ಸಧೃಡ ಭಾರತ ಆಂದೋಲನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ ಎಲ್ಲಾ ಜನತೆಯು ಸಧೃಡ ಭಾರತ ಆಂದೋಲನದಲ್ಲಿ ಪಾಲ್ಗೊಳ್ಳಬೇಕು. ಜಿಲ್ಲೆಯಲ್ಲಿ ಕ್ರೀಡೆಗೆ ಸಂಬಂಧಿಸಿದ ಎಲ್ಲಾ ಸೌಲಭ್ಯಗಳಿದ್ದು, ಉತ್ತಮ ರೀತಿಯಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಗುರುವಾರ, ಉಡುಪಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ […]

ಟಿಬೆಟ್ ಧರ್ಮಗುರು ದಲಾಯಿಲಾಮ ಮಂಗಳೂರಿಗೆ ಆಗಮನ

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಗುರುವಾರ ಮಂಗಳೂರಿಗೆ ಆಗಮಿಸಿದರು. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದ ಹೊರಗಡೆ ಟಿಬೆಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು‌. ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ  ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ […]

ಉಡುಪಿ: ಮಂಗಳೂರು ವಿವಿ ಅಂತರ್ ಕಾಲೇಜು ಬ್ಯಾಡ್ಮಿಂಟನ್ ಗೆ ಚಾಲನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಅಜ್ಜರಕಾಡು ಡಾ. ಜಿ. ಶಂಕರ್‌ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬ್ಯಾಂಕ್‌ ಆಫ್‌ ಬರೋಡಾ, ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ಅಜ್ಜರಕಾಡು ಒಳಂಗಾಣ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ಮಂಗಳೂರು ವಿವಿ ಅಂತರ ಕಾಲೇಜು ಮಟ್ಟದ ಪುರುಷ ಹಾಗೂ ಮಹಿಳೆಯರ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಬುಧವಾರ ಉದ್ಘಾಟನೆಗೊಂಡಿತು. ಬ್ಯಾಂಕ್‌ ಆಫ್‌ ಬರೋಡಾದ ಉಡುಪಿ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಚಾಲನೆ ನೀಡಿ ಮಾತನಾಡಿ, […]

ಹೊಸದಿಲ್ಲಿ: ವಾರ್ಷಿಕ ಆದಾಯ ತೆರಿಗೆ ಮತ್ತಷ್ಟು ಕಡಿತ?

ಹೊಸದಿಲ್ಲಿ: ದೇಶದಲ್ಲಿ ತೆರಿಗೆದಾರರಿಗೆ ಸಿಹಿ ಸುದ್ದಿಯೊಂದು ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆ ಇದೆ. ವಾರ್ಷಿಕ 5 ಲಕ್ಷದಿಂದ 10 ಲಕ್ಷ ರೂ. ವಾರ್ಷಿಕ ಆದಾಯ ಗಳಿಸುತ್ತಿರುವವರಿಗೆ ಶೇ.10ರಷ್ಟುತೆರಿಗೆ ವಿಧಿಸುವಂತೆ ಸರ್ಕಾರ ರಚಿಸಿದ ಉನ್ನತ ಮಟ್ಟದ ಸಮಿತಿಯೊಂದು ಶಿಫಾರಸು ಮಾಡಿದೆ. ಸದ್ಯ ಈ ಹಂತದ ತೆರಿಗೆದಾರರಿಗೆ ಶೇ.20 ತೆರಿಗೆ ವಿಧಿಸಲಾಗುತ್ತಿದ್ದು, ಅರ್ಧದಷ್ಟು ಕಡಿಮೆಯಾಗಲಿದೆ. ನೇರ ತೆರಿಗೆ ಸಂಹಿತೆ ಪರಿಷ್ಕರಣೆ ಸಂಬಂಧ ನೇಮಕ ಮಾಡಲಾಗಿದ್ದ ಸಿಬಿಡಿಟಿ ಅಧ್ಯಕ್ಷ ಅಖೀಲೇಶ್‌ ರಂಜನ್‌ ನೇತೃತ್ವದ ಕಾರ್ಯ ಪಡೆ ತನ್ನ ವರದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ […]