ಮಂಗಳೂರು: ನೀತಿನಗರ-ರಾಜೀವ್ ನಗರ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 35ನೇ ಪದವು ಸೆಂಟ್ರಲ್ ವಾರ್ಡಿನ ಶಕ್ತಿನಗರ ಸಮೀಪದ ನೀತಿ ನಗರದಿಂದ ರಾಜೀವ್ ನಗರಕ್ಕೆ ತೆರಳುವ ರಸ್ತೆಗೆ 1.5 ಕೋಟಿ ವೆಚ್ಚದಲ್ಲಿ ಕಾಂಕ್ರೀಟಿಕರಣ ಮಾಡುವ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಂದ ಗುದ್ದಲಿ ಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರು, ಇಲ್ಲಿನ ನಿವಾಸಿಗಳು ಹಲವಾರು ವರ್ಷಗಳಿಂದ ನೀತಿನಗರದಿಂದ ರಾಜೀವನಗರಕ್ಕೆ ಹೋಗುವ ರಸ್ತೆ ಕಾಂಕ್ರೀಟೀಕರಣಗೊಳಿಸಬೇಕೆಂದು ಬೇಡಿಕೆ ಸಲ್ಲಿಸಿದ್ದರು. ಇದೀಗ […]

ಮಂಗಳೂರು: ವಕೀಲರ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ವಕೀಲರ ಸಂಘದಲ್ಲಿ ಒಗ್ಗಟ್ಟು ಪ್ರದರ್ಶಿಸಿ: ಶಂಕರ ಭಟ್

ಮಂಗಳೂರು: ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳೂರು ನ್ಯಾಯಾಲಯದ ಸಂಕೀರ್ಣದ ಹಳೆ ಜಿಲ್ಲಾ ಮುಖ್ಯ ನ್ಯಾಯಾಲಯದ ಕಟ್ಟಡದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ನ್ಯಾಯವಾದಿ ಶಂಕರ್ ಭಟ್ ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿ, 125ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಮಂಗಳೂರು ವಕೀಲರ ಸಂಘಕ್ಕೆ ರಾಜ್ಯ ಹೊರ ರಾಜ್ಯದಲ್ಲೂ ಬಹುಮಾನ್ಯತೆ ಹೊಂದಿದೆ. ಇಲ್ಲಿನ ಅನೇಕ ವಕೀಲರು ಹೈಕೋರ್ಟ್, ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ವಿವಿಧೆಡೆ ಕೋರ್ಟ್ ಗಳಲ್ಲಿ ಸೇವೆ ಸಲ್ಲಿಸಿದ್ದು, ಜಿಲ್ಲೆಗೆ […]

ಸಮಾಜ ಸೇವೆಗೆ ಸಹಾಯ ಮಾಡುವ ಮನಸ್ಸಿದ್ದರೆ ಸಾಕು: ವಿಶು ಶೆಟ್ಟಿ 

ಉಡುಪಿ: ನಿಸ್ವಾರ್ಥ ಸೇವೆ ಮಾಡಿದರೆ ನಮಗೆ ಹೇಗಾದರೂ ಪ್ರತಿಫಲ ಸಿಗುತ್ತದೆ. ಸಮಾಜ ಸೇವೆಗೆ ಸಮಾಜ ಸೇವಕನೇ ಆಗಬೇಕಾಗಿಲ್ಲ. ಸಹಾಯ ಮಾಡುವ ಮನಸ್ಸಿದ್ದರೆ ಸಾಕು. ಕಷ್ಟಕ್ಕೆ ಮಿಡಿಯುವ ಹೃದಯವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಹೇಳಿದರು. ಬಿಯಿಂಗ್‌ ಸೋಶಿಯಲ್‌ ವತಿಯಿಂದ ಶ್ರೀ ತ್ರಿಕಣ್ಣೇಶ್ವರೀವಾಣಿ ಕನ್ನಡ ಮಾಸ ಪತ್ರಿಕೆಯ ಸಹಭಾಗಿತ್ವದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶನಿವಾರ ಆಯೋಜಿಸಿದ ಕೂತು ಮಾತನಾಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೋವಲ್ಲಿರುವವರ ಕಣ್ಣೀರು ಒರೆಸುವುದೇ ನನ್ನ ಸುಖ […]

ಮಂಗಳೂರು: ಅಕ್ರಮ ‌ಮರಳು ಸಾಗಾಟ; ಒರ್ವ ಬಂಧನ; ಲಾರಿ ವಶ

ಮಂಗಳೂರು: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ 10 ಟನ್ ಮರಳನ್ನು ಮಂಗಳೂರಿನ ಕದ್ರಿ ಪೊಲೀಸರು ಸ್ವಾಧೀನಪಡಿಸಿಕೊಂಡು, ಚಾಲಕನನ್ನು ಪದವು ಎಂಬಲ್ಲಿ ಬಂಧಿಸಿದ್ದಾರೆ. ಪಡೀಲ್ ಕಣ್ಣೂರು ನಿವಾಸಿ ಮುಹಮ್ಮದ್ ನವಾಝ್, ಬಂಧಿತ ಆರೋಪಿ. ಪರವಾನಿಗೆ ರಹಿತ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕದ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಯು ಮಂಗಳೂರು ನಗರದ ಅಡ್ಯಾರ್‌ನಿಂದ ಉಡುಪಿ ಕಡೆಗೆ ಲಾರಿಯಲ್ಲಿ ಸುಮಾರು 10 ಟನ್ ಮರಳು ಸಾಗಾಟ ಮಾಡುತ್ತಿದ್ದ. ಟಿಪ್ಪರ್ […]

ಬಂಟ್ವಾಳ: 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ‌ ಸೆರೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 55 ವರ್ಷದ ಮಂಜು ಯಾನೆ ಮಂಜುನಾಥ, ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಈತನನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಾಯಿಬರಕಟ್ಟೆ ಎಂಬಲ್ಲಿ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ.