನವಿಗೆ ಸ್ಪಂಧಿಸಿದ ಪ್ರಧಾನಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಜಿಲ್ಲೆಯ ಜನತೆಯ ಮೇಲೆ ನನಗೆ ಅತಿಯಾದ ಪ್ರೀತಿಯಿದೆ […]
ಡೆಂಗ್ಯೂ ಪೀಡಿತ ಗುಜ್ಜರ್ ಕೆರೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ
ಮಂಗಳೂರು: ಡೆಂಗ್ಯೂ ಪೀಡಿತ ಪ್ರದೇಶವಾಗಿರುವ ಗುಜ್ಜರಕೆರೆ ಪರಿಸರಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಶುಕ್ರವಾರ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಡೆಂಗ್ಯೂ ಕಾಯಿಲೆಯಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಶ್ರದ್ಧಾಳ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸ್ವಾಂತನ ನೀಡಿದರು. ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಪ್ರೇಮಾನಂದ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ವಸಂತ್ ಜೆ. ಪೂಜಾರಿ, ದೀಪಕ್ ಪೈ, ಅನಿಲ್ ಕುಮಾರ್, ಉಷಾ, ಲತಾರಾವ್, ಶಿವಪ್ರಸಾದ್, ಪ್ರವೀಣ್, ನೇಮು ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು.
ನೇತ್ರಾವತಿ ನದಿ ಸೇತುವೆಗೆ ಸಿಸಿಟಿವಿ ಕ್ಯಾಮೆರಾ: ಶಾಸಕ ಕಾಮತ್
ಮಂಗಳೂರು: ಮಂಗಳೂರಿನಿಂದ ಉಳ್ಳಾಲಕ್ಕೆ ತೆರಳುವ ರಸ್ತೆಯಲ್ಲಿ ಪ್ರಮುಖವಾಗಿ ಸಿಗುವ ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಸಲು ಚಿಂತನೆ ನಡೆಸಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚಿಸುತ್ತೇನೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಸಿಸಿಟಿವಿಗಳನ್ನು ಅಳವಡಿಸುವುದರಿಂದ ಸೇತುವೆಯ ಮೇಲೆ ನಡೆದ ದುರ್ಘಟನೆಗಳನ್ನು ತಕ್ಷಣ ಪರಿಶೀಲಿಸಲು ಅನುಕೂಲವಾಗುತ್ತದೆ. ಸಿಸಿಟಿವಿ ದೃಶ್ಯಗಳನ್ನು […]
ಜನೌಷದ ಕೇಂದ್ರಗಳಲ್ಲಿ ಔಷಧಿ ಇಲ್ಲದೆ ಸಮಸ್ಯೆ: ಅಣ್ಣಪ್ಪ ಸ್ವಾಮಿ
ಉಡುಪಿ: ಕರಾವಳಿ ಭಾಗದ ವಿವಿದೆಡೆ ಪ್ರಧಾನ ಮಂತ್ರಿ ಜನೌಷಧ ಕೇಂದ್ರಗಳು ಹೆಸರಿಗೆ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಆದರೆ ಅಲ್ಲಿ ಅಗತ್ಯವಿರುವ ಯಾವುದೇ ಔಷಧಗಳು ಲಭ್ಯವಿರುವುದಿಲ್ಲ. ಇದರಿಂದ ಜನರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದು ಅಖಿಲ ಭಾರತ ಕಾರ್ಮಿಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಸ್ವಾಮಿ ತಿಳಿಸಿದರು. ಈ ಸಂಬಂಧ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಮಯಕ್ಕೆ ಸರಿಯಾಗಿ ಔಷಧಗಳು ಲಭ್ಯವಾಗುತ್ತಿಲ್ಲ. ಯಾವುದೇ ಒಂದು ಬಗೆಯ ಔಷಧದ ಚೀಟಿ ನೀಡಿದರೆ, ಅದಕ್ಕೆ ಬದಲಾಗಿರುವ ಔಷಧವನ್ನು ನೀಡುತ್ತಿದ್ದಾರೆ ಎಂದರು. ಅದೇ […]
ಕೊಟ್ಟಾರಿ ಸಮಾಜ ಸುಧಾರಕ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ: ಆಟಿಡೊಂಜಿ ಕೂಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘ ಹಾಗೂ ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಟಿಡ್ ಒಂಜಿ ದಿನ ಕಾರ್ಯಕ್ರಮವನ್ನು ಪಡೀಲ್ ನಲ್ಲಿರುವ ಕೊಟ್ಟಾರಿ ಸಭಾಭವನದಲ್ಲಿ ಆಯೋಜಿಸಲಾಯಿತು. ಕೊಟ್ಟಾರಿ ಸಮಾಜದಲ್ಲಿ ಎಸ್ ಎಸ್ ಎಲ್ ಸಿ ಯಿಂದ, ಉನ್ನತ ವ್ಯಾಸಂಗ ಮಾಡುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಟ್ಟಾರಿ ಸಮಾಜದ ಯುವ ಕಲಾವಿದರ […]