ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ ಗೊತ್ತಿಲ್ಲ : ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೇಸರ
ಕುಂದಾಪುರ: ಲಾಬಿ ಮಾಡಿ ಸಚಿವ ಸ್ಥಾನ ಪಡೆಯೋದು ನನಗೆ ಗೊತ್ತಿಲ್ಲ ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ ಗೊತ್ತಿಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಮಂಗಳವಾರ ತಮ್ಮ ಹಾಲಾಡಿಯಲ್ಲಿರುವ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಮಾಣವಚನಕ್ಕೆ ನನಗೆ ಆಹ್ವಾನ ಇರಲಿಲ್ಲ, ಲಾಬಿ ಮಾಡಿ ಸಚಿವ ಸ್ಥಾನ ಪಡೆಯೋದು ನನಗೆ ಗೊತ್ತಿಲ್ಲ. ಗುಂಪುಗಾರಿಕೆ, ವಾಮಮಾರ್ಗ ಎಂದಿಗೂ ಮಾಡಿದವನಲ್ಲ. ಜಾತಿ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ ಎಂದ […]