ಮಡಿಕೇರಿ: ಕಾರಿನ ಗ್ಲಾಸ್ ಒಡೆದು ಪುಂಡಾಟ ಪ್ರದರ್ಶಿಸಿದ ಹುಚ್ಚ ವೆಂಕಟ್
ಮಡಿಕೇರಿ: ನಟ, ನಿರ್ದೇಶಕ ಹುಚ್ಚ ವೆಂಕಟ್ ಇಂದು ಮಡಿಕೇರಿ ನಗರದಲ್ಲಿ ಸಾರ್ವಜನಿಕವಾಗಿ ರಂಪಾಟ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಡಿಕೇರಿ ಬಸ್ ನಿಲ್ದಾಣದಲ್ಲಿ ಯಾವುದೇ ಕಾರಣವಿಲ್ಲದೇ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನ ಗಾಜು ಒಡೆದು ಹಾಕಿ ಹುಚ್ಚಾಟ ತೋರಿದ್ದಾರೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅಲ್ಲದೆ ಸ್ಥಳದಲ್ಲಿ ನಿಂತಿದ್ದ ಸ್ಥಳಿಯ ಜನರನ್ನು ಕೂಡ ನಿಂದಿಸಿದ್ದಾರೆ. ಇದರಿಂದ ತೀವ್ರವಾಗಿ ರೊಚ್ಚಿಗೆದ್ದ ಸಾರ್ವಜನಿಕರು ಹುಚ್ಚ ವೆಂಕಟ್ ಅವರಿಗೆ ಥಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾರು ಮಾಲೀಕ ನಾನು […]
ಒಳ್ಳೆಯ ಕೆಲಸವನ್ನು ಹೊಗಳಲು ಸಿದ್ದರಾಮಯ್ಯನವರಿಗೆ ಮನಸ್ಸಿಲ್ಲ :ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಸಿಎಂ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಕಂಡು ಸಿದ್ದರಾಮಯ್ಯನವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅವರಿಗೆ ಒಳ್ಳೆಯ ಕೆಲಸವನ್ನು ಹೊಗಳಲು ಮನಸ್ಸಿಲ್ಲ. ಅದಕ್ಕೆ ಸಿಎಂ ಕಾರ್ಯವನ್ನು ಕಂಡು ಹೊಟ್ಟೆಕಿಚ್ಚಿನಿಂದ ಬಯ್ಯುತ್ತಿದ್ದಾರೆ ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದರು. ಉಡುಪಿಯ ಜೀವನದಿ ಸ್ವರ್ಣ ನದಿಗೆ ಗುರುವಾರ ಬಾಗಿನ ಅರ್ಪಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ನೆರೆ ಸಂತ್ರಸ್ತರ ಸ್ಥಳಗಳಿಗೆ ಓಡಾಡುತ್ತಿದ್ದು, ಪರಿಹಾರ ವಿತರಣೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನೆರೆ ಸಂತ್ರಸ್ತರ ಅಳಲು ಕೇಳುತ್ತಿದ್ದಾರೆ. ಆದರೆ ನೆರೆ […]
ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಂಡಿರಬೇಕು : ಡಾ.ವಿರೂಪಾಕ್ಷ ದೇವರಮನೆ
ಕಾರ್ಕಳ: ಮಹಿಳೆಯರು ಎಂದಿಗೂ ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಂಡಿರಬೇಕು. ಒಬ್ಬ ಮಹಿಳೆಯ ಸಮಸ್ಯೆಯನ್ನು ಅರಿಯುವ ಶಕ್ತಿ ಇನ್ನೊಬ್ಬ ಮಹಿಳೆಗಿದೆ ಹಾಗಾಗಿ ಮಹಿಳಾ ಸಬಲೀಕರಣ ಘಟಕಗಳು ಮಹಿಳೆಯ ಸಮಸ್ಯೆ ಅರಿತುಕೊಳ್ಳುವಲ್ಲಿ ಬಹುದೊಡ್ಡ ಪಾತ್ರವಹಿಸಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರೆದಿದ್ದರೂ ತಮ್ಮದೇ ಆದ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸೂಕ್ತ ಮಾರ್ಗದರ್ಶನದ ಅವಶ್ಯಕತೆಯಿದೆ ಎಂದು ಉಡುಪಿಯ ಎ.ವಿ ಬಾಳಿಗ ಆಸ್ಪತ್ರೆಯ ಮನೋವೈದ್ಯ ವಿರೂಪಾಕ್ಷ ದೇವರಮನೆ ಹೇಳಿದರು. ಇವರು ಶ್ರೀ ಭುವನೇಂದ್ರ ಕಾಲೇಜಿನ ಮಹಿಳಾ ಸಬಲಿಕರಣ ಘಟಕ ಹಾಗೂ ಮಹಿಳಾ […]
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಚಿಣ್ಣರ ಉತ್ಸವ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನ ಇವರಿಂದ “ಚಿಣ್ಣರ ಉತ್ಸವ” ಕಾರ್ಯಕ್ರಮ ನಡೆಯಿತು.
ಪ.ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ :ಉಡುಪಿ ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯ ಪ.ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 800 ಹಾಸಿಗೆಗಳುಳ್ಳ ಎನ್.ಎ.ಬಿ.ಹೆಚ್. ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿ ಕನಿಷ್ಠ 75% ಹುದ್ದೆಗಳನ್ನು ಮೀಸಲಿರಿಸುವ ಭರವಸೆಯ ಮೇರೆಗೆ ಕೌಶಲಾಭಿವೃದ್ದಿ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಒಟ್ಟು 123 ಮಂದಿಗೆ ತರಬೇತಿಗೆ ಅವಕಾಶವಿದ್ದು, ಈ ಕುರಿತಂತೆ ಸೆಪ್ಟಂಬರ್ 12 ರಂದು ಉಡುಪಿಯ ಪುರಭವನದಲ್ಲಿ ಉದ್ಯೋಗ ಮೇಳ ನಡೆಸುವುದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ […]