ಉಡುಪಿ: ಆ.8 ರಂದು ಭಾರೀ ಮಳೆ ಸಂಭವ: ಶಾಲಾ-ಕಾಲೇಜುಗಳಿಗೆ ರಜೆ
ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 8 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಬುಧವಾರ ಮಳೆಯ ಪ್ರಭಾವ ಕಡಿಮೆ ಇತ್ತು. ಆದರೆ ಹವಾಮಾನ ಇಲಾಖೆ ಗುರುವರವೂ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಳಿದಂತೆ ಮೀನುಗಾರರಿಗೆ,ಕಡಲ ತಡಿಗೆ […]
ಜಿಲ್ಲೆಯಲ್ಲಿ ಜಾನುವಾರು ಸಾಗಾಟಕ್ಕೆ ‘ಆ್ಯಪ್’: ಜಿಲ್ಲಾಧಿಕಾರಿ
ಉಡುಪಿ: ಜಾನುವಾರುಗಳನ್ನು ಕಾನೂನುಬದ್ದವಾಗಿ, ಸುರಕ್ಷಿತವಾಗಿ ಸಾಗಾಣಿಕೆ ಮಾಡುವ ಬಗ್ಗೆ, ದ.ಕ ಜಿಲ್ಲೆಯಲ್ಲಿ ಎಲ್‍ಎಲ್‍ಸಿ (ಲೈವ್ ಸ್ಟಾಕ್ ಲಾಜಿಸ್ಟಿಕ್ ಕಂಟ್ರೋಲ್) ಆಪ್ ಸಿದ್ದಪಡಿಸಿದ್ದು, ಅದೇ ಮಾದರಿಯನ್ನು ಉಡುಪಿ ಜಿಲ್ಲೆಯಲ್ಲಿಯೂ ಅಳವಡಿಸುವ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಾಣಿ ದಯಾ ಸಂಘದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್‍ಎಲ್‍ಸಿ […]
ಲಿಂಗತ್ವ ಅಲ್ಪಸಂಖ್ಯಾತರ ಬಗೆಗಿನ ಸಮಾಜದ ದೃಷ್ಟಿ ಬದಲಾಗಬೇಕು-ಸಿ.ಎಂ. ಜೋಷಿ
ಉಡುಪಿ: ಸಮಾಜದಲ್ಲಿ ಇರುವ ಎಲ್ಲರಿಗೂ ಕಾನೂನು ಅನ್ವಯವಾಗುತ್ತದೆ. ಆದರೂ ನಮ್ಮ ಸಮಾಜದಲ್ಲಿ ಅನೇಕ ಓರೆಕೋರೆಗಳಿದ್ದು, ಇದನ್ನು ಸರಿಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಲಿಂಗತ್ವ ಅಲ್ಪಸಂಖ್ಯಾತರ ಬಗೆಗಿನ ಸಮಾಜದ ದೃಷ್ಟಿ ಬದಲಾಗಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಷಿ ಹೇಳಿದರು. ಅವರು ಬುಧವಾರ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ (ರಿ)ಉಡುಪಿ, ಆಶ್ರಯ ಸಮುದಾಯ […]
ಮಕ್ಕಳಿಗೆ ‘ರೋಟಾ ವೈರಸ್’ ಲಸಿಕೆ ನೀಡಿ: ಜಿಲ್ಲಾಧಿಕಾರಿ
ಉಡುಪಿ, ಅಗಸ್ಟ್ 7: ಮಕ್ಕಳಲ್ಲಿ ಅತಿಸಾರ ಭೇದಿ ಉಂಟು ಮಾಡುವ ರೋಟಾ ವೈರಸ್ ನಿಯಂತ್ರಣಕ್ಕಾಗಿ, ಮಕ್ಕಳಿಗೆ 6 ನೇ, 10 ನೇ ಮತ್ತು 14 ವಾರದಲ್ಲಿ ತಪ್ಪದೇ ರೋಟಾ ವೈರಸ್ ಲಸಿಕೆಯನ್ನು ನೀಡುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ರೋಟಾ ವೈರಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆಯಂತೆ, ರೋಟಾ ವೈರಸ್‍ನಿಂದ ಮಕ್ಕಳಲ್ಲಿ ಕಂಡು ಬರುವ ಅತಿಸಾರ […]
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಭೇಟಿ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಶಿವಾನಂದ ತಗಡೂರು ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ನವದೆಹಲಿ ಇದರ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಮದನ ಗೌಡ ಇವರು ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪ್ರಮೋದ್ ಸುವರ್ಣ,ಸಂಚಾಲಕರಾದ ಪುಂಡಲೀಕ ಮರಾಠೆ,ಕಾರ್ಯದರ್ಶಿಗಳಾದ ವಾದಿರಾಜ ನಡಿಮನೆ ಉಪಸ್ಥಿತರಿದ್ದರು.