ಡಿವೈಡರ್ ಗೆ ಹತ್ತಿದ ಬಸ್; ವಿದ್ಯುತ್ ಕಂಬಕ್ಕೆ ಢಿಕ್ಕಿ
ಮಂಗಳೂರು: ಖಾಸಗಿ ಬಸ್ವೊಂದು ಡಿವೈಡರ್ ಮೇಲೆ ಹತ್ತಿ ಬೀದಿದೀಪದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಂಗಳೂರಿನ ಲಾಲ್ಬಾಗ್ ಸಮೀಪದ ಐಸ್ಕ್ರೀಸ್ ಮಳಿಗೆಯೊಂದರ ಬಳಿ ಭಾನುವಾರ ಸಂಭವಿಸಿದೆ. ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಕರಿಯಪ್ಪ ಭಂಗಿ, ಕೊಡಿಯಾಲ್ಬೈಲ್ ನಿವಾಸಿ ಕಿರಣ್, ಶಂಕರ್ ಹಾಗೂ ಶರತ್ ಎಂಬುವವರು ಗಾಯಗೊಂಡಿದ್ದಾರೆ. ತಣ್ಣೀರುಬಾವಿಯಿಂದ ಪಿವಿಎಸ್ ಮಾರ್ಗವಾಗಿ ಸ್ಟೇಟ್ಬ್ಯಾಂಕ್ಗೆ ತೆರಳಬೇಕಿದ್ದ ಖಾಸಗಿ ಬಸ್ ಲಾಲ್ಬಾಗ್ ಸಮೀಪದ ಐಸ್ಕ್ರೀಸ್ ಮಳಿಗೆಯೊಂದರ ಬಳಿ ರಸ್ತೆಯ ಡಿವೈಡರ್ ಮೇಲೆ ಹತ್ತಿ, ಬೀದಿದೀಪದ ವಿದ್ಯುತ್ […]
ಮಂಗಳೂರು: ಉಳ್ಳಾಲ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ
ಮಂಗಳೂರು: ಮಂಗಳೂರಿನ ಉಳ್ಳಾಲ ಸೇತುವೆಯಿಂದ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಗಿರೀಶ್, ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸದ್ಯ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಗಿರೀಶ್ ಮಂಗಳೂರಿನ ಉರ್ವ ಸ್ಟೋರ್ನಲ್ಲಿ ಸೀಯಾಳ ವ್ಯಾಪಾರ ಮಾಡುತ್ತಿದ್ದು, ಅವರ ಪತ್ನಿ ಕೋರ್ಟ್ನಲ್ಲಿ ಉದ್ಯೋಗಿಯಾಗಿದ್ದಾರೆ. ಗಿರೀಶ್ ಪತ್ನಿ ಮಗುವಿನೊಂದಿಗೆ ಉರ್ವ ಪಿಡಬ್ಲ್ಯುಡಿ ಕ್ವಾಟ್ರರ್ಸ್ನಲ್ಲಿ ವಾಸಿಸುತ್ತಿದ್ದರು. ಸಂಜೆ ನಗರದಿಂದ ಉಳ್ಳಾಲ ಕಡೆಗೆ ತೆರಳಿದ ಗಿರೀಶ್ ಸೇತುವೆಯಿಂದ ನೇತ್ರಾವತಿ ನದಿ […]
ಕರವಾಳಿಯಾದ್ಯಂತ ನಾಗರ ಪಂಚಮಿ ತಯಾರಿ; ಫಲಪುಷ್ಪಗಳಿಗೆ ಹೆಚ್ಚಿದ ಬೇಡಿಕೆ
ಉಡುಪಿ/ ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ನಾಗರಪಂಚಮಿ ಹಬ್ಬ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಭಾನುವಾರವೇ ನಗರದಾದ್ಯಂತ ಸಂಭ್ರಮ ಮನೆಮಾಡಿತ್ತು. ನಾಗದೇವರಿಗೆ ಪ್ರಿಯವಾದ ಕೇದಿಗೆ, ಹಿಂಗಾರ, ಗೆಂದಾಳೆ ಸೀಯಾಳ, ಮಲ್ಲಿಗೆ ಹೂವುಗಳನ್ನು ಸಾರ್ವಜನಿಕರರು ಮುಗಿಬಿದ್ದು ಖರೀದಿಸುತ್ತಿದ್ದರು. ಉಡುಪಿ ರಥಬೀದಿ, ಮಂಗಳೂರಿನ ಪ್ರಮುಖ ಮಾರುಕಟ್ಟೆಗಳಲ್ಲಿ ಸೇರಿದಂತೆ ನಗರದ ವಿವಿಧೆಡೆ ಪೂಜಾ ಸಾಮಾಗ್ರಿಗಳ ಖರೀದಿ ಭರಾಟೆ ಜೋರಾಗಿದೆ. ನಾಗರಪಂಚಮಿ ಪ್ರಯುಕ್ತ ಉಡುಪಿಯ ಶ್ರೀಕೃಷ್ಣ ಮಠದ ಸುಬ್ರಹ್ಮಣ್ಯ ದೇವರು ಮತ್ತು ನಾಗಬನದಲ್ಲಿ ನಾಗದೇವರಿಗೆ ತನು ಪೂಜೆ ನೆರವೇರಿಸಲಾಗುತ್ತದೆ. ತಾಂಗೋಡು, ಮಾಂಗೋಡು, […]
ದೋಣಿಯಿಂದ ಬಿದ್ದು ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ
ಮಂಗಳೂರು: ನಗರದ ಹಳೆ ಬಂದರು ಮೀನುಗಾರಿಕಾ ದಕ್ಕೆಯ ದಕ್ಷಿಣ ಭಾಗದಲ್ಲಿ ಶುಕ್ರವಾರ ಬೆಳಗ್ಗೆ ಮೀನುಗಾರಿಕಾ ದೋಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಸೆಲ್ವಂ (41) ಅವರ ಮೃತದೇಹ ಶನಿವಾರ ಸಂಜೆ ಹೊಸ ದಕ್ಕೆಯ ಬಳಿ ಪತ್ತೆಯಾಗಿದೆ. ಸೆಲ್ವಂ ಅವರು ಶುಕ್ರವಾರ ದೋಣಿಯ ಫ್ಯಾನ್ ದುರಸ್ತಿ ಮಾಡಲು ನೀರಿಗೆ ಇಳಿದವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಪತ್ತೆಯಾಗಿದ್ದು, ಪಾಂಡೇಶ್ವರ ಪೊಲೀಸರು ಮುಂದಿನ ಕ್ರಮ ನಡೆಸುತ್ತಿದ್ದಾರೆ.
ಮಣಿಪಾಲದಲ್ಲಿ “ಸುಧಾರಿತ ಯೂರೋಡೈನಾಮಿಕ್ ಪ್ರಯೋಗಾಲಯ”ದ ಉದ್ಘಾಟನೆ.
ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸುಧಾರಿತ ಯೂರೋಡೈನಾಮಿಕ್ ಪ್ರಯೋಗಾಲಯವನ್ನು ಗದಗ ಕ್ಷೇತ್ರದ ಶಾಸಕರಾದ ಹೆಚ್.ಕೆ. ಪಾಟೀಲರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಭಾರತವು ಮಣಿಪಾಲದ ಬಗ್ಗೆ ಹೆಮ್ಮೆಪಡುತ್ತದೆ, ಏಕೆಂದರೆ ವಿಶ್ವದಾದ್ಯಂತ 500ರೊಳಗೆ ಸ್ಥಾನ ಪಡೆದಿರುವ ಏಕೈಕ ವಿಶ್ವವಿದ್ಯಾಲಯ ಮಾಹೆ ಮಣಿಪಾಲ ಆಗಿದೆ. ಆರೋಗ್ಯ ಮತ್ತು ಗುಣಮಟ್ಟದ ಚಿಕಿತ್ಸೆಯಲ್ಲಿ ಮಣಿಪಾಲ ತನ್ನ ಶ್ರೇಷ್ಠತೆಗೆ ಹೆಸರುವಾಸಿಯಾಗಿದೆ” ಎಂದರು. ಮಣಿಪಾಲ ಮಾಹೆಯ ಸಹ ಕುಲಾಧಿಪತಿಗಳಾದ ಡಾ. ಹೆಚ್. ಎಸ್. ಬಲ್ಲಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಹೆ ಮಣಿಪಾಲದ ಉಪಕುಲಪತಿ ಡಾ. […]