ಮಂಗಳೂರು: ಬಾವಿಯಲ್ಲಿ ಪತ್ತೆಯಾಯ್ತು ಹುಲಿವೇಷಧಾರಿಯ ಮೃತದೇಹ 

ಮಂಗಳೂರು: ನಗರದ ಹುಲಿವೇಷಧಾರಿಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಕುಂಪಲ ವಿದ್ಯಾನಗರದ ಬಾವಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಗರೋಡಿ ನಿವಾಸಿ ವಸಂತ್‌ ಕುಮಾರ್ (57) ಅವರ ಮೃತ ದೇಹ ಪತ್ತೆಯಾಗಿದ್ದು, ಇವರು ಮಂಗಳೂರಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೊಸರುಕುಡಿಕೆ ಉತ್ಸವಕ್ಕಾಗಿ ವಸಂತ್ ಹುಲಿವೇಷ ಹಾಕಿದ್ದರು. ಶುಕ್ರವಾರ ರಾತ್ರಿ 2 ಗಂಟೆಗೆ ವಸಂತ್ ಸಮೀಪದಲ್ಲಿದ್ದ ಸಂಬಂಧಿಕರ ಮನೆಯ ಸಮೀಪದ ಬಾವಿಯ ಕಟ್ಟೆ ಬಳಿ ಕುಳಿತುಕೊಂಡಿದ್ದರು. ಇದೇ ವೇಳೆ ನಿದ್ದೆಯ ಮಂಪರಿನಲ್ಲಿ ಅವರು ಬಾವಿಗೆ ಬಿದ್ದಿರುವ ಸಾಧ್ಯತೆ ಇದೆ. ಶನಿವಾರ […]

ಉಡುಪಿ ಜಿಲ್ಲೆ: ಆ. 26 ಎಸಿಬಿ ಯಿಂದ ಅಹವಾಲು ಸ್ವೀಕಾರ

ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಆ. 26 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಆಗಸ್ಟ್ 27 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, […]

ನಿಟ್ಟೆಯಲ್ಲಿ ವಿಭಾಗ ಸಂಘಗಳ ಹಾಗೂ ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನೆ

ಕಾರ್ಕಳ: ಪ್ರತಿಯೊಂದು ಕ್ಷೇತ್ರದಲ್ಲೂ ಸವಾಲುಗಳು ಎದುರಾಗುವುದು ಸಹಜ. ಈ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಬಗೆಗೆ ಚಿಂತಿಸಬೇಕಷ್ಟೇ ಹೊರತು ಸವಾಲಿಗೆ ಅಂಜಿ ಹಿಂದೆ ಸರಿಯುವ ಪ್ರವೃತ್ತಿ ನಮ್ಮದಾಗಬಾರದು” ಎಂದು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಡಾ.ಶ್ರೀಕಾಂತ್ ರಾವ್ ಅಭಿಪ್ರಾಯಪಟ್ಟರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆ.೨೪ ರಂದು ನಡೆದ ೨೦೧೯-೨೦೨೦ ನೇ ಸಾಲಿನ ವಿಭಾಗ ಸಂಘ ಹಾಗೂ ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. “ವಿಫುಲ ಉದ್ಯೋಗಾವಕಾಶಗಳ ಬಗೆಗೆ ಚಿಂತಿಸಿ ಇಂಜಿನಿಯರಿಂಗ್ ಶಿಕ್ಷಣವನ್ನು ಕೈಗೆತ್ತಿಕೊಳ್ಳುವ ವಿದ್ಯಾರ್ಥಿಗಳು […]

ಶ್ರೀ ಕೃಷ್ಣ ಮಠ ದೇವರಿಗೆ ಶ್ರೀ ಗಳಿಂದ ತುಳಸಿ ಅರ್ಚನೆ, ಮಹಾಪೂಜೆ

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು  ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಮಹಾಪೂಜೆಯನ್ನು ನೆರವೇರಿಸಿ   ನಂತರ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಅದಮಾರು  ಕಿರಿಯ  ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ  ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿ  ತುಳಸೀಕಟ್ಟೆಯಲ್ಲಿ ಚಂದ್ರನಿಗೆ  ಅರ್ಘ್ಯ ನೀಡಿದರು. ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.

ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ  ನಳಿನ್ ಕುಮಾರ್ ಕಟೀಲ್ ಗೆ ಅಭಿನಂದನೆ

ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ  ನಳಿನ್ ಕುಮಾರ್ ಕಟೀಲ್ ಇವರನ್ನು, ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಮಾಜಿ ಸಂಚಾಲಕ ಬಿ. ಕಿಶೋರ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಕಾವೇರಿ, ಉಡುಪಿ ಜಿಲ್ಲಾ ಬಿಜೆಪಿ, ಕೈಗಾರಿಕಾ ಪ್ರಕೋಷ್ಠದ ಸಹಸಂಚಾಲಕ ಮೇರ್ಡಿ ಸತೀಶ್ ಹೆಗ್ಡೆ, ಹಾಗೂ ಪುರಸಭಾ ಸದಸ್ಯ ಗಿರೀಶ್ ಜಿ.ಕೆ ಇವರು ಮಂಗಳೂರಿನಲ್ಲಿ  ಅಭಿನಂದಿಸಿದರು.