ಹಿರಿಯಡ್ಕ: ನೆರೆ ಸಂತ್ರಸ್ತರಿಗೆ ದಿನ ಬಳಕೆ ವಸ್ತುಗಳ ಹಸ್ತಾಂತರ
ಹಿರಿಯಡ್ಕ: ಸುಧಾಕರ ಪೂಜಾರಿ ಅಭಿಮಾನಿ ಸಂಘ ಹಿರಿಯಡ್ಕ ಮತ್ತು ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಉಡುಪಿ ವಿಭಾಗ ಇವರ ಜಂಟಿ ಸಹಭಾಗಿತ್ವದಲ್ಲಿ ಉತ್ತರ ಕನ್ನಡದ ಬೆಳಗಾವಿಯ ಗೋಕಾಕ್ ಊರಿನ ನೆರೆ ಸಂತ್ರಸ್ತರಿಗೆ ಹಿರಿಯಡ್ಕ ಸಾರ್ವಜನಿಕರಿಂದ ಪಡೆದ ಆಹಾರ ಪದಾರ್ಥಗಳು, ಹೊಸ ಬಟ್ಟೆಗಳು ಮತ್ತು ದಿನಬಳಕೆಯ ವಸ್ತುಗಳನ್ನು ಆ.20ರಂದು ನೆರೆ ಸಂತ್ರಸ್ತರಿಗೆ ಹಸ್ತಾಂತರಿಸಲಾಯಿತು. ಒಟ್ಟು 20 ಜನರು ತೆರಳುವ ಮೂಲಕ ಅಲ್ಲಿನ ಜನರಿಗೆ ಕೆಲಸ ಮಾಡಿ ಸಹಕರಿಸಿದ್ದಾರೆ. ಸುಮಾರು 2 ಲಕ್ಷದಷ್ಟು ಬೆಲೆಬಾಳುವ ವಸ್ತುಗಳನ್ನು ಹಸ್ತಾಂತರಿಸಿದರು.
ಶ್ರೀಕೃಷ್ಣ ಮಠದಲ್ಲಿ ಅಷ್ಟಮಿಗೆ ರೆಡಿಯಾಗ್ತಿದೆ ಉಂಡೆ ಚಕ್ಕುಲಿ..
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣಾಷ್ಟಮಿಗೆ ಪರ್ಯಾಯ ಶ್ರೀ ಪಲಿಮಾರು ಮಠದ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಭಕ್ತರಿಗೆ ಪ್ರಸಾದ ರೂಪವಾಗಿ ವಿತರಿಸಲು ಉಂಡೆ ಚಕ್ಕುಲಿಗಳನ್ನು ಭರದಿಂದ ತಯಾರಿಸಲಾಗುತ್ತಿದೆ
ಶ್ರೀಕೃಷ್ಣ ಮಠಕ್ಕೆ ನೂತನ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ
ಉಡುಪಿ:ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಜಿ.ಜಗದೀಶ್ ಅವರು ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಅದಮಾರು ಕಿರಿಯ ಶ್ರೀಈಶಪ್ರಿಯ ತೀರ್ಥಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶ್ರೀಪಾದರ ಕಾರ್ಯದರ್ಶಿ ಗಿರೀಶ್ ಉಪಾದ್ಯಾಯ,ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುವ ಮಹಿಳೆಯರಿಗೆ ಮಹಿಳಾ ವಿಶ್ರಾಂತಿ ಕೊಠಡಿ ಸೌಲಭ್ಯ
ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮತ್ತು ಕಚೇರಿಗೆ ಆಗಮಿಸುವ ಮಹಿಳೆಯರಿಗೆ ಇನ್ನು ಮುಂದೆ ಸುಸಜ್ಜಿತ ವಿಶ್ರಾಂತಿ ಕೊಠಡಿ ಸೌಲಭ್ಯ ದೊರೆಯಲಿದೆ. ಉಡುಪಿಯ ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ಮಹಿಳಾ ನೌಕರರು ಹಾಗೂ ಕಚೇರಿಗೆ ಆಗಮಿಸುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಎಲ್ಲಾ ಅಗತ್ಯತೆಗಳನ್ನು ಪೂರೈಸಲಿದೆ. ಈ ಕೊಠಡಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಊಟ ಮಾಡಲು ಡೈನಿಂಗ್ […]
ಜಿಲ್ಲಾಧಿಕಾರಿಯಾಗಿ ಜಗದೀಶ್ ಅಧಿಕಾರ ಸ್ವೀಕಾರ
ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿ ಜಗದೀಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರಿ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು. ಜಗದೀಶ್ ಅವರು ೨೦೦೬ ಉಡುಪಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಸವಣೂರು, ಶಿರಸಿ, ಹಾವೇರಿ ಮೈಸೂರು, ಬೆಂಗಳೂರು ನಲ್ಲಿ ವಿವಿಧ ಹುದ್ದೆಗಳಲ್ಲಿ ಹಾಗೂ ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಮತ್ತು ಹಾಸನ ಮತ್ತು ಕೋಲಾರದಲ್ಲಿ ಜಿಪಂ ಸಿಇಓ ಆಗಿ ಕಾರ್ಯನಿರ್ವಹಿಸಿದ್ದರು.