ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಅನುಗ್ರಹ ಸಂದೇಶ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥಪೀಠಮ್ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಕಾರ್ಯಕ್ರಮಗಳ ನಾಲ್ಕನೆಯ ದಿನದಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಅದಮಾರು ಕಿರಿಯ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆಯ ಶ್ರೀರಮಣ ಉಪಾದ್ಯಾಯ,ಡಾ.ಜಿ.ಎಸ್.ಚಂದ್ರಶೇಖರ,ಸಾಯಿರಾಧ ಗ್ರೂಪ್ ನ ಮನೋಹರ್ ಶೆಟ್ಟಿ,ಗಣೇಶ್ ರಾವ್,ನಿರ್ಮಿತಿ ಕೇಂದ್ರದ ಅರುಣ್ ಕುಮಾರ್,ಡಾ.ಜಯರಾಮ್ ಶೆಟ್ಟಿಗಾರ್,ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಜಗದೀಶ್ ಭಟ್, ವಾಯಲಿನ್ ವಾದಕರಾದ […]
ಶ್ರೀ ಭುವನೇಂದ್ರ ಪ.ಪೂ.ಕಾಲೇಜು: ಸದ್ಭಾವನಾ ದಿನಾಚರಣೆ

ಕಾರ್ಕಳ: ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವತಿಯಿಂದ ಸದ್ಭಾವನಾ ದಿನಾಚರಣೆಯನ್ನು ನಡೆಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್.ಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸೌಹಾರ್ದತೆ ಹಾಗೂ ಸದ್ಭಾವನೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಹಿಂದಿ ಉಪನ್ಯಾಸಕಿ ಮಾಲತಿ ಪ್ರಭು ಪ್ರಮಾಣ ವಚನ ಭೋದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಸುಮಾಲಿನಿ ಜೈನ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನೆರೆಪೀಡಿತ ಪ್ರದೇಶಕ್ಕೆ ಸೂಕ್ತ ಪರಿಹಾರ ನೀಡಲು ಕ್ರಮ: ಕೋಟ

ಮಂಗಳೂರು: ಜಿಲ್ಲೆಯಲ್ಲಿ ಅಗಿರುವಂತಹ ಅತೀವೃಷ್ಟೀ ಬಾಧಿಸಿ ಬಹಳಷ್ಟು ಕುಟುಂಬಗಳು ಸಂಕಷ್ಟದಲ್ಲಿದೆ. ಹಲವಾರು ಮಂದಿ ಮನೆಯನ್ನೆ ಕಳೆದು ಕೊಂಡಿದ್ದಾರೆ. ಅವರಿಗೆ ಸೂಕ್ತ ಪರಿಹಾರ ನೀಡಲು ಮುಖ್ಯಮಂತ್ರಿಗಳು ಎಲ್ಲಾ ಸಚಿವರಲ್ಲಿ ತಿಳಿಸಿದ್ದು, ಈ ನಿಟ್ಟಿನಲ್ಲಿ ಕಾರ್ಯ ಚಟುವಟಿಕೆ ನಡೆಯುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಜಿಲ್ಲಾಡಳಿತ, ಇಲಾಖೆಗಳೊಂದಿಗೆ ಸ್ಪಂಧಿಸಿದ್ದು, ನೆರೆಪೀಡಿತರಿಗೆ ಪರಿಹಾರ ನೀಡಲು ಪೂರ್ಣ ಮನೆಕಳಕೊಂಡವರಿಗೆ 5 ಲಕ್ಷ ರೂ., ಭಾಗಶಃ ಮನೆಕಳಕೊಂಡವರಿಗೆ 1ಲಕ್ಷ ರೂ. ಬಾಡಿಗೆ ಮನೆಗೆ 5 ಸಾವಿರ ಹಾಗೂ ಕೂಡಲೇ ಸ್ಪಂಧನೆಯಾಗಿ ಹತ್ತು […]
ಮಂಗಳೂರು: ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳಿಗೆ ಮನವಿ

ಮಂಗಳೂರು: ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಬೆಂಗಳೂರಿನಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮಂಗಳೂರಿನ ಸಮಗ್ರ ಅಭಿವೃದ್ಧಿಗಳಲ್ಲಿ ಮುಖ್ಯವಾಗಿರುವ ಒಳಚರಂಡಿ ವ್ಯವಸ್ಥೆ, ಮುಖ್ಯರಸ್ತೆ ಹಾಗೂ ಒಳರಸ್ತೆಗಳ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ಹೆಲ್ತ್ ಟೂರಿಸಂ ಸಹಿತ ಪಾಲಿಕೆಯ ವ್ಯಾಪ್ತಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ವ್ಯವಸ್ಥೆ, ನೆರೆ ಪರಿಹಾರ ಅನುದಾನ ಸಹಿತ […]
ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಸುತ್ತೋಲೆಯಿಂದ ವಿನಾಯ್ತಿ ನೀಡಿ:ಡಾ| ಎಂ.ಎನ್ ರಾಜೇಂದ್ರ ಕುಮಾರ್

ಮಂಗಳೂರು:ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಜು.30ರಂದು ಕೃಷಿ ಇಲಾಖೆಯ ಮೂಲಕ ರಸಗೊಬ್ಬರ ಮಾರಾಟ ಕೇಂದ್ರ ತೆರೆಯಲು ಪರವಾನಿಗೆಗೆ ಕಡ್ಡಾಯವಾಗಿ ಕೃಷಿ ವಿಜ್ಞಾನದಲ್ಲಿ ಪದವಿ ಅಥವಾ ಡಿಪ್ಲೊಮಾ ಇನ್ ಎಇಎಸ್‌ಐ ಪ್ರೋಗ್ರಾಮ್ ಅರ್ಹತೆ ಹೊಂದಿರಬೇಕು ಎಂಬ ಸುತ್ತೋಲೆ ಹೊರಡಿಸಿದ್ದು ಈ ಸುತ್ತೋಲೆಯಿಂದ ವಿನಾಯಿತಿ ನೀಡಬೇಕೆಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್. ಅವರು ಕೇಂದ್ರ ಸರಕಾರದ ರಾಸಾಯನಿಕ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅ ಮನವಿ ಮಾಡಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿರುವ ಕೃಷಿ ಪತ್ತಿನ […]