ಉಡುಪಿಯಲ್ಲಿ ಮಳೆಯಬ್ಬರ: ಆ.9ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಆ.9 ರಂದು ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ, ಪಿಯು ಮತ್ತು ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬ್ರಹ್ಮಾವರ: ಗೋಡೆ ಕುಸಿದು ಮಹಿಳೆ ಮೃತ್ಯು

ಉಡುಪಿ: ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದ ಮೈಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗುರುವಾರ ಉಡುಪಿ ಜಿಲ್ಲೆಯ ಬ್ರಹ್ಮಾವರದ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ಸಂಭವಿಸಿದೆ. ಕೊರಗ ಮರಕಾಲ ಎಂಬವರ ಪತ್ನಿ ಗಂಗಾ ಮರಕಾಲ್ತಿ(52) ಮೃತಪಟ್ಟವರು. ನಿರಂತರ ಮಳೆಯಿಂದಾಗಿ‌ ಕೊಟ್ಟಿಗೆಯ ಮಣ್ಣಿನ ಗೋಡೆ ಹಠಾತ್ ಕುಸಿದು ಬಿದಿದ್ದೆ. ಈ ವೇಳೆ ದನದ ಹಾಲು ಕರೆಯುತ್ತಿದ್ದ ಗಂಗಾ ಅವರು ಗೋಡೆಯ ಅವಶೇಷಗಳಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೇತ್ರಿಯ ಸರಕಾರಿ ಆಸ್ಪತ್ರೆಗೆ […]