ನೆರೆ ಹಿನ್ನಲೆ ಶ್ರೀಕೃಷ್ಣ ಜಯಂತಿ ಸರಳವಾಗಿ ಆಚರಣೆ : ಅಪರ ಜಿಲ್ಲಾಧಿಕಾರಿ

ಉಡುಪಿ: ರಾಜ್ಯದೆಲ್ಲೆಡೆ ವಿಪರೀತ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನೆರೆ ಸಂತ್ರಸ್ತರಿಗೆ ಅವಶ್ಯಕವಿರುವ ವಸ್ತುಗಳನ್ನು ತಲುಪಿಸುವ ಕಾರ್ಯಕ್ಕೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿರುವುದನ್ನು ಅಭಿನಂದಿಸಿದರು. ಉಡುಪಿ ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಎಸ್. ಪುಟ್ಟಣ್ಣ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ  ಹಿನ್ನೆಲೆ ಶ್ರೀ […]

ಉಡುಪಿ: ಪ್ರವಾಹ ಪೀಡಿತರಿಗೆ ಜಿಲ್ಲಾಡಳಿತದಿಂದ ನೆರವು

ಉಡುಪಿ:  ಎಲ್ಲಿ ನೋಡಿದರಲ್ಲಿ ನಾನಾ ಬಗೆಯ  ವಸ್ತುಗಳ ರಾಶಿ, ಪ್ರತಿ ವಸ್ತುಗಳನ್ನೂ ವಿಂಗಡಿಸಿ ಜೋಪಾನವಾಗಿ ಒಂದೆಡೆ ಸಂಗ್ರಹಿಸುತ್ತಿರುವ ಮಹಿಳಾ ಸಿಬ್ಬಂದಿಗಳು, ಸಂಗ್ರಹಿಸಿದ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ಭದ್ರವಾಗಿ ಪ್ಯಾಕ್ ಮಾಡಿ, ಲಾರಿಗೆ ಲೋಡ್ ಮಾಡುತ್ತಿರುವ ಪುರುಷ ಸಿಬ್ಬಂದಿಗಳು, ಇಲ್ಲಿ ಅಧಿಕಾರಿ, ನೌಕರ ಎಂಬ ಭೇದ ವಿಲ್ಲದೇ ಎಲ್ಲರಿಗೂ ಸಮಾನವಾಗಿ ಬಿಡುವಿಲ್ಲದ ಕೆಲಸ. ಈ ದೃಶ್ಯ ಕಂಡು ಬಂದದ್ದು, ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ.     ರಾಜ್ಯದ ಅನೇಕ ಜಿಲ್ಲೆಗಳ ಪ್ರವಾಹ ಪೀಡಿತ ನಿರಾಶ್ರಿತರ ನೆರವಿಗಾಗಿ, ಜಿಲ್ಲಾಡಳಿತ ಸ್ಥಾಪಿಸಿರುವ […]

ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಟ್ಟಡಗಳ ಕುರಿತು ವರದಿ ನೀಡಿ- ಸಿಇಓ

 ಉಡುಪಿ: ಜಿಲ್ಲೆಯಲ್ಲಿನ ಎಲ್ಲಾ ಸರಕಾರಿ ಅಂಗನವಾಡಿ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲಾ ಕಟ್ಟಡಗಳ ಸ್ಥಿತಿಗತಿ ಕುರಿತು ವರದಿ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾತಿ ಸಿಂಧೂ ಬಿ ರೂಪೇಶ್ ಸೂಚಿಸಿದ್ದಾರೆ.     ಅವರು, ಬುದವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜುಲೈ ತಿಂಗಳ ಕೆಡಿಪಿ ಸಭೆಯಲ್ಲಿ ಮಾತನಾಡಿದರು.     ಈ ಬಾರಿಯ ಮಳೆಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ 9 ಶಾಲಾ ಕಟ್ಟಡಗಳಿಗೆ ಹಾನಿಯಾಗಿರುವ  ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ […]

ದೇವಲ್ಕುಂದ ಅಮೋನಿಯಾ ಸೋರಿಕೆ ಪ್ರಕರಣ: ಪೈಪ್‌ನೊಳಗಿರುವ ಅಮೋನಿಯಾ ಸೋರಿಕೆ :ತನಿಖೆಯಲ್ಲಿ ಬಹಿರಂಗ

ಕುಂದಾಪುರ: ತಾಲೂಕಿನ ದೇವಲ್ಕುಂದ ಸಮೀಪದ ಮೀನು ಶಿತಲೀಕರಣ ಘಟಕದಲ್ಲಿ ಸೋಮವಾರ ಸಂಭವಿಸಿದ ಅಮೋನಿಯಾ ಸೋರಿಕೆ ಪ್ರಕರಣದ ತನಿಖೆ ಇದೀಗ ಚುರುಕುಗೊಂಡಿದ್ದು, ಸ್ಥಳಕ್ಕೆ ಸಹಾಯಕ ಆಯುಕ್ತ ಡಾ.ಮಧುಕೇಶ್ವರ್ ನೇತೃತ್ವದ ತನಿಖಾ ತಂಡ ಭೇಟಿ ನೀಡಿ ಮಹತ್ತರವಾದ ಮಾಹಿತಿಗಳನ್ನು ಕಲೆಹಾಕಿದೆ. ಬುಧವಾರ ಬೆಳಿಗ್ಗೆ ಇಲ್ಲಿನ  ದೇವಲ್ಕುಂದದಲ್ಲಿರುವ ಮಲ್ಪೆ ಫ್ರೆಶ್ ಮರೈನ್ ಮೀನು ಶಿತಲೀಕರಣ ಘಟಕಕ್ಕೆ ಭೇಟಿ ನೀಡಿದ ತನಿಖಾ ತಂಡ ಶಿತಲೀಕರಣ ಘಟಕಕ್ಕೆ ಮೆಶೀನ್ ಸರಬರಾಜು ಮಾಡಿರುವ ಕಂಪೆನಿ ಅಧಿಕಾರಿಗಳು, ಘಟಕದ ಮಾಲೀಕರೊಂದಿಗೆ ಸುದೀರ್ಘ ಮಾತುಕತೆ ನಡೆಸಿ ಹಲವಾರು ಮಾಹಿತಿಗಳನ್ನು […]

ಉಡುಪಿಯ ಮಾಧ್ಯಮ ಮಿತ್ರರಿಂದ ನೆರೆ ಸಂತ್ರಸ್ತರಿಗೆ ನೆರವು

ಉಡುಪಿ: ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು ಪ್ರದೇಶಗಳಲ್ಲಿ ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಹಿನ್ನೆಲೆಯಲ್ಲಿ ಅವರ ನೆರವಿಗೆ ಉಡುಪಿ ಪ್ರೆಸ್ ಕ್ಲಬ್ ಮಾಧ್ಯಮ ಮಿತ್ರರ ತಂಡ ಸುಮಾರು ರೂ 2 ಲಕ್ಷ ಮೌಲ್ಯದ ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಕಳುಹಿಸಿದರು. ವಿವಿಧ ಟಿವಿ ವಾಹಿನಿಗಳು ನೀಡಿದ ಕರೆಯಂತೆ ಉಡುಪಿ ಪ್ರೆಸ್ ಕ್ಲಬ್ ಸಹಕಾರದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಿಂದ ಸಂತ್ರಸ್ಥರ ಅಗತ್ಯ ಬಳಕೆಗೆ ಬೇಕಾದ ಬಟ್ಟೆ, ನೀರು, ಅಕ್ಕಿ, […]