ಚುನಾವಾಣ ಕರ್ತವ್ಯ ನಿರತ ಸಿಬ್ಬಂದಿ ನಿಧನ-15 ಲಕ್ಷ ರೂ ಪರಿಹಾರ

ಉಡುಪಿ, ಅಗಸ್ಟ್ 5: ಜಿಲ್ಲೆಯಲ್ಲಿ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ , ಮತಯಂತ್ರಗಳನ್ನು ಇಡಲಾದ ಭದ್ರತಾ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಯ ಸಿಬ್ಬಂದಿಗಳ ತುರ್ತು ಚಿಕಿತ್ಸೆಗಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿಸಿದ್ದ ಆರೋಗ್ಯ ಇಲಾಖೆಯ ಅಂಬುಲೆನ್ಸ್ ನ ವಾಹನ ಚಾಲಕ ಕೆ.ದಿನೇಶ್ ಗಾಣಿಗ ಇವರು, ಮೇ 2 ರಂದು ಕರ್ತವ್ಯ ಮುಗಿಸಿ, ಮನೆಗೆ ಹಿಂದಿರುಗುವಾಗ ಬಾರ್ಕೂರು ಸರ್ಕಾರಿ ಆಸ್ಪತ್ರೆ ಬಳಿ , ಬಸ್ಸಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿರುತ್ತಾರೆ. ಮೃತರ ಕುಟುಂಬಕ್ಕೆ ಚುನಾವಣಾ ಆಯೋಗವು ರೂ.15 […]

ಪಾಲೆತ್ತಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ: ಸತ್ಯದ ಪರ ಮಾಧ್ಯಮ ‌ಸೆಟೆದು‌ ನಿಲ್ಲಬೇಕು: ಪಾಲೆತ್ತಾಡಿ 

ಬ್ರಹ್ಮಾವರ: ಮಾಧ್ಯಮ ಕ್ಷೇತ್ರದ ಮೂಲಕ ಜನಶಕ್ತಿ ಬೆಳೆಸುವ ಚಿಂತನೆ ಆಗಬೇಕು. ಅನ್ಯಾಯದ ವಿರುದ್ಧ ಮತ್ತು ಸತ್ಯದ ಪರ ಮಾಧ್ಯಮ ಸೆಟೆದು ನಿಲ್ಲಬೇಕಾದ ಅಗತ್ಯವಿದೆ ಎಂದು ಮುಂಬೈಯ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಹೇಳಿದರು. ಬ್ರಹ್ಮಾವರದ ಬಂಟರ ಭವನದಲ್ಲಿ ಭಾನುವಾರ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಮುಂಗಾರು ಪತ್ರಿಕೆ ಸಂಪಾದಕರಾಗಿದ್ದ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಚಿಂತನೆ, ಆದರ್ಶ ಇಂದಿಗೂ ಪ್ರಸ್ತುತ […]

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370, 3ಎ ರದ್ದು, ಕೇಂದ್ರ ಸರಕಾರದಿಂದ ಮಹತ್ವದ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ (ಜಮ್ಮು ಕಾಶ್ಮೀರ) ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಈ‌ ಘೋಷಣೆ ಮಾಡಿದ್ದು, ಸೆಕ್ಷನ್ 370 ರ ಎಲ್ಲಾ ವಿಭಾಗಗಳು ರಾಜ್ಯದಲ್ಲಿ ಅನ್ವಯಿಸುವುದಿಲ್ಲ ಎಂದಿದ್ದಾರೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ […]

ಸಮಸ್ತ ನಾಗನ ಭಕ್ತರಿಗೆ “ನಾಗರ ಪಂಚಮಿ”ಯ ಶುಭಾಶಯಗಳು

ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆಯುವಂತಹ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡ ಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗಪ್ಪನಿಗೆ ಹಾಲು ಎರೆದು ಆಚರಿಸುವ ಹಬ್ಬವಾಗಿದೆ. ಈ ಹಬ್ಬಕ್ಕೆ ಗರುಡ ಪಂಚಮಿ ಎಂಬ ಹೆಸರು ಕೂಡ ಇದೆ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗಪ್ಪನಿಗೆ ಹಲವು ವಿಧದ ಉಂಡೆಗಳು, ಕರಿ […]