ಉಡುಪಿ:ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆ: ವಸುಂದರಾ ಭಟ್ ಪ್ರಥಮ

ಉಡುಪಿ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸಿದ 2018-2019ನೇ ಸಾಲಿನ  ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಉಡುಪಿಯ ವಸುಂದರಾ ಭಟ್  ಶೇ.87.6  ಅಂಕದೊಂದಿಗೆ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ನೃತ್ಯನಿಕೇತನ ಕೊಡವೂರು ಇದರ  ನಿರ್ದೇಶಕರಾದ ವಿದ್ವಾನ್ ಸುಧೀರ್ ಕೊಡವೂರು ಹಾಗೂ ವಿಧುಷಿ ಮಾನಸಿ ಸುಧೀರ್ ಇವರ ಶಿಷ್ಯೆಯಾಗಿದ್ದು, ನಾರಾವಿ ಗುರುರಾಜ ಭಟ್ ಮತ್ತು ಶ್ರೀಲತಾ ಭಟ್ ಇವರ ಸುಪುತ್ರಿ. ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮನೇಜ್‌ಮೆಂಟ್ ಕಾಲೇಜಿನ ಅಂತಿಮ ವರ್ಷದ […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತರತ್ನ ಪ್ರಧಾನ

ನವದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಗುರುವಾರ ಪ್ರಶಸ್ತಿ ಪ್ರಧಾನ ಮಾಡಿದರು.

ಉಡುಪಿ: ಲ್ಯಾಪ್‍ಟಾಪ್ ಸೌಲಭ್ಯ-ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ವಿತರಿಸಲ್ಪಡುವ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಾಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ (ಇಲಾಖೆಯಿಂದ ಪಡೆದ ಅಧಿಕೃತ ಗುರುತು ಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ) ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 20 ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಯವರ ಕಚೇರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ […]

ಮಂಗಳೂರು: ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರ

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಮತ್ತು ಸಿಡಾಕ್ ಧಾರವಾಡ ಇವರ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿಯ ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಆಗಸ್ಟ್ 26 ರಿಂದ ಮಂಗಳೂರಿನ ಸಿ.ಒ.ಡಿ.ಪಿ ಸಭಾಂಗಣದಲ್ಲಿ 6 ದಿನಗಳ ಉಚಿತ ಊಟೋಪಚಾರ ಸಹಿತ ಉದ್ಯೋಗ ಆಭಿವೃದ್ಧಿ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯವಿದ್ದು, ಉಳಿದ ಪರಿಶಿಷ್ಟ ಜಾತಿಯ ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯೋಗಕ್ಕೆ ಬೇಕಾಗುವ ನಾಯಕತ್ವದ ಗುಣಗಳು, […]

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ-ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ಅನುಷ್ಟಾನಗೊಳಿಸಬೇಕಾದ ವಿವಿಧ ಯೋಜನೆಗಳಿಗೆ ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನುಮರಿ ವಿತರಣೆ, ಒಳನಾಡು ಹಾಗೂ ಹಿನ್ನೀರು ಜಲಸಂಪನ್ಮೂಲಗಳಲ್ಲಿ ಸಿಗಡಿ ಮತ್ತು ಹಿನ್ನೀರು ಮೀನುಕೃಷಿಗೆ ಪ್ರೋತ್ಸಾಹ ಯೋಜನೆ, ಒಳನಾಡು ಹಾಗೂ ಕರಾವಳಿ ಮೀನುಗಾರರಿಗೆ ಮೀನುಗಾರಿಕೆ ಬಲೆ, ಸಲಕರಣೆ ಕಿಟ್ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮಟ್ಟದ ಕಚೇರಿಯನ್ನು ಸಂಪರ್ಕಿಸುವಂತೆ ಮೀನುಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.