ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸುವ ಕಾನೂನಿಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸಿ, ಆ ವ್ಯಕ್ತಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸುವ ಕೇಂದ್ರ ಸರ್ಕಾರದ ಮಹತ್ವದ ಕಾನೂನು ಯುಎಪಿಎ ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ, 2019ಗೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದು ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಘೋಷಿಸಿದ ನಂತರ ಅವರ ಮೇಲೆ ಪ್ರಯಾಣ ನಿಷೇಧ ಹೇರಲು ಸಹ ಈ ಕಾನೂನಿನಡಿ ಅವಕಾಶವಿದೆ.
ಉಡುಪಿ ಜಿಲ್ಲೆ: ಭಾರೀ ಮಳೆಯ ಹಿನ್ನೆಲೆ, ಆ.10 ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ತೀವ್ರ ಮಳೆ ಅಬ್ಬರದ ಹಿನ್ನೆಲೆಯಲ್ಲಿ ಆಗಸ್ಟ್ 10 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಆ.10 ರಂದು ಕೂಡ ತೀವ್ರ ಮಳೆಯಾಗುವ ಸಾಧ್ಯತೆ ಇದ್ದು ಜಿಲ್ಲೆಯಾದ್ಯಂತ ಅಲರ್ಟ್ ಘೋಷಿಸಲಾಗಿದೆ.
ರೈಲ್ವೆ ಪ್ರಯಾಣಿಕರಿಗೆ ಕಹಿ ಸುದ್ದಿ :ಆನ್ ಲೈನ್ ಟಿಕೇಟು ದುಬಾರಿ ?

ನವದೆಹಲಿ:ರೈಲ್ವೇ ಪ್ರಯಾಣಿಕರಿಗೊಂದು ಕಹಿಸುದ್ದಿಯನ್ನು ಭಾರತೀಯ ರೈಲ್ವೇ ನೀಡಿದೆ. ಅದೇನೆಂದರೆ ಶೀಘ್ರವೇ ನೀವು ಮಾಡುವ ಆನ್ ಲೈನ್ ಟಿಕೇಟ್ ಬುಕ್ಕಿಂಗ್ ದುಬಾರಿಯಾಗಲಿದೆ. ಯಸ್. ಆನ್‌ಲೈನ್ ಟಿಕೆಟ್ ಖರೀದಿ ವೇಳೆ ವಿಧಿಸುವ ಸೇವಾ ಶುಲ್ಕವನ್ನು ಮರು ಜಾರಿ ಮಾಡಲು ಐಆರ್‌ಸಿಟಿಸಿ ಗಂಭೀರ ಚಿಂತನೆ ನಡೆಸಿದೆ. ಸೇವಾ ಶುಲ್ಕ ಹಿಂದಕ್ಕೆ ಪಡೆದ ಪರಿಣಾಮ ಆಗುತ್ತಿರುವ ಸುಮಾರು 88 ಕೋಟಿ ರು. ನಷ್ಟಭರಿಸಲು ತನ್ನಿಂದ ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಹೀಗಾಗಿ ಬೇರೆ ಉಪಾಯ ಕಾಣದ ಐಆರ್‌ಸಿಟಿಸಿ, ಆನ್‌ಲೈನ್ ಟಿಕೆಟ್ […]
ಭಾರೀ ಮಳೆ ಹಿನ್ನೆಲೆ ಆ.10ರಂದು ದ.ಕ.ಜಿಲ್ಲೆಯಲ್ಲಿ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.10ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಜೆಡಿಎಸ್ ಶಾಸಕರ ತಿಂಗಳ ಸಂಬಳ ಪರಿಹಾರ ಕಾರ್ಯಕ್ಕೆ ವಿನಿಯೋಗ:ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ

ರಾಜ್ಯ: ಸತತ ಪ್ರವಾಹದಿಂದ ನಲುಗಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಟ್ವೀಟ್ ನಲ್ಲಿ ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ-ತಮ್ಮಂದಿರೊಂದಿಗೆ ನಿಲ್ಲೋಣ ಎನ್ನುವ ಸಂದೇಶ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಜ್ವರದಿಂದ ಬಳಲುತ್ತಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ. ಒಂದೆರಡು ದಿನಗಳಲ್ಲಿ ಉತ್ತರ […]