ಅ.11 ಪೆರ್ಡೂರು: ‘ಆಟಿಡ್ ಒಂಜಿ ಕೆಸರ್ದ ಗೊಬ್ಬು’ ಸ್ಪರ್ಧೆ
ಉಡುಪಿ: ಗೆಳೆಯರ ಬಳಗ ಪೆರ್ಡೂರು ಇವರ ಆಶ್ರಯದಲ್ಲಿ ಆರನೇ ವರ್ಷದ ಆಟಿಡ್ ಒಂಜಿ ಕೆಸರ್ದ ಗೊಬ್ಬು ಸ್ಪರ್ಧೆ ಕಾರ್ಯಕ್ರಮವು ಅ.11ರಂದು ರವಿವಾರ ಪೆರ್ಡೂರು ಆರಾಟಕಟ್ಟೆಯ ಪಕ್ಕದ ಗದ್ದೆಯಲ್ಲಿ ನಡೆಯಲಿದೆ. ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಚಲನಚಿತ್ರ ಹಾಸ್ಯನಟರಾದ ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಹಾಗೂ ಸ.ಹಿ.ಪ್ರಾ. ಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರು […]
ದ.ಕ. ಜಿಲ್ಲೆಯಾದ್ಯಂತ ನೆರೆ: ನಿರಂತರ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಮೇಲೆ ನಿರಂತರ ನಿಗಾ ವಹಿಸಿ ಸಾರ್ವಜನಿಕ ಜೀವ ಹಾನಿ ತಪ್ಪಿಸಲು ಪ್ರಯತ್ನಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆಯಲ್ಲಿ ಸೂಚನೆ ರವಾನಿಸಿದ್ದಾರೆ. ನದಿ ಪಾತ್ರದಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಕೆಲ ಪ್ರದೇಶಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ಅಲ್ಲಿಯೇ ಇದ್ದು, ಪರಿಸ್ಥಿತಿಯನ್ನು ಗಮನಿಸಬೇಕು. ಗಂಜಿ ಕೇಂದ್ರಗಳಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಆಹಾರ, ಪುರುಷರಿಗೆ, ಮಹಿಳೆಯರಿಗೆ […]
ಕಾರ್ಕಳ:ಎಸ್.ಕೆ.ಪಿ.ಎ ವಲಯದ 14ನೇ ವಾರ್ಷಿಕ ಮಹಾಸಭೆ
ಕಾರ್ಕಳ: ಬದುಕು ರೂಪಿಸುವ ವೃತ್ತಿಯ ಮುಖಾಂತರ ಛಾಯಾಗ್ರಹಣ ರಂಗಕ್ಕೆ ಇಳಿದ ಛಾಯಾಮಿತ್ರರು ನಿಸ್ವಾರ್ಥ ಸೇವೆಯಿಂದ ಸಂಘಟನೆಯಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಮುಖಿ ಕೆಲಸಗಳ ಮುಖಾಂತರ ಎಲ್ಲಾ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಎಸ್.ಕೆ.ಪಿ.ಎ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವೀಸ್ ಹೇಳಿದ್ದಾರೆ. ಅವರು ಎಸ್.ಕೆ.ಪಿ.ಎ ಕಾರ್ಕಳ ವಲಯದ 14ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾಸಂಚಾಲಕ ವಿಠ್ಠಲ್ ಚೌಟ ಮಾತನಾಡಿ, ಪ್ರತಿಯೊಬ್ಬ ಸದಸ್ಯರು ಸಂಘಟನೆಯ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸುವುದರ ಮೂಲಕ ಸಂಘಟನೆಯನ್ನು ಬಲಪಡಿಸಬೇಕಾಗಿದೆ, ಸಂಘಟನೆ ಬಲಿಷ್ಟವಾದಾಗ […]
ಆ. 16ಕ್ಕೆ ಎಂಜಿಎಂನಲ್ಲಿ ಪುನಶ್ಚೇತನ ಕಾರ್ಯಗಾರ
ಉಡುಪಿ: ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರ ವೇದಿಕೆ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಹಯೋಗದಲ್ಲಿ ಪುನಶ್ಚೇತನ ಕಾರ್ಯಾಗಾರ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ಧ್ವನ್ಯಾಲೋಕದಲ್ಲಿ ಆಗಸ್ಟ್ 16ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉಡುಪಿ ಪಿಪಿಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸುವರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ. ವರದೇಶ ಹಿರೇಗಂಗೆ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
ಗೃಹ ಉತ್ಪನ್ನಗಳ ತರಬೇತಿ: ಅರ್ಜಿ ಆಹ್ವಾನ
ಉಡುಪಿ: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ)ನಲ್ಲಿ ಮಹಿಳೆಯರಿಗಾಗಿ ಆಗಸ್ಟ್ 26ರಿಂದ 31ರ ವರೆಗೆ 6 ದಿನಗಳ ಉಚಿತ ಗೃಹ ಉತ್ಪನ್ನಗಳ ತಯಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಆ. 21ರೊಳಗೆ ದೂರವಾಣಿ ಸಂಖ್ಯೆ 0820 2570 263 ಗೆ ಕರೆ ಮಾಡಿ ಹೆಸರನ್ನು ನೊಂದಾಯಿಸಬೇಕು. ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಆ. 26ರ ಬೆಳಿಗ್ಗೆ 9.30ಕ್ಕೆ ಬಿವಿಟಿಯಲ್ಲಿ ಹಾಜರಿರಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.