ರಾಜ್ಯದ ದೇವಾಲಯಗಳಲ್ಲಿ ಇ-ಹುಂಡಿ ವ್ಯವಸ್ಥೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ 30: ರಾಜ್ಯದ ಎಲ್ಲ ದೇವಾಲಯಗಳ ಹುಂಡಿಯಲ್ಲಿ ಸಂಗ್ರಹವಾಗುವ ಮೊತ್ತವನ್ನು ಅತ್ಯಂತ ನಿಖರವಾಗಿ ಎಣಿಕೆ ಮಾಡುವ ಇ- ಹುಂಡಿ ವ್ಯವಸ್ಥೆಯನ್ನು ಇ – ಗರ್ವನೆನ್ಸ್ ಇಲಾಖೆ ಮೂಲಕ ಜಾರಿಗೊಳಿಸಲಾಗುವುದು ಎಂದು ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ, ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ಪರಿಶೀಲಿಸಿ ಮಾತನಾಡಿದರು. ದೇವಾಲಯದ ಹುಂಡಿಗಳಲ್ಲಿ ಭಕ್ತರು ಹಣ ಹಾಕಿದ ಕೂಡಲೇ, ಹಾಕಿದ ಹಣದ ನಿರ್ದಿಷ್ಟ ಮೊತ್ತವನ್ನು ತೋರಿಸುವ ಹುಂಡಿಗಳನ್ನು ಅಳವಡಿಸಲು […]

ಮೀನುಗಾರಿಕೆ ಹಾಗೂ ಬಂದರು ಇಲಾಖೆ ಕಾಮಗಾರಿಗಳ ಸ್ಥಳ ಪರಿಶೀಲನೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ 30: ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಬಂದರು ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ವಿಳಂಬವಾಗಿದ್ದು, ಈ ಬಗ್ಗೆ ರಾಜ್ಯಮಟ್ಟದ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೊಡೇರಿಯಲ್ಲಿ 33 ಕೋಟಿ ರೂ ವೆಚ್ಚದ ಬ್ರೇಕ್ ವಾಟರ್ ಕಾಮಗಾರಿ […]

ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡದಿದ್ದರೆ ಮನುಜ ಕುಲಕ್ಕೆ ಸಂಕಷ್ಟ: ಜಿ. ಜಗದೀಶ್

ಉಡುಪಿ: ಅರಣ್ಯ ಪ್ರದೇಶದ ವಿಸ್ತೀರ್ಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅರಣ್ಯವನ್ನು ಚಿತ್ರದಲ್ಲಿ ನೋಡುವ ಪರಿಸ್ಥಿತಿ ಎದುರಾಗಿದೆ. ಇನ್ನೂ ನಾವು ಅರಣ್ಯ ಸಂರಕ್ಷಣೆಗೆ ಒತ್ತು ನೀಡದಿದ್ದರೆ ಮುಂದಿನ ದಿನಗಳಲ್ಲಿ ಮನುಷ್ಯ ಇನ್ನಷ್ಟು ಸಂಕಷ್ಟ ಎದುರಿಸಬೇಕಾದ ಸ್ಥಿತಿ ನಿರ್ಮಾಣ ಆಗಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಕಳವಳ ವ್ಯಕ್ತಪಡಿಸಿದರು. ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಅರಣ್ಯ ಇಲಾಖೆ ಹಾಗೂ ಉಡುಪಿ ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ […]

ಉದ್ಯಾವರ‌: ಫ್ರೆಂಡ್ಸ್‌ ಗಾರ್ಡನ್‌ ಸಮಿತಿಯಿಂದ 25ನೇ ವರ್ಷದ ಗಣೇಶೋತ್ಸವ

ಉಡುಪಿ: ಉಡುಪಿ ಉದ್ಯಾವರದ -ಫ್ರೆಂಡ್ಸ್‌ ಗಾರ್ಡನ್‌ ಸಾರ್ವಜನಿಕ ಬಾಲ ಗಣೇಶೋತ್ಸವ ಸಮಿತಿಯ‌ 25ನೇ ವರ್ಷದ ಗಣೇಶೋತ್ಸವ ಸೆಪ್ಟೆಂಬರ್‌ 2ರಿಂದ 4ರ ವರೆಗೆ ನಡೆಯಲಿದೆ. ಸೆ. 2ರಂದು ಬೆಳಿಗ್ಗೆ 10.30ಕ್ಕೆ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ಯೋಗೀಶ್‌ ಎಸ್‌. ಕೋಟ್ಯಾನ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ  ತಿಳಿದರು. ಆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 8ಗಂಟೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ವೈ.ಎನ್‌. ಶೆಟ್ಟಿ ರಜತ ಮಹೋತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. […]

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹುಟ್ಟೂರು ಸವಣೂರಿಗೆ ಭೇಟಿ

ಮಂಗಳೂರು: ರಾಜ್ಯ ಬಿಜೆಪಿ ನೂತನ‌ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಹುಟ್ಟೂರಾದ ಸವಣೂರಿಗೆ ಶುಕ್ರವಾರ ಭೇಟಿ ನೀಡಿದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನೂತನ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಿದರು. ಅನಂತರ ಸವಣೂರು ಜೈನ ಬಸದಿಯಲ್ಲಿ ದೇವಿ ಪದ್ಮಾಂಬಿಕೆಗೆ ಪೂಜೆ ಸಲ್ಲಿಸಿ ವಾಹನ ಜಾಥಾದ ಮುಖಾಂತರ ತನ್ನ ತರವಾಡು ಮನೆ ಕುಂಜಾಡಿಗೆ ಆಗಮಿಸಿದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್ ಅವರನ್ನು ಕುಟುಂಬ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಅನಂತರ ಕುಂಜಾಡಿ ಕುಟುಂಬಸ್ಥರು ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಳಿನ್ […]