ಮುಖ್ಯಮಂತ್ರಿ‌ ಯಡಿಯೂರಪ್ಪ ಉತ್ತಮ ಆಡಳಿತ ನೀಡಲಿ: ಯೋಗೀಶ್ ಶೆಟ್ಟಿ

ಉಡುಪಿ: ಯಡಿಯೂರಪ್ಪನವರು‌ ಅಂದು ಮುಖ್ಯಮಂತ್ರಿಯಾಗಿದ್ದಾಗ ಗೋಲಿಬಾರ್ ನಡೆಸಿದ್ದರು. ಇಂದು ಲಾಠಿಚಾರ್ಜ್ ನಡೆಸಿದ್ದಾರೆ. ಇದು ಆಡಳಿತವೇ? ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಿ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ತಿಳಿಸಿದ್ದಾರೆ. ಪ್ರವಾಹ ಅದ ಮೊದಲ ದಿನದಿಂದ ಸ್ಪಂದಿಸದ ಮುಖ್ಯಮಂತ್ರಿಗಳು ತಮ್ಮ ರಾಜಕೀಯ ಮೇಲಾಟಕ್ಕೆ ದೆಹಲಿಯಲ್ಲಿದ್ದರು. ತಡವಾಗಿ ಬುದ್ದಿ ಬಂದು ಬಂದರಾದರೂ ತಮ್ಮ ಅದಿಕಾರದ ದರ್ಪ ಬಿಡಲಿಲ್ಲ. ಹಿಂದೆ 2008ರಲ್ಲಿ ಮುಖ್ಯಮಂತ್ರಿ ಆದಾಗ ಹಾವೇರಿಯಲ್ಲಿ ಗೊಬ್ಬರ ಕೇಳಲು ಬಂದ ರೈತರ ಮೇಲೆ ಗೋಲಿಬಾರ್ ಮಾಡಿದ್ದರು. ಇದೀಗ ಗದಗದಲ್ಲಿ ಪ್ರವಾಹ […]

ಆ. 12: ಸಿಎಂ ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ

ಮಂಗಳೂರು: ಮಳೆಯಿಂದ ಹಾನಿ ಉಂಟಾದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಗೆ  ಆ. 12ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಲಿದ್ದಾರೆ. ಬೆಳ್ಳಗೆ 11.20 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 11.30ಕ್ಕೆ ರಸ್ತೆ ಮಾರ್ಗವಾಗಿ ಬಂಟ್ವಾಳ, ಬೆಳ್ತಂಗಡಿ ಭಾಗಗಳಲ್ಲಿ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಧರ್ಮಸ್ಥಳ ಮಂಜುನಾಥನ ದರ್ಶನ, 2.30ಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಸದರು, ಹಾಗೂ ಶಾಸಕರ ಜತೆ ಚರ್ಚೆ ನಡೆಸಲಿದ್ದಾರೆ. 3.15ಕ್ಕೆ ರಸ್ತೆ ಮಾರ್ಗದ […]

ಬೆಳ್ತಂಗಡಿಯ ನೆರೆ ಪೀಡಿತ ಪ್ರದೇಶಗಳಿಗೆ ಜನಪ್ರತಿನಿಧಿ, ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ಹಾಗೂ ಕಿಲ್ಲೂರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯ‌ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಮಾನ್ಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಾಲೂಕು ದಂಡಾಧಿಕಾರಿ ಹಾಗೂ ಇನ್ನಿತರ ಅಧಿಕಾರಿ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದ.ಕ. ಜಿಲ್ಲೆಯಾದ್ಯಂತ ಮಳೆ ಇಳಿಮುಖ: ನೀರಿನ‌ ಮಟ್ಟ ಇಳಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಬಹಳ ಕಡಿಮೆಯಾಗಿದೆ. ರಾತ್ರಿಯಿಂದ ವರುಣ ಶಾಂತನಾಗಿದ್ದು ನೇತ್ರಾವತಿ, ಕುಮಾರಧಾರ ನದಿ ನೀರಿನ ಮಟ್ಟವೂ ಇಳಿಕೆಯಾಗಿದೆ. ಆದ್ರೆ ಭಾರೀ ಮಳೆಗೆ ತತ್ತರಿಸಿದ್ದ ಬಂಟ್ವಾಳ ತಾಲೂಕು, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಸುಬ್ರಹ್ಮಣ್ಯದ ಸುತ್ತಮುತ್ತಲಿನ ‌ಪ್ರದೇಶಗಳಲ್ಲಿ ಬಹಳ ಅವಾಂತರ ಸೃಷ್ಟಿಯಾಗಿದೆ. ನೆರೆ ಪೀಡಿತ ಸ್ಥಳಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಮಾಜಿ ಸಚಿವ ಯುಟಿ ಖಾದರ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸದ್ಯ ರೆಡ್ […]

ಮಹಾರಾಷ್ಟ್ರ ಕನ್ನಡಿಗ-ದ.ಕ.ಜಿಲ್ಲಾ ಪತ್ರಕರ್ತರಿಂದ ನೆರೆ ಸಾಮಗ್ರಿ ಹಸ್ತಾಂತರ

ಮಂಗಳೂರು: ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಭಾಗಿತ್ವದಲ್ಲಿ ಕದ್ರಿಯ ಕೆಪಿಟಿಯಲ್ಲಿ ಜಿಲ್ಲಾಡಳಿತದಿಂದ ಆರಂಭಿಸಿರುವ ನೆರೆ ಸಾಮಗ್ರಿ ಸಂಗ್ರಹಣಾ ಕೇಂದ್ರಕ್ಕೆ ಒಂದು ಲಕ್ಷ ಮೌಲ್ಯದ ಮಿನರಲ್ ವಾಟರ್ ಹಾಗೂ ಆಹಾರ ಸಾಮಗ್ರಿಗಳನ್ನು ರವಿವಾರ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಗೋಕುಲ್‌ದಾಸ್ ನಾಯಕ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ […]