ಕಾರ್ಕಳ: ಶ್ರೀ ಕೃಷ್ಣಾಷ್ಟಮಿ ಸ್ನೇಹ ಮಿಲನ ಕಾರ್ಯಕ್ರಮ
ಕಾರ್ಕಳ : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಇದರ ಆಶ್ರಯದಲ್ಲಿ ಆನೆಕೆರೆ ಹಿರಿಯಂಗಡಿಯ ಸೇವಾಕೇಂದ್ರದಲ್ಲಿ ಅ.25 ರಂದು ರಕ್ಷಾ ಬಂಧನ ಹಾಗೂ ಕೃಷಾಷ್ಟಾಮಿ ಸ್ನೇಹ ಮಿಲನ ಕಾರ್ಯಕ್ರಮ ಜರಗಿತು. ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಆರ್. ರಮೇಶ್ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ವಿಜಯಲಕ್ಷ್ಮೀ ಅವರು ವಹಿಸಿದ್ದು ರಕ್ಷಾಬಂಧನ ಹಾಗೂ ಶ್ರೀ ಕೃಷಾಷ್ಟಾಮಿಯ ಹಬ್ಬದ ಕುರಿತು ತಿಳಿಸಿದರು.
ಕೃಷ್ಣ ದೇವರಿಗೆ ” ಗಧಾಪದ್ಮಧಾರಿ ನಾರಾಯಣ ” ಅಲಂಕಾರ
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಅದಮಾರು ಮಠದ ಕಿರಿಯ ಸ್ವಾಮೀಜಿ ಶ್ರೀಶ್ರೀ ಈಶಪ್ರಿಯ ತೀರ್ಥರು ಶ್ರೀ ಕೃಷ್ಣ ದೇವರಿಗೆ ” ಗಧಾಪದ್ಮಧಾರಿ ನಾರಾಯಣ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.
ಬೆಂಗಳೂರು: ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಖಚಿತ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಭಾನುವಾರ ಪೂರ್ಣವಾಗಲಿದ್ದು, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ನೂತನ ಸಚಿವರಿಗೆ ಯಾವ ಖಾತೆ ಹಂಚಿಕೆ ಮಾಡಬೇಕು ಎಂಬ ಪಟ್ಟಿ ಅಂತಿಮಗೊಳಿಸಲಾಗಿದೆ. ಭಾನುವಾರ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಶನಿವಾರವೇ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಆದರೆ, ಮಾಜಿ ಸಚಿವ ಅರುಣ್ ಜೇಟ್ಲಿ ಅವರ ನಿಧನದ ಹಿನ್ನೆಲೆಯಲ್ಲಿ ಭಾನುವಾರ ಕಳುಹಿಸಿಕೊಡಲು ತೀರ್ಮಾನಿಸಲಾಗಿದೆ ಎಂದರು. ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಯಾವುದೇ […]
ಆ.26: ಎಸ್‌ಸಿಡಿಸಿಸಿ ಬ್ಯಾಂಕ್ ಕಾಪು ಶಾಖೆ ಸ್ಥಳಾಂತರ
ಮಂಗಳೂರು: ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್‌ನ ಕಾಪು ಶಾಖೆಯು ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಈಗ ಇರುವ ಕಟ್ಟಡದಿಂದ ಕಾಪು ರಾ. ಹೆ. 66ರ ಬಳಿಯ ಶ್ರೀ ನಾರಾಯಣ ಗುರು ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಗೆ ಆ.26ರಂದು ಸ್ಥಳಾಂತರಗೊಳ್ಳಲಿದೆ. ಆ ದಿನ ಬೆಳಗ್ಗೆ 10.30ಕ್ಕೆ ಕಚೇರಿಯ ಉದ್ಘಾಟನಾ ಸಮಾರಂಭ ಜರಗಲಿದೆ. ಶಾಸಕ ಲಾಲಾಜಿ ಆರ್. ಮೆಂಡನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ ಉದ್ಘಾಟಿಸಲಿದ್ದಾರೆ. ಬ್ಯಾಂಕಿನ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಸಹಕಾರ […]