ಸ್ಟೂಡೆಂಟ್ ಪೊಲೀಸ್ ಕೆಡೆಟ್ ಮೂಲಕ ಮಕ್ಕಳಲ್ಲಿ ಕಾನೂನಿನ ಬಗ್ಗೆ ಜಾಗೃತಿ: ಕುಮಾರಚಂದ್ರ

ಉಡುಪಿ, ಅಗಸ್ಟ್ 3: ಮಕ್ಕಳಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಜಾಗೃತಿಯನ್ನು ಮೂಡಿಸುವುದೇ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ಮುಖ್ಯ ಉದ್ಧೇಶ. ಇದರಿಂದ ಎಳವೇಯಲ್ಲಿಯೇ ಮಕ್ಕಳಿಗೆ ಪೊಲೀಸ್ ವೃತ್ತಿಗೆ ಸಂಬಂಧಪಟ್ಟಂತಹ ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡುತ್ತದೆ ಎಂದು ಎಎಸ್‍ಪಿ ಕುಮಾರ್‍ಚಂದ್ರ ಹೇಳಿದರು. ಅವರು ಶನಿವಾರ ಮಣಿಪಾಲದ ಪ್ರಗತಿನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಆಯೋಜಿಸಲಾದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವುದು, ಮಹಿಳಾ ಸಶಕ್ತೀಕರಣಕ್ಕೆ ಒತ್ತು ನೀಡುವುದು, ಸಂವಿಧಾನಕ್ಕೆ ಧಕ್ಕೆ […]
ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿ.ಜೆ.ಪಿ ಸದಸ್ಯತ್ವ ನೋಂದಾವಣೆ

ಉಡುಪಿ: ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಅಂಗವಾಗಿ ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಸ್ಯತ್ವ ನೋಂದಾವಣೆಗೆ ಕಡೆಕಾರು ಬಿಜೆಪಿ ಸ್ಥಾನೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸನಿಲ್ ಇವರ ಮನೆಯ ವಠಾರದಲ್ಲಿ ಗಿಡ ನೆಡುವ ಮೂಲಕ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಸಂಚಾಲಕ ವಿಜಯ ಕೊಡವೂರು ಇವರು ಅಭಿಯಾನದ ಬಗ್ಗೆ ಮಾರ್ಗದರ್ಶನ ಹಾಗೂ ಮಾಹಿತಿ ನೀಡಿದರು. ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ರಾಜೇಂದ್ರ ಪಂದುಬೆಟ್ಟು, ಶಿಲ್ಪಾ ಆರ್. […]
ಬೀಜಾಡಿಯಲ್ಲಿ ಸಂಭ್ರಮದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಕುಂದಾಪುರ: ಕುಂದಾಪ್ರ ಕನ್ನಡಕ್ಕೆ ತನ್ನದೇ ಆದ ಸ್ಥಾನಮಾನವಿದೆ. ಅದರ ಉಳಿವಿಗೆ ಎಲ್ಲರೂ ಶ್ರಮಿಸಬೇಕಾದೆ. ನಮ್ಮ ಹಿರಿಯರು ನೀಡಿದ ಭಾಷೆ, ಬದುಕಿನ ಬಗ್ಗೆ ಇಂದಿನ ಯುವ ಸಮೂಹಕ್ಕೆ ತಿಳಿದು ಕೊಂಡು ಸಾಗಬೇಕಿದೆ ಎಂದು ಉಡುಪಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಎನ್.ನಿತ್ಯಾನಂದ ಹೇಳಿದರು. ಅವರು ಗುರುವಾರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಬೀಜಾಡಿ ಗೋಪಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ […]
ಕುಂದಾಪುರ ಬ್ಲಾಕ್ ಕಾಂಗ್ರೆಸ್: ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾದಿಕಾರಿಗಳ ಸಭೆ.

ಕುಂದಾಪುರ: ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳನ್ನು ಬೂತ್ ಮಟ್ಟದಲ್ಲಿ ಸಂಘಟಿತವಾಗಿ ಪುನರ್ರಚಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಗುರುವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಕರೆದು ಚರ್ಚಿಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರಾ , ರಾಜೀವ್ ಗಾಂಧಿ ಪಂಚಾಯತ್‌ರಾಜ್ ಯೋಜನೆ ಜಿಲ್ಲಾ ಸಂಯೋಜಕಿ ರೋಷನಿ […]
ಕುಂದಾಪುರ :ನ್ಯಾಯಾಧೀಶ ಪ್ರಕಾಶ ಖಂಡೇರಿ ಅವರಿಗೆ ಗೌರವ ಸಮಾರಂಭ

ಕುಂದಾಪುರ : ಯಾವುದೇ ಅಪರಾಧ ಪ್ರಕರಣಗಳು ಘಟಿಸಿದಾಗಲೂ ತನಿಖಾಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೇ ತನಿಖೆಯ ಹೊಣೆಯನ್ನು ನಿರ್ವಹಿಸುತ್ತಾರೆ. ಪ್ರಕರಣ ದಾಖಲಿಸುವ ಹಾಗೂ ದೂರು ನೀಡುವ ಸಂದರ್ಭದಲ್ಲಿ ಉಂಟಾಗುವ ಸಣ್ಣ ತಪ್ಪುಗಳಿಂದಾಗಿ ನ್ಯಾಯಾಲಯದ ವಾರಂಟ್‌ಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿಯೂ ತೊಡಕಾಗುತ್ತದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಸಂಜೆ ಪೊಲೀಸ್ ಇಲಾಖೆ, ಕುಂದಾಪುರ ಪೊಲೀಸ್ ಉಪ ವಿಭಾಗ ಹಾಗೂ ಅಭಿಯೋಜನೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಬೀಳ್ಕೊಡುಗೆ […]