ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಜಾಗೃತಿ ಮೂಡಿಸಿ: ದಿನಕರ ಬಾಬು

ಉಡುಪಿ: ಸ್ವಚ್ಛತೆಯ ವಿಷಯದಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸಗಳಾಗಿದ್ದು, ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಮಕ್ಕಳಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಿ ಸ್ವಚ್ಛತೆಯ ಜಾಗೃತಿ ಮೂಡಿಸಿದಲ್ಲಿ ಜಿಲ್ಲೆಗೆ ಉತ್ತಮ ಸಂದೇಶ ರವಾನಿಸಿದಂತಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ವತಿಯಿಂದ ಸ್ವಚ್ಛ ಮೇವ ಜಯತೇ ಆಂದೋಲನದ ಅಂಗವಾಗಿ ಸ್ವಚ್ಛತೆ, ಜಲ ಸಂರಕ್ಷಣೆ, ಪರಿಸರ ಸಂರಕ್ಷಣಾ ಜನಜಾಗೃತಿ ಸಲುವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಜತಾದ್ರಿಯ ಅಟಲ್ […]

ಮನೆ ಹಾನಿಗೆ ಗರಿಷ್ಠ ಪರಿಹಾರ ನೀಡಿ: ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸುವಂತೆ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಳೆ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ನೀಡಿದ ಮಾಹಿತಿಗೆ ಸಂಬಂದಿಸಿದಂತೆ ಮಾತನಾಡಿದ, ಸಂಸದರು ಜಿಲ್ಲೆಯಲ್ಲಿ  ಭಾಗಶ: ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನ: ಪರಿಶೀಲಿಸಿ, […]

ಐಸಿರಿ ಶೀರ್ಷಿಕೆಯಲ್ಲಿ ತುಳು-ಕನ್ನಡ ಆಡಿಯೋ-ವೀಡಿಯೋ ಆಲ್ಬಂ ಸಾಂಗ್ ಚಿತ್ರೀಕರಣದ‌ ಮುಹೂರ್ತ

ಬಂಟ್ವಾಳ: ಚಿಣ್ಣರ ಲೋಕ ಸಿನಿ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣವಾಗುವ ಐಸಿರಿ (ಕರಾವಳಿಯ ಸೊಬಗು) ಎಂಬ ಶಿರ್ಷಿಕೆಯಲ್ಲಿ ತುಳು-ಕನ್ನಡ ಆಡಿಯೋ-ವೀಡಿಯೋ ಆಲ್ಬಂ ಸಾಂಗ್ ನ  ಚಿತ್ರೀಕರಣದ ಮುಹೂರ್ತ ಸಮಾರಂಭ ಬಿ.ಸಿ ರೋಡ್ ನ ರಕ್ತೇಶ್ವರೀ ದೇವಸ್ಥಾನದಲ್ಲಿ ನಡೆಯಿತು. ಕ್ಷೇತ್ರದ ರಕ್ತೇಶ್ವರೀ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಹಾಗೂ ಗಣ್ಯರ ಸಮ್ಮುಖದಲ್ಲಿ ಚಿತ್ರೀಕರಣದ ಉದ್ಘಾಟನೆ ಹಾಗೂ ಕ್ಯಾಮರಾ ಚಾಲನೆ ನೀಡಿದರು. ಅನಂತರ ನಡೆದ ಸಮಾರಂಭದಲ್ಲಿ ಗಣ್ಯರು ಭಾಗವಹಿಸಿ ಚಿತ್ರಕ್ಕೆ ಶುಭಹಾರೈಸಿದರು. ಚಿಣ್ಣರ ಲೋಕದ ಸ್ಥಾಪಕ ಅಧ್ಯಕ್ಷ ಮೋಹನ್ […]

ದ.ಕ. ಜಿಲ್ಲೆಯಲ್ಲಿ ಮತ್ತೆ ಬಿರುಸಿನ‌ ಮಳೆ; ಆರೆಂಜ್‌ ಅಲರ್ಟ್ ಘೋಷಣೆ

ಮಂಗಳೂರು: ಕಳೆದ‌ ಕೆಲವು ದಿನಗಳಿಂದ ಬಿಡುವು ಪಡೆದ‌ ಮಳೆ ಈಗ ಮತ್ತೆ ಶುರುವಾಗಿದೆ. ಸೋಮವಾರ ಮಧ್ಯಾಹ್ನದ ವೇಳೆಗೆ ಮಂಗಳೂರು ನಗರ ಸೇರಿದಂತೆ ನಗರದ ಹೊರವಲಯದಲ್ಲೂ ಬಾರೀ ಮಳೆ ಸುರಿದಿದೆ. ನಗರದ ಕೊಟ್ಟಾರದಲ್ಲಿ ಬಾರೀ ಮಳೆಯ ಸುರಿದ ಪರಿಣಾಮ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು. ಅಲ್ಲದೇ ಪಕ್ಕ ಪಕ್ಕದ ಅಂಗಡಿಗಳಿಗೂ ನೀರು ನುಗ್ಗಿತು. ಸಂಜೆ ವೇಳೆಯಾದ್ದರಿಂದ ಶಾಲಾ ಕಾಲೇಜಿನಿಂದ ಮನೆಗೆ ತೆರಳಲು ವಿದ್ಯಾರ್ಥಿಗಳೂ ಪರದಾಡುವಂತಾಯಿತು. ಕರಾವಳಿಯಲ್ಲಿ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದ್ದು, ೨೯ […]

ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಸುಮಾರು 190ಕ್ಕೂ ಹೆಚ್ಚು ಸಂತ್ರಸ್ತರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಅಡಿಯಲ್ಲಿ 22 ಲಕ್ಷ ರೂ. ಅಧಿಕ ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಇರುವ ನಂದಿನಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಅನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದಿನ ರಾಜ್ಯ ಸರಕಾರದಲ್ಲಿ ಮಳೆಯಿಂದ ಮನೆಯ ಒಳಗೆ ನೀರು ನುಗ್ಗಿ ಆಗುವ ಹಾನಿಗೆ ಕೇವಲ 3,800 ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. […]