ಕಾರ್ಕಳ:ರಸ್ತೆ ನಡುವಿದ್ದ ಹೊಂಡದಲ್ಲಿ ಬಾಳೆ ಗಿಡ ನೆಟ್ಟರು,ರಸ್ತೆ ಅವ್ಯವಸ್ಥೆ ವಿರುದ್ದ ತಿರುಗಿಬಿದ್ದರು!
ಕಾರ್ಕಳ:ಇಲ್ಲಿನ ಪತ್ತೊಂಜಿಕಟ್ಟೆಯ ರಸ್ತೆ, ಹೊಂಡ ಗುಂಡಿಗಳಿಂದ ತುಂಬಿಹೋಗಿದ್ದು ಈ ಮಳೆಗಾಲಕ್ಕೆ ಇನ್ನಷ್ಟು ಧಾರುಣವಾಗಿದೆ. ಇದರ ಅವ್ಯವಸ್ಥೆ ಕಂಡು ರೋಸಿ ಹೋದ ಇಲ್ಲಿನ ಸ್ಥಳೀಯರು ಶುಕ್ರವಾರ ಈ ಹೊಂಡ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ರಸ್ತೆಯ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಇದೇ ರೀತಿ ಕಾರ್ಕಳ ಪೇಟೆಯಲ್ಲಿಯೂ ಸ್ಥಳೀಯರು ಮುಖ್ಯ ರಸ್ತೆ ನಡುವೆ ಬಿದ್ದ ದೊಡ್ಡ ಹೊಂಡದಲ್ಲಿ ಬಾಳೆ ಗಿಡ ನೆಟ್ಟು ರಸ್ತೆಯ ವಿರುದ್ದ ಆಕ್ರೋಶ ತೋಡಿಕೊಂಡಿದ್ದಾರೆ.ಮಳೆ ಜಾಸ್ತಿಯಾಗುತ್ತಿದ್ದಂತೆಯೇ ಕಾರ್ಕಳ ಪೇಟೆಯಲ್ಲಿ ನಾಯಿ ಕೊಡೆಗಳಂತೆ ಹೊಂಡಗಳು […]
ಪ.ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು
ಉಡುಪಿ, ಆಗಸ್ಟ್ 2: 2019-20 ರಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನದಲ್ಲಿ ಶೇ.60 – 74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7000 ರೂ.ಗಳನ್ನು ಮತ್ತು ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15000 ರೂ. ಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ […]
‘ಸಕಾಲ’ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ
ಉಡುಪಿ, ಅಗಸ್ಟ್ 2: ಸರಕಾರದ ವಿವಿಧ ಇಲಾಖೆಗಳು ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸೇವೆಗಳು ಸೇರಿದಂತೆ, ಒಟ್ಟು 960 ಸೇವೆಗಳನ್ನು ಒಳಗೊಂಡ ಸಕಾಲ ಸೇವೆಯ ಅನುಷ್ಠಾನದ ಪ್ರಗತಿ ಕುರಿತು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಸೋಮವಾರ ವಿವಿಧ ಜಿಲ್ಲಾಡಳಿತಗಳೊಂದಿಗೆ, ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಸಕಾಲ ನೋಡೆಲ್ ಅಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ನಡೆಸಿ ಸಕಾಲ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಕಾಲ ಸೇವೆಗಳಿಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳು ಅರ್ಜಿಗಳ […]
ತೆಂಕನಿಡಿಯೂರು : ಮರಳಿ ಶಾಲೆಗೆ ಜಾಗೃತಿ ಅಭಿಯಾನಕ್ಕೆ ಚಾಲನೆ
ಉಡುಪಿ, ಆಗಸ್ಟ್ 1: ಮಕ್ಕಳಿಗೆ ಪರಿಪೂರ್ಣ ಹಾಗೂ ಪರಿಣಾಮಕಾರಿಯಾದ ಶಿಕ್ಷಣವನ್ನು ನೀಡುವ ಪ್ರಕ್ರಿಯೆಯಲ್ಲಿ ಉಂಟಾಗುವ ಅಡೆತಡೆಗಳನ್ನು ನಿವಾರಿಸಲು ಪ್ರತಿಯೊಬ್ಬರೂ ಕೂಡ ಪ್ರಯತ್ನಿಸಿ ಮಕ್ಕಳನ್ನು ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಜೋಡಿಸಬೇಕಾದ ಅಗತ್ಯತೆ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಶಿಕ್ಷಣ ಸಂಪನ್ಮೂಲ […]
ವಿಕಲಚೇತನರಿಗೆ ಆಧಾರ ಗೂಡಂಗಡಿ ಸೌಲಭ್ಯ
ಉಡುಪಿ, ಆಗಸ್ಟ್ 1: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯಲ್ಲಿ, 2019-20 ನೇ ಸಾಲಿನಲ್ಲಿ ವಿಕಲಚೇತನರಿಗೆ ಸ್ವ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ ಪರಿಷ್ಕತ ನಿಯಮಗಳಡಿಯಲ್ಲಿ ಶೇ. 50 ಬ್ಯಾಂಕಿನಿಂದ ಸಾಲ ಮತ್ತು ಶೇ. 50 ಸಬ್ಸಿಡಿ ಇಲಾಖೆಯಿಂದ ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಕೂಡಾ ಹೊಸದಾಗಿ ಈ ಸಾಲಿನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಅಗಸ್ಟ್ 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ, ಮಾರ್ಗಸೂಚಿ ಮತ್ತು ಮಾಹಿತಿಗಾಗಿ […]