ಉಡುಪಿ ತಾ.ಪಂ. – ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಉಡುಪಿ: ಉಡುಪಿ ತಾಲೂಕು ಪಂಚಾಯತ್‍ನ ಅಧ್ಯಕ್ಷ /ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ , ಅಧ್ಯಕ್ಷರಾಗಿ ನೀತಾ ಗುರುರಾಜ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಭುಜಂಗ ಶೆಟ್ಟಿ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಮಳೆ ಹಿನ್ನೆಲೆ ಆ. 9 ರಂದು ದ.ಕ.ಜಿಲ್ಲೆಯಲ್ಲಿ‌ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.9 ರಂದು ರಜೆ ಘೋಷಣೆ ಮಾಡಲಾಗಿದೆ. ನಾಳೆಯವರೆಗೂ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಉಡುಪಿ:ಆರೋಗ್ಯ ಜಾಗೃತಿ-ನಾಳೆಯಿಂದ ಮಾಹಿತಿ ಪ್ರದರ್ಶನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಆರೋಗ್ಯ ಜಾಗೃತಿ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು , ಮಾಹಿತಿ ವಸ್ತು ಪ್ರದರ್ಶನ ಕಾರ್ಯಕ್ರಮವು ಆಗಸ್ಟ್ 10 ಮತ್ತು 11 ರಂದು ಉಡುಪಿ ಬೋರ್ಡ್ ಸ್ಕೂಲ್ ಆವರಣದಲ್ಲಿ ನಡೆಯಲಿದೆ.

ದ.ಕ: ಭಾರೀ ಮಳೆ ಹಿನ್ನೆಲೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಹಿನ್ನೆಲೆ ಕರಾವಳಿಯ ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದ್ದು, ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಮನೆಗಳು ಜಲವೃತವಾಗಿದೆ. ನದಿ ಸಮೀಪದ ಹಲವು ಮನೆಗಳಿಗೆ ನೀರು ನುಗ್ಗಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಅಲಡ್ಕ ಪಡ್ಪು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಕೆಲವು ಭಾಗದಲ್ಲಿ ಜನತೆ ಅತಂಕದಲ್ಲಿದ್ದು, ನದಿ ಸಮೀಪ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಹಟ್ಟಿಯ ಗೋಡೆ ಕುಸಿದು ಮೃತರಾದ ಗಂಗಾ ಅವರ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

ಉಡುಪಿ: ಚೇರ್ಕಾಡಿ ಸಮೀಪದ ಬೆನಗಲ್ ಹಾಡಿಬೆಟ್ಟುವಿನಲ್ಲಿ‌ ಹಾಲು ಕರೆಯುವ ಸಂದರ್ಭದಲ್ಲಿ ಗೋಡೆ‌ ಬಿದ್ದು ಮೃತಪಟ್ಟಿರುವ  ಮಹಿಳೆ ಗಂಗಾ ಅವರ ಮನೆಗೆ ಉಡುಪಿ ಶಾಸಕ‌ ಕೆ. ರಘುಪತಿ ಭಟ್ ಭೇಟಿ ನೀಡಿದರು. ಸಂಜೆ ಬೆಂಗಳೂರಿನಿಂದ ಬಂದ ಕೂಡಲೇ ಅಧಿಕಾರಿಗಳ ಜತೆಗೆ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರ ಕಲ್ಪಿಸುವ ಬಗ್ಗೆ ಸೂಚನೆ ನೀಡಿದರು. ಹಾಗೆಯೇ ತಕ್ಷಣ ಪ್ರಕೃತಿ ವಿಕೋಪ ತುರ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ಪ್ರಥಮ ಹಂತದ 4 ಲಕ್ಷ ಪರಿಹಾರ ಹಣವನ್ನು ನಾಳೆ ಸಂಸದರ ಮುಖಾಂತರ […]