ರಾಜ್ಯಾಧ್ಯಕ್ಷನಾಗುವ ಬಗ್ಗೆ ನಿರೀಕ್ಷೆ ಇರಲಿಲ್ಲ; ಜವಾಬ್ದಾರಿಯಾಗಿ ಸ್ವೀಕರಿಸಿ ಮುಂದುವರಿಯುವೆ: ನಳೀನ್ ಕುಮಾರ್ ಕಟೀಲ್

ಮಂಗಳೂರು: ಬಾಲ್ಯದಿಂದಲೇ ಸಂಘ ಪರಿವಾರದ ಕಾರ್ಯಕರ್ತನಾಗಿದ್ದುಕೊಂಡು ಬೆಳೆದು ಬಂದಿದ್ದೇನೆ. ಸವಾಲುಗಳ ಮಧ್ಯೆ ಈಜುತ್ತಲೇ ಇಲ್ಲಿಯವರೆಗೆ ತಲುಪಿದ್ದೇನೆ. ಆದರೆ ಯಾವುದೇ ಪದವಿಯ ಅಪೇಕ್ಷೆಯಾಗಲಿ, ನಿರೀಕ್ಷೆಯಾಗಲಿ ಮಾಡಿಲ್ಲ. ಪಕ್ಷದ ನಾಯಕರು ಹಾಗೂ ಹಿರಿಯರ ಸೂಚನೆಯಂತೆ ನೀಡಲಾಗಿರುವ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಹುದ್ದೆಯಾಗಿ ಅಲ್ಲ, ಜವಾಬ್ಧಾರಿಯಾಗಿ ಸ್ವೀಕರಿಸಲಿದ್ದೇನೆ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಿ, ಜಿಲ್ಲೆಯ ನಾಯಕರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸಂಘದ ವಿಚಾರಧಾರೆಯೊಂದಿಗೆ ಬೆಳೆದ ನಾನು […]

ಶ್ರೀ ಕೃಷ್ಣ ಮಠದಲ್ಲಿ :ಕರ್ನಾಟಕ ಶಾಸ್ತ್ರಿಯ ಸಂಗೀತ ಕಾರ್ಯಕ್ರಮ

ಉಡುಪಿ:  ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲ ಮಹಾಸಂಸ್ಥಾನಂ ಶ್ರೀ ಹೃಷಿಕೇಶ ತೀರ್ಥಪೀಠಮ್ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಸಾಂಸ್ಕೃತಿಕ  ಕಾರ್ಯಕ್ರಮದ ಅಂಗವಾಗಿ   ಚೆನ್ನೈನ ಪದ್ಮಭೂಷಣ ಟಿ.ವಿ.ಶಂಕರನಾರಾಯಣ ಮತ್ತು ವೃಂದದವರಿಂದ ಕರ್ನಾಟಕ ಶಾಸ್ತ್ರಿಯ ಸಂಗೀತ ಕಾರ್ಯಕ್ರಮ ನಡೆಯಿತು.

ಜಿಎಸ್ ಟಿ ಎಫೆಕ್ಟ್: ಪಾರ್ಲೇಜಿ ಕಂಪೆನಿ ಉದ್ಯೋಗಿಗಳ ಬದುಕು ಸಂಕಷ್ಟದಲ್ಲಿ

ನವದೆಹಲಿ:ದೈತ್ಯ  ಬಿಸ್ಕಿಟ್  ಕಂಪೆನಿಗಳಲ್ಲಿ ಒಂದಾಗಿರುವ ಜನಪ್ರಿಯ ಬ್ರ್ಯಾಂಡ್ ಪಾರ್ಲೆಜಿ ಕಂಪೆನಿಯ ಉದ್ಯೋಗಿಗಳ ಭವಿಷ್ಯ ಇದೀಗ ಸಂಕಷ್ಟದಲ್ಲಿ ಸಿಲುಕಿದೆ. ಜಿಎಸ್ ಟಿ ಏರಿಕೆಯಿದಂದ  ಸುಮಾರು 10,000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಒಂದು ವೇಳೆ ಸರ್ಕಾರದಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದೆ ಆದಲ್ಲಿ 8 ಸಾವಿರದಿಂದ 10 ಸಾವಿರ ಮಂದಿಯನ್ನು ಕೈಬಿಡದೆ ಬೇರೆ ಉಪಾಯವಿಲ್ಲ ಎಂದು ಕಂಪೆನಿಯ ಮೂಲಗಳು ತಿಳಿಸಿದೆ. ಆಟೋ ಮೊಬೈಲ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು […]