ಪತ್ರಕರ್ತರು ಗ್ರಾಮವಾಸ್ತವ್ಯ ಮಾಡಿದ ಕುತ್ಲೂರು ಶಾಲೆಯಲ್ಲಿ ಅಭಿವೃದ್ಧಿ ಪರ್ವ, ಜಿಲ್ಲೆಗೆ ೬೫ ಕೋಟಿ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವಣೆ: ಡಾ| ಆರ್. ಸೆಲ್ವಮಣಿ
ಬೆಳ್ತಂಗಡಿ: ಪತ್ರಕರ್ತರ ಗ್ರಾಮವಾಸ್ತವ್ಯದ ಬಳಿಕ ಕುಗ್ರಾಮ ಕುತ್ಲೂರಿಗೆ ಪರಿವರ್ತನೆಯ ಅವಕಾಶ ಲಭಿಸಿದೆ. ಅಧಿಕಾರಿಗಳು ಹಾಗೂ ಸಂಸ್ಥೆಗಳ ಸಹಕಾರದಲ್ಲಿ ಕುತ್ಲೂರು ಸರಕಾರಿ ಶಾಲೆಯ ಹಲವು ಬೇಡಿಕೆಗಳನ್ನು ಈಡೇರಿಸಿರುವ ಪತ್ರಕರ್ತರು ಉಳಿದ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸವಿದೆ ಎಂದು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್. ಹೇಳಿದರು. ಕುತ್ಲೂರು ಸ.ಹಿ.ಪ್ರಾ. ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಹಾಗೂ ಕುತ್ಲೂರು ಸ.ಹಿ.ಪ್ರಾ. ಶಾಲೆ ಶಾಲಾಭಿವೃದ್ಧಿ ಸಮಿತಿ […]
ಉಡುಪಿ ಜಿಲ್ಲಾ ಮಲೆಕುಡಿಯ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಮಿತಿಯ ಸಭೆ
ಉಡುಪಿ: ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ವತಿಯಿಂದ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಕೇಂದ್ರ ಕಚೇರಿ ಮಾಳ ಪೇರಡ್ಕ ವಠಾರದಲ್ಲಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಮಂಜಪ್ಪ ಗೌಡ ನೂರಾಳ್ ಬೆಟ್ಟು ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಅವರು ಮಾತನಾಡಿ, ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟಂತಹ ಹೋರಾಟಗಾರರನ್ನು ಸ್ಮರಿಸಿ ಅವರ ಆದರ್ಶ ಪಾಲನೆ ಮಾಡುವುದರ ಜೊತೆಗೆ ದೇಶಕ್ಕಾಗಿ ತಮ್ಮ ಸಮಯ ಮೀಸಲಿಡಬೇಕು ಎಂದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ […]
ಬಡ ಮಕ್ಕಳ ಚಿಕಿತ್ಸೆಗಾಗಿ ರವಿ ಕಟಪಾಡಿ ಅವರಿಂದ ಅಷ್ಟಮಿ ವೇಷ
ಉಡುಪಿ: ಪ್ರತಿವರ್ಷದಂತೆ ಈ ಬಾರಿಯು ರವಿ ಕಟಪಾಡಿ ಅವರು ಶ್ರೀಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ರೀತಿಯ ವೇಷ ಧರಿಸಿ ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಬಡ ಅನಾರೋಗ್ಯ ಪೀಡಿತ ಮಕ್ಕಳಿಗೆ ನೀಡಲು ಉದ್ದೇಶಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸಂಗ್ರಹಿಸಿದ ಒಟ್ಟು 35ಲಕ್ಷ ರೂ. ಹಣವನ್ನು 29 ಬಡ ಮಕ್ಕಳ ಚಿಕಿತ್ಸೆಗೆ ನೀಡಲಾಗಿದೆ. ಅದೇ ರೀತಿ ಈ ವರ್ಷವೂ ಕೂಡ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ತಂಡ ಆ ಕಾರ್ಯಕ್ಕೆ ಮುಂದಾಗಿದೆ ಎಂದು ಬುಧವಾರ ಮಹೇಶ್ ಶೆಣೈ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. […]
ಉಡುಪಿ: ರಿಕ್ಷಾ ಚಾಲಕರ ವಿರುದ್ಧ ದೂರು ಹಿನ್ನೆಲೆ-ಸಭೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಸುವಿಕೆ, ಸಾರ್ವಜನಿಕ ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ಹಾಗೂ ಇನ್ನಿತರ ದೂರುಗಳು ವ್ಯಾಪಕವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ ೨೬ ರಂದು ಬೆಳಗ್ಗೆ ೧೧.೩೦ ಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ (ಸಾರಿಗೆ ಸೌಧ, ರಜತಾದ್ರಿ, ಮಣಿಪಾಲ) ಸಭೆ ಕರೆಯಲಾಗಿದ್ದು, ಜಿಲ್ಲೆಯ ಎಲ್ಲಾ ಆಟೋರಿಕ್ಷಾ ಚಾಲಕ/ ಮಾಲಕ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅವರ ಪ್ರತಿನಿಧಿಗಳು ಸಭೆಗೆ ಹಾಜರಾಗುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ
ಉಡುಪಿ: ಉಡುಪಿ ತಾಲೂಕಿನ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಹಾಕದೇ ಇದ್ದಲ್ಲಿ ಇರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‍ಸೈಟ್ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ದಾಖಲಿಸಬೇಕು. 1 ರಿಂದ 8 ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. […]